ಮೂರು ರಾಜ್ಯಗಳ ವಿಧಾನಸಭಾ ಚುನಾವಣೆಗೆ ಇಂದು ದಿನಾಂಕ ಘೋಷಣೆ. ನವದೆಹಲಿ,ಜನವರಿ,18,2023(..):ನಾಗಾಲ್ಯಾಂಡ್, ಮೇಘಾಲಯ ಹಾಗೂ ತ್ರಿಪುರಾ ವಿಧಾನಸಭೆ ಚುನಾವಣೆಗೆ ಇಂದು ಕೇಂದ್ರ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಲಿದೆ. ಇಂದು ಮಧ್ಯಾಹ್ನ 2.30ಕ್ಕೆ ಸುದ್ದಿಗೋಷ್ಠಿ ನಡೆಸಲಿರುವ ಕೇಂದ್ರ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ದಿನಾಂಕ ಪ್ರಕಟಿಸಲಿದ್ದಾರೆ. ಈ ವರ್ಷ ಕರ್ನಾಟಕ ಸೇರಿದಂತೆ 9 ರಾಜ್ಯಗಳ ವಿಧಾನಸಭೆಗೆ ಚುನಾವಣೆ ನಡೆಯಬೇಕಿದೆ. ಈ ನಡುವೆ ಇಂದು ಮೂರು ರಾಜ್ಯಗಳಿಗೆ ಚುನಾವಣೆ ಘೋಷಣೆಯಾಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ. 2024 ರಲ್ಲಿ ಲೋಕಸಭೆಗೆ ಚುನಾವಣೆ ನಡೆಯಲಿದ್ದು, ಹೀಗಾಗಿ ಈ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆ ಮಹತ್ವ ಪಡೆದಿದೆ. : – – - – .