ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಅಧಿಕಾರಾವಧಿ ವಿಸ್ತರಣೆ: ಗೃಹ ಸಚಿವ ಅಮಿತ್ ಶಾ ಘೋಷಣೆ. ನವದೆಹಲಿ ,ಜನವರಿ,14,2023(..):ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಅವರ ಅಧಿಕಾರಾವಧಿಯನ್ನು ವಿಸ್ತರಿಸಲಾಗಿದೆ. ಈ ಕುರಿತು ಇಂದು ನಡೆದ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಅಂಗೀಕರಿಸಿದೆ. ಜೂನ್ 2024 ರವರೆಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಅವರ ಅಧಿಕಾರಾವಧಿ ವಿಸ್ತರಿಸಲಾಗಿದ್ದು, ಈ ಕುರಿತು ಗೃಹ ಸಚಿವ ಅಮಿತ್ ಶಾ ಪತ್ರಿಕಾಗೋಷ್ಠಿಯಲ್ಲಿ ಘೋಷಿಸಿದರು. ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರ ಅಧಿಕಾರಾವಧಿಯನ್ನು ಜೂನ್ 2024 ರವರೆಗೆ ವಿಸ್ತರಿಸಲಾಗಿದ್ದು, ಈ ನಿರ್ಧಾರವನ್ನ ಬಿಜೆಪಿ ಕಾರ್ಯಕಾರಿಣಿ ಅಂಗೀಕರಿಸಿದೆ. ಮುಂದಿನ ಲೋಕಸಭೆ ಚುನಾವಣೆಯನ್ನ ಜೆಪಿ ನಡ್ಡಾ ಅವರ ನೇತೃತ್ವದಲ್ಲಿ ನಡೆಸಲಾಗುವುದು ಎಂದು ತಿಳಿಸಿದರು. ಜೆಪಿ ನಡ್ಡಾ ಜನವರಿ 2020 ರಲ್ಲಿ ಮೂರು ವರ್ಷಗಳ ಅವಧಿಗೆ ಪಕ್ಷದ ಮುಖ್ಯಸ್ಥರಾದರು. ಅವರ ಅಧಿಕಾರಾವಧಿ ಈ ತಿಂಗಳು ಕೊನೆಗೊಳ್ಳಬೇಕಿತ್ತು. ಈಗ ಪಕ್ಷವು ಸಾರ್ವತ್ರಿಕ ಚುನಾವಣೆಯ ನಂತರ ಅವಧಿಯನ್ನ 2024 ರವರೆಗೆ ವಿಸ್ತರಿಸಿದೆ. : - - - –