ಸ್ಯಾಂಟ್ರೋ ರವಿ ಪ್ರಕರಣ ಸಿಐಡಿಗೆ ವರ್ಗಾವಣೆ. ಮೈಸೂರು,ಜನವರಿ,16,2023(..):ವರ್ಗಾವಣೆ, ವೆಶ್ಯಾವಾಟಿಕೆ ದಂಧೆ ಆರೋಪದಡಿ ಬಂಧಿತನಾಗಿ ನ್ಯಾಯಾಂಗ ಬಂಧನದಲ್ಲಿರುವಸ್ಯಾಂಟ್ರೋ ರವಿ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿದೆ. ಈ ಕುರಿತು ಗೃಹ ಸಚಿವ ಅರಗ ಜ್ಞಾನೇಂದ್ರ ಮಾಧ್ಯಮ ಪ್ರಕಟಣೆ ಮೂಲಕ ಮಾಹಿತಿ ನೀಡಿದ್ದಾರೆ. ಮೈಸೂರು ನಗರ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದು, ಈ ಪ್ರಕರಣವನ್ನ ಸಿಐಡಿಗೆ ವರ್ಗಾವಣೆ ಮಾಡುವಂತೆ ರಾಜ್ಯ ಸರ್ಕಾರ ಸೂಚನೆ ನೀಡಿದೆ. ಸ್ಯಾಂಟ್ರೊ ರವಿ ವಿರುದ್ಧದ ದೂರುಗಳ ಬಗ್ಗೆ ತನಿಖೆ ನಡೆಸಲು ರಾಜ್ಯ ಸರ್ಕಾರದಿಂದ ಸಿಐಡಿ ಪೊಲೀಸರಿಗೆ ನಿರ್ದೇಶನ ನೀಡಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಡಿಜಿ&ಐಜಿಪಿ ಆದೇಶದಂತೆ ಇಂದು ಸಂಜೆ ಅಥವಾ ನಾಳೆ ಸಿಐಡಿಗೆ ಅಧಿಕೃತವಾಗಿ ಸ್ಯಾಂಟ್ರೊ ರವಿ ಪ್ರಕರಣ ವರ್ಗಾವಣೆ ಅಗಲಿದೆ. ಸ್ಯಾಂಟ್ರೋ ರವಿ ವಿರುದ್ಧ ಪತ್ನಿ ದೂರು ನೀಡಿದ್ದರು. ಪೊಲೀಸ್ ಟ್ರಾನ್ಸ್​ಫರ್​​​ ದಂಧೆ ಸೇರಿ ಹಲವು ಆರೋಪವಿದ್ದು, ಈ ಹಿನ್ನೆಲೆಯಲ್ಲಿ ಸರ್ಕಾರ ಸಿಐಡಿ ತನಿಖೆಗೆ ವಹಿಸಿದೆ. : –- – .