ಪ್ರಧಾನಿ ಮೋದಿ ರೋಡ್ ಶೋ ವೇಳೆ ಭದ್ರತಾ ಲೋಪ. ಹುಬ್ಬಳ್ಳಿ,ಜನವರಿ,12,2023(..):ರಾಷ್ಟ್ರೀಯ ಯುವಜನೋತ್ಸವ ಉದ್ಘಾಟನೆಗೆ ಬಂದಿರುವ ಪ್ರಧಾನಿ ಮೋದಿ ಅವರ ರೋಡ್ ಶೋ ವೇಳೆ ಭದ್ರತಾ ವೈಪಲ್ಯ ಕಂಡು ಬಂದಿದೆ. ಯುವ ಜನೋತ್ಸವದಲ್ಲಿ ಪಾಲ್ಗೊಳ್ಳಲು ಹುಬ್ಬಳ್ಳಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ವಿಮಾನ ನಿಲ್ದಾಣದಿಂದ ರೈಲ್ವೆ ಮೈದಾನದವರೆಗೆ ರೋಡ್ ಶೋ ನಡೆಸಿದರು. ಈ ವೇಳೆಯಲ್ಲಿ ಭದ್ರತಾ ಲೋಪ ಕಂಡು ಬಂದಿದೆ. ಭದ್ರತೆಯನ್ನು ಮೀರಿದ ಯುವಕನೋರ್ವ ಪ್ರಧಾನಿ ಮೋದಿಗೆ ಹಾರ ಹಾಕಲು ಯತ್ನಿಸಿದ್ದಾನೆ. ಇದನ್ನು ಗಮನಿಸಿದ ಪೊಲೀಸರು ಕೂಡಲೇ ಯುವಕನನ್ನು ತಡೆದು ವಶಕ್ಕೆ ಪಡೆದಿರುವುದಾಗಿ ಮಾಹಿತಿ ತಿಳಿದು ಬಂದಿದೆ. ಯುವಜನೋತ್ಸವಕ್ಕೆ ಪ್ರಧಾನಿ ಮೋದಿ ಚಾಲನೆ ನೀಡಿದ್ದಾರೆ. : - –- - - -