ರಾಷ್ಟ್ರೀಯ ಯುವಜನೋತ್ಸವ ಉದ್ಘಾಟಿಸಲು ಇಂದು ಹುಬ್ಬಳ್ಳಿಗೆ ಪ್ರಧಾನಿ ಮೋದಿ. ಹುಬ್ಬಳ್ಳಿ,ಜನವರಿ12,2024(..):ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಇಂದು ನಡೆಯುವ 26ನೇ ರಾಷ್ಟ್ರೀಯ ಯುವಜನೋತ್ಸವಕ್ಕೆ ಸಿದ್ದತೆ ನಡೆಸಲಾಗಿದ್ದು ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಇಂದು ಹುಬ್ಬಳ್ಳಿಯ ರೈಲ್ವೆ ಮೈದಾನದಲ್ಲಿ ನಡೆಯುವ ಉದ್ಘಾಟನಾ ಸಮಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದು ಎಲ್ಲೆಡೆ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಇಂದು ಮಧ್ಯಾಹ್ನ 3.40 ಕ್ಕೆ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಪ್ರಧಾನಿ ಮೋದಿ ಅವರನ್ನ ಸಿಎಂ ಬಸವರಾಜ್ ಬೊಮ್ಮಾಯಿ ಸ್ವಾಗತಿಸಲಿದ್ದಾರೆ. ನಂತರ 3.45 ರಿಂದ 4 ಗಂಟೆವರೆಗೂ ಮೋದಿ ರೋಡ್ ಶೋ‌ ನಡೆಸಲಿದ್ದು, ಏರ್‌ಪೋರ್ಟ್‌ನಿಂದ ಗೋಕುಲ್ ರಸ್ತೆ, ಅಕ್ಷಯ ಪಾರ್ಕ್, ಹೊಸೂರ್ ಸರ್ಕಲ್, ಐಬಿ ಸರ್ಕಲ್, ದೇಶಪಾಂಡೆ ನಗರ, ಕೋರ್ಟ್ ಸರ್ಕಲ್ ಮೂಲಕ ಹುಬ್ಬಳ್ಳಿ ರೈಲ್ವೆ ಮೈದಾನಕ್ಕೆ ಮೋದಿ ಪ್ರವೇಶಿಸಿಲಿದ್ದಾರೆ. ಸಂಜೆ 4 ಗಂಟೆ ವೇಳೆಗೆ ರಾಷ್ಟ್ರೀಯ ಯುವಜನೋತ್ಸವ ಕಾರ್ಯಕ್ರಮಕ್ಕೆ ಮೋದಿ ಚಾಲನೆ ನೀಡಲಿದ್ದಾರೆ. ನಂತರ ಯುವಸಮೂಹವನ್ನು ಉದ್ದೇಶಿಸಿ ಮಾತನಾಡಿ, ಸಂಜೆ 5.35 ಕ್ಕೆ ಹುಬ್ಬಳ್ಳಿ ಏರ್‌ಪೋರ್ಟ್‌ನಿಂದ ದೆಹಲಿಗೆ ಪ್ರಯಾಣ ಬೆಳಸಲಿದ್ದಾರೆ. : – –- – .