ಮೊದಲ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಶತಕ: ಶ್ರೀಲಂಕಾ ಗೆಲ್ಲಲು 374 ರನ್ ಗುರಿ. ಗುವಾಹಟಿ,ಜನವರಿ,10,2023(..):ಗುವಾಹಟಿಯ ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಶ್ರೀಲಂಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಮಾಜಿ ಕ್ಯಾಪ್ಟನ್ ವಿರಾಟ್ ಕೊಹ್ಲಿ ಭರ್ಜರಿ ಶತಕ ಸಿಡಿಸಿದ್ದಾರೆ. ಟಾಸ್ ಗೆದ್ದು ಶ್ರೀಲಂಕಾ ಬೌಲಿಂಗ್ ಆಯ್ದುಕೊಂಡಿತು ಭಾರತದ ಪರ ಆರಂಭಿಕ ಆಟಗಾರರಾಗಿ ಕಣಕ್ಕಿಳಿದ ರೋಹಿತ್ ಶರ್ಮಾ ಹಾಗೂ ಶುಬ್ಮನ್ ಗಿಲ್ ಅದ್ಭುತ ಆರಂಭ ಒದಗಿಸಿಕೊಟ್ಟರು. ರೋಹಿತ್ ಶರ್ಮಾ 83 ಹಾಗೂ ಶುಬ್ಮನ್ ಗಿಲ್ 70 ರನ್ ಬಾರಿಸಿದರು. ಗಿಲ್ ಔಟ್ ಆಗುತ್ತಿದ್ದಂತೆ ಕ್ರೀಸ್ ಗಿಳಿದ ವಿರಾಟ್ ಕೊಹ್ಲಿ ಭರ್ಜರಿ ಬ್ಯಾಟಿಂಗ್ ನಡೆಸಿ ಶತಕ ಸಿಡಿದರು. ಏಕದಿನ ಕ್ರಿಕೆಟ್ ನಲ್ಲಿ 45ನೇ ಶತಕವನ್ನ ಪೂರೈಸಿದರು. ಶ್ರೀಲಂಕಾ ವಿರುದ್ದ ಇದು 9ನೇ ಶತಕವಾಗಿದೆ. 87 ಬಾಲ್ ಗೆ 113 ರನ್ ಸಿಡಿಸಿ ವಿರಾಟ್ ಕೊಹ್ಲಿ ಔಟ್ ಆದರು. ಅಂತಿಮವಾಗಿ ಭಾರತ 50 ಓವರ್ ಗಳಲ್ಲಿ 373 ರನ್ ಬಾರಿಸಿದ್ದು ಶ್ರೀಲಂಕಾಗೆ 374 ರನ್ ಟಾರ್ಗೆಟ್ ನೀಡಿದೆ. : - – - -374 -