ಸಿದ್ಧರಾಮಯ್ಯ ವರುಣಾದಿಂದ ಸ್ಪರ್ಧಿಸಬೇಕೆಂಬ ಆಸೆ ಇತ್ತು- ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧೃವನಾರಾಯಣ್ ಮೈಸೂರು,ಜನವರಿ,10,2023(..):ರಾಜ್ಯ ವಿಧಾನಸಭಾ ಚುನಾವಣೆಗೆ ಕೋಲಾರದಿಂದ ಸ್ಪರ್ಧಿಸುವುದಾಗಿ ಈಗಾಗಲೇ ಮಾಜಿ ಸಿಎಂ ಸಿದ್ಧರಾಮಯ್ಯ ಘೋಷಣೆ ಮಾಡಿದ್ದು ಈ ಕುರಿತು ಪ್ರತಿಕ್ರಿಯಿಸಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧೃವನಾರಾಯಣ್, ಸಿದ್ದರಾಮಯ್ಯ ಅವರು ವರುಣಾದಿಂದ ಸ್ಪರ್ಧಿಸಬೇಕೆಂಬ ಆಸೆ ನಮಗೆ ಇತ್ತು ಎಂದಿದ್ದಾರೆ. ಮೈಸೂರಿನಲ್ಲಿ ಇಂದು ಮಾತನಾಡಿದ ಆರ್.ಧೃವನಾರಾಯಣ್, ಸಿದ್ಧರಾಮಯ್ಯ ಯಾವುದೇ ಕ್ಷೇತ್ರದಿಂದ ಸ್ಪರ್ಧಿಸಿದರೂ ನಮ್ಮವರೇ. ಸಿದ್ದರಾಮಯ್ಯ ಜಿಲ್ಲೆಗೆ ಸೀಮಿತರಾದವರಲ್ಲ. ರಾಜ್ಯಕ್ಕೆ ಸೀಮಿತರಾದವರು. ಸಿದ್ದರಾಮಯ್ಯ ವರುಣಾದಿಂದ ಸ್ಪರ್ಧೆ ಮಾಡಬೇಕೆಂಬ ಆಸೆ ಇತ್ತು. ವರುಣಾ ಕ್ಷೇತ್ರದ ಶಾಸಕ ಯತೀಂದ್ರಗೂ ಅದೇ ಆಸೆ ಇತ್ತು ಎಂದರು. ಹಾಗೆಯೇ ಕುಟುಂಬಕ್ಕೆ ಒಂದೇ ಟಿಕೆಟ್ ಎಂಬ ನಿಯಮ ಹಾಲಿ ಶಾಸಕರಿಗೆ ಅನ್ವಯವಾಗುವುದಿಲ್ಲ ಎಂದು ಆರ್.ಧೃವನಾರಾಯಣ್ ತಿಳಿಸಿದರು. : – – - - - -.