5 ಸದಸ್ಯರ ನೂತನ ಆಯ್ಕೆ ಸಮಿತಿ ಪ್ರಕಟಿಸಿದ ಬಿಸಿಸಿಐ. ಮುಂಬೈ,ಜನವರಿ,7,2023(..):ಆಸ್ಟ್ರೇಲಿಯಾದಲ್ಲಿ ನಡೆದ ಟಿ-20 ವಿಶ್ವಕಪ್ ​ನಲ್ಲಿ ಭಾರತ ತಂಡ ಕಳಪೆ ಪ್ರದರ್ಶನ ನೀಡಿ ಸೆಮಿಫೈನಲ್ ನಲ್ಲಿ ಸೋತ ಬಳಿಕ ಇಡೀ ಆಯ್ಕೆ ಮಂಡಳಿಯನ್ನೇ ವಿಸರ್ಜನೆ ಮಾಡಿದ್ದ ಬಿಸಿಸಿಐ ಇದೀಗ ಭಾರತ ಕ್ರಿಕೆಟ್ ತಂಡದ ನೂತನ ಆಯ್ಕೆ ಸಮಿತಿಯನ್ನು ಪ್ರಕಟಿಸಿದೆ. ಹೊಸ ಆಯ್ಕೆ ಸಮಿತಿಯಲ್ಲಿ ( ) ಸ್ಥಾನ ಪಡೆದಿರುವ 5 ಸದಸ್ಯರ ಹೆಸರನ್ನು ಪ್ರಕಟಿಸಿರುವ ಬಿಸಿಸಿಐ, ಇದರಲ್ಲಿ ನಾಲ್ವರು ಹೊಸಬರಿಗೆ ಅವಕಾಶ ನೀಡಿದರೆ, ಮುಖ್ಯ ಆಯ್ಕೆದಾರನ ಸ್ಥಾನಕ್ಕೆ ಈ ಹಿಂದೆ ಇದೇ ಹುದ್ದೆಯಲ್ಲಿದ್ದ ಚೇತನ್ ಶರ್ಮಾ ಅವರನ್ನು ಮರು ಆಯ್ಕೆ ಮಾಡಿದೆ. ಆಯ್ಕೆ ಸಮಿತಿಯ ಮುಖ್ಯಸ್ಥರನ್ನಾಗಿ ಚೇತನ್ ಶರ್ಮಾ ಹಾಗೂ ಸದಸ್ಯರಾಗಿ ಮಾಜಿ ಟೆಸ್ಟ್ ಕ್ರಿಕೆಟಿಗರಾದ ಸಲೀಲ್ ಅಂಕೋಲಾ, ಶಿವಸುಂದರ್ ದಾಸ್, ಸುಬ್ರೋತೊ ಬ್ಯಾನರ್ಜಿ ಮತ್ತು ಶ್ರೀಧರನ್ ಶರತ್ ಸ್ಥಾನ ಪಡೆದಿದ್ದಾರೆ. : - - - -5