ಕ್ರಿಕೆಟರ್ ರಿಷ‍ಬ್ ಪಂತ್ ಮೊಣಕಾಲು ಶಸ್ತ್ರಚಿಕಿತ್ಸೆ ಯಶಸ್ವಿ. ಮುಂಬೈ,ಜನವರಿ,7,2023(..):ಡಿಸೆಂಬರ್ 30 ರಂದು ಕಾರು ಅಪಘಾತದಲ್ಲಿ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಭಾರತೀಯ ಕ್ರಿಕೆಟರ್ ರಿಷಬ್ ಪಂತ್ ಗೆ ಮೊಣಕಾಲು ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಡಿಸೆಂಬರ್ 30 ರಂದು ಉತ್ತರಖಂಡ್ ರೂರ್ಕಿ ಬಳಿ ಕಾರು ಡಿವೈಡರ್ ಗೆ ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ರಿಷಬ್ ಪಂತ್ ಗಂಭೀರ ಗಾಯಗೊಂಡಿದ್ದರು. ನಂತರ ಡೆಹ್ರಾಡೂನ್ ​ನ ಮ್ಯಾಕ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಿಷಬ್ ಪಂತ್ ಅವರನ್ನು ಜ.4ರಂದು ಹೆಚ್ಚಿನ ಚಿಕಿತ್ಸೆಗಾಗಿ ಡೆಹ್ರಾಡೂನ್​ನಿಂದ ಮುಂಬೈಗೆ ಶಿಫ್ಟ್ ಮಾಡಲಾಗಿತ್ತು. ಇದೀಗ ಮಾಹಿತಿ ಪ್ರಕಾರ ರಿಷಬ್ ಪಂತ್ ಅವರಿಗೆಯಶಸ್ವಿಯಾಗು ಮೊಣಕಾಲು ಶಸ್ತ್ರಚಿಕತ್ಸೆ ನೆರವೇರಿಸಲಾಗಿದೆ ಎನ್ನಲಾಗಿದೆ. ಅಪಘಾತದ ವೇಳೆ ಪಂತ್ ಅವರ ಬಲ ಮೊಣಕಾಲಿಗೆ ತೀವ್ರ ಬಿಟ್ಟಿದ್ದರಿಂದ ಅವರಿಗೆ ಶಸ್ತ್ರಚಿಕಿತ್ಸೆ ಅವಶ್ಯಕವಾಗಿತ್ತು. ಹೀಗಾಗಿ ರಿಷಬ್ ಪಂತ್ ಅವರಿಗೆ ಕೋಕಿಲಾಬೆನ್ ಅಂಬಾನಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಯನ್ನು ಮಾಡಲಾಗಿದೆ. : - ’ –- -.