ಸ್ಯಾಂಟ್ರೋ ರವಿ ವಿರುದ್ಧ ಸೂಕ್ತ ತನಿಖೆ ನಡೆಸುವಂತೆ ಮೈಸೂರು ಪೊಲೀಸರಿಗೆ ಸೂಚಿಸಿದ್ದೇನೆ- ಸಿಎಂ ಬೊಮ್ಮಾಯಿ. ಮೈಸೂರು,ಜನವರಿ,7,2022(..):ಸ್ಯಾಂಟ್ರೋ ರವಿ ಜೊತೆ ಎಲ್ಲಾ ಪಕ್ಷಗಳಿಗೂ ಸಂಪರ್ಕ ಇದೆ. ಸ್ಯಾಂಟ್ರೋ ರವಿ ವಿರುದ್ಧ ಸೂಕ್ತ ತನಿಖೆ ನಡೆಸುವಂತೆ ಮೈಸೂರು ಪೊಲೀಸರಿಗೆ ಸೂಚಿಸಿದ್ದೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು. ಮೈಸೂರಿನಲ್ಲಿ ಇಂದು ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಸ್ಯಾಂಟ್ರೋ ರವಿ ವಿರುದ್ದ ದಾಖಲಾದ ಕೇಸ್ ಬಗ್ಗೆ ತನಿಖೆ ನಡೆಯುತ್ತದೆ. ತನಿಖೆ ಬಳಿಕ ಎಲ್ಲಾ ಸತ್ಯಾಸತ್ಯತೆ ಹೊರಬರಲಿದೆ. ಕಳೆದ 20 ವರ್ಷಗಳಿಂದ ಎಲ್ಲಾ ನಾಯಕರ ಜೊತೆ ರವಿ ನಂಟು ಹೊಂದಿದ್ದಾನೆ. ಮಹಿಳೆ ದೂರು ಆಧರಿಸಿ ರವಿ ವಿರುದ್ದ ತನಿಖೆ ಆರಂಭವಾಗಿದೆ . ಸ್ಯಾಂಟ್ರೋ ರವಿ ವಿರುದ್ ನಿಖರವಾಗಿ ತನಿಖೆ ಮಾಡುತ್ತೇವೆ. ಮೈಸೂರು ಪೊಲೀರಿಗೆ ಸೂಕ್ತ ತನಿಖೆ ನಡೆಸಲು ಸೂಚಿಸಿದ್ದೇನೆ. ಸ್ಯಾಂಟ್ರೋ ರವಿ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ ಎಂದರು. ಗಣರಾಜ್ಯೋತ್ಸವಕ್ಕೆ ಕರ್ನಾಟಕದ ಸ್ತಬ್ಧ ಚಿತ್ರಕ್ಕೆ ನಿರಾಕರಣೆ ಕುರಿತು ಪ್ರತಿಕ್ರಿಯಿಸಿದ ಸಿಎಂ ಬೊಮ್ಮಾಯಿ, ಪ್ರದರ್ಶನಕ್ಕೆ ಅನುಮತಿ ಪಡೆಯುತ್ತೇವೆ. ಈ ಬಗ್ಗೆ ಕೇಂದ್ರ ಸರ್ಕಾರದ ಜೊತೆ ಚರ್ಚೆ ಮಾಡುತ್ತೇವೆ. ಗಣರಾಜ್ಯೋತ್ಸವದಲ್ಲಿ ನಮ್ಮ ಸ್ತಬ್ದಚಿತ್ರ ಪ್ರದರ್ಶನಗೊಳ್ಳಲಿದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು. : –- - - .