ಮುಂದಿನ ತಿಂಗಳಲ್ಲಿ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ಲೋಕಾರ್ಪಣೆ- ಕೇಂದ್ರ ಸಚಿವ ನಿತಿನ್ ಗಡ್ಕರಿ. ಬೆಂಗಳೂರು,ಜನವರಿ,5,2023(..):ಮುಂದಿನ ತಿಂಗಳಲ್ಲಿ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ಲೋಕಾರ್ಪಣೆಯಾಗಲಿದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದರು. ಇಂದು ಹೆಲಿಕಾಪ್ಟರ್ ಮೂಲಕ ಆಗಮಿಸಿದ ಕೇಂದ್ರ ಸಚಿವ ನಿತಿನ್ ಗಡ್ಕರಿ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ಪರಿಶೀಲಿಸಿದರು. ಈ ವೇಳೆ ಸಚಿವರಾದ ಅಶ್ವಥ್ ನಾರಾಯಣ್,ಗೋಪಾಲಯ್ಯ, ಎಂಎಲ್ ಸಿ ಸಿ.ಪಿ ಯೋಗೇಶ್ವರ್, ಸಂಸದ ಡಿ.ಕೆ ಸುರೇಶ್ ಉಪಸ್ಥಿತರಿದ್ದರು. ಹೆದ್ದಾರಿ ಪರಿಶೀಲನೆ ಬಳಿಕ ಮಾತನಾಡಿದ ನಿತಿನ್ ಗಡ್ಕರಿ, 9 ಸಾವಿರ ಕೋಟಿ ರೂ. ವೆಚ್ಚಲ್ಲಿ ಹೆದ್ದಾರಿ ನಿರ್ಮಾಣ ಮಾಡಿದ್ದೇವೆ. ಇನ್ನೂ ಸ್ವಲ್ಪ ಕಾಮಗಾರಿ ಬಾಕಿ ಇದೆ. ಸದ್ಯದಲ್ಲೇ ಕಾಮಗಾರಿ ಪೂರ್ಣಗೊಳ್ಳಲಿದೆ. ಮುಂದಿನ ತಿಂಗಳು ಹೈವೆ ಲೋಕಾರ್ಪಣೆಯಾಗಲಿದೆ. 1.20 ನಿಮಿಷದಲ್ಲಿ ಬೆಂಗಳೂರು-ಮೈಸೂರುಗೆ ಹೋಗಬಹುದು ಎಂದರು. : -- - – – - - .