ಈ ತಿಂಗಳ ಅಂತ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ- ಮಾಜಿ ಸಿಎಂ ಸಿದ್ಧರಾಮಯ್ಯ. ತುಮಕೂರು,ಜನವರಿ,4,2022(..):ರಾಜ್ಯ ವಿಧಾನಸಭಾ ಚುನಾವಣೆಗೆ ಈ ತಿಂಗಳ ಅಂತ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಹೇಳಿದರು. ತುಮಕೂರು ಜಿಲ್ಲೆ ತುರುವೇಕೆರೆಯಲ್ಲಿ ಮಾತನಾಡಿದ ಮಾಜಿ ಸಿಎಂ ಸಿದ್ಧರಾಮಯ್ಯ, ಈ ತಿಂಗಳ ಅಂತ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಲಿದೆ. ಮೊದಲ ಪಟ್ಟಿಯಲ್ಲಿ 150 ಅಭ್ಯರ್ಥಿಗಳ ಘೋಷಣೆಯಾಗಲಿದೆ ಎಂದರು. ರಾಮನಗರದಲ್ಲಿ ರಾಮಮಂದಿರ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಿದ್ಧರಾಮಯ್ಯ, ನಮ್ಮೂರಲ್ಲಿ ರಾಮಮಂದಿರ ಕಟ್ಟಿಲ್ವಾ..? ಮಹಾತ್ಮ ಗಾಂಧೀಜಿ ರಾಮಭಜನೆಯನ್ನ ಶುರು ಮಾಡಿದರು ರಾಮ್ –ರಹಿಂ ಅಂತಾ ಹೇಳಿದವರು ಎಂದರು. : – – - - - -.