ನೇರ ನೇಮಕಾತಿ ಮತ್ತು ಮುಂಬಡ್ತಿ ಪ್ರಕ್ರಿಯೆಗೆ ಇಲಾಖಾ ಮುಂಬಡ್ತಿ ಸಮಿತಿ ಸಭೆ ಆಯೋಜಿಸದಂತೆ ನೀಡಲಾಗಿದ್ದ ಸುತ್ತೋಲೆ ಹಿಂಪಡೆದ ಸರ್ಕಾರ. ಬೆಂಗಳೂರು,ಡಿಸೆಂಬರ್,31,2022(..):ನೇರ ನೇಮಕಾತಿ ಮತ್ತು ಮುಂಬಡ್ತಿ ಪ್ರಕ್ರಿಯೆಗೆ ಇಲಾಖಾ ಮುಂಬಡ್ತಿ ಸಮಿತಿ ಸಭೆ ಆಯೋಜಿಸದಂತೆ ಸೂಚನೆ ನೀಡಲಾಗಿದ್ದ ಸುತ್ತೋಲೆಯನ್ನ ಸರ್ಕಾರ ಹಿಂಪಡೆದಿದೆ. ಈ ಕುರಿತು ಸುತ್ತೋಲೆ ಹೊರಡಿಸಿರುವ ಸರ್ಕಾರದ ಉಪ ಕಾರ್ಯದರ್ಶಿ ಉಮಾ ವರದಯ್ಯ, ದಿನಾಂಕ: 18.11.2022ರ ಸುತ್ತೋಲೆ ಸಂಖ್ಯೆ: ಸಿಆಸುಇ 240 ಸೆನೆನಿ 2022 ರಲ್ಲಿ ಎಲ್ಲಾ ನೇರ ನೇಮಕಾತಿ ಮತ್ತು ಮೀಸಲಾತಿ ಅನ್ವಯವಾಗುವ ವೃಂದಗಳಿಗೆ ನೀಡಲಾಗುವ ಮುಂಬಡ್ತಿ ಪ್ರಕ್ರಿಯೆಗೆ ಇಲಾಖಾ ಮುಂಬಡ್ತಿ ಸಮಿತಿ ಸಭೆಯನ್ನು ಆಯೋಜಿಸದಂತೆ ಎಲ್ಲಾ ನೇಮಕಾತಿ ಪ್ರಾಧಿಕಾರಿಗಳಿಗೆ ಸೂಚನೆಗಳನ್ನು ನೀಡಲಾಗಿದ್ದು, ಸದರಿ ದಿನಾಂಕ: 18.11.2022ರ ಸುತ್ತೋಲೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆಯಲಾಗಿದೆ. ಮೇಲ್ಕಂಡ ಸೂಚನೆಗಳು ಎಲ್ಲಾ ಸ್ವಾಯತ್ತ ಸಂಸ್ಥೆಗಳು/ ವಿಶ್ವವಿದ್ಯಾಲಯಗಳು/ ಸಾರ್ವಜನಿಕ ಉದ್ದಿಮೆ/ ಆಯೋಗ/ ನಿಗಮ ಮಂಡಳಿಗಳು ಮತ್ತು ಸರ್ಕಾರದಿಂದ ಅನುದಾನ ಪಡೆಯುವ ಸಂಸ್ಥೆಗಳಿಗೂ ಸಹ ಅನ್ವಯಿಸುತ್ತದೆ ಎಂದು ಸುತ್ತೋಲೆಯಲ್ಲಿ ತಿಳಿಸಿದ್ದಾರೆ. : – – - - - –