ತಾಯಿ ಹೀರಾಬೆನ್ ಗೆ ಅನಾರೋಗ್ಯ ಹಿನ್ನೆಲೆ: ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಪ್ರಹ್ಲಾದ್ ಮೋದಿ ಕುಟುಂಬದಿಂದ ಪೂಜೆ. ಮೈಸೂರು,ಡಿಸೆಂಬರ್,28,2022(..):ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಅನಾರೋಗ್ಯದಿಂದಾಗಿ ಅಹಮದಬಾದ್ ನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ತಾಯಿ ಬೇಗ ಗುಣಮುಖರಾಗಲೆಂದು ಪ್ರಹ್ಲಾದ್ ಮೋದಿ ಅವರು ಚಾಮುಂಡಿ ಬೆಟ್ಟದಲ್ಲಿ ಪೂಜೆ ಸಲ್ಲಿಸಿದ್ದಾರೆ. ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ಮೋದಿ ಮತ್ತು ಅವರ ಕುಟುಂಬ ಮೈಸೂರಿಗೆ ಪ್ರವಾಸಕ್ಕೆ ಬಂದಿತ್ತು. ನಿನ್ನೆ ಕಾರು ಅಪಘಾತ ಹಿನ್ನೆಲೆ ಪ್ರಹ್ಲಾದ್ ಮೋದಿ ಅವರು ಜೆಎಸ್ ಎಸ್ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಜೆಎಸ್ ಎಸ್ ಆಸ್ಪತ್ರೆಯಿಂದ ಪ್ರಹ್ಲಾದ್ ಮೋದಿ ,ಪತ್ನಿ, ಪುತ್ರ ಚಾಮುಂಡಿ ಬೆಟ್ಟಕ್ಕೆ ತೆರಳಿ ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದರು. ಅತ್ತ ಪ್ರಧಾನಿ ನರೇಂದ್ರ ಮೋದಿ ಅವರು ಅಹಮದಾಬಾದ್ ನ ಯುಎನ್ ಮೆಹ್ತಾ ಆಸ್ಪತ್ರೆಗೆ ಭೇಟಿ ನೀಡಿ ತಾಯಿಯ ಆರೋಗ್ಯ ವಿಚಾರಿಸಿದರು. : -’- - - – - .