ಬಂಡೀಪುರದಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್. ಗುಂಡ್ಲುಪೇಟೆ, ಡಿಸೆಂಬರ್,28,2022(..):ಹೊಸ ವರ್ಷ ಸಂಭ್ರಮಕ್ಕೆ ಇನ್ನೆರಡು ಮೂರು ದಿನಗಳಷ್ಟೇ ಬಾಕಿ ಇದ್ದು ಈ ನಡುವೆ ಬಂಡೀಪುರದಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್ ಹಾಕಲಾಗಿದೆ. ಡಿಸೆಂಬರ್ 31 ಹಾಗೂ ಜನವರಿ 1 ರಂದು ಅರಣ್ಯ ಇಲಾಖೆಯ ಡಾರ್ಮೆಟರಿಗಳು, ಕಾಟೇಜ್ ಗೆಸ್ಟ್ ಹೌಸ್‌ಗಳಲ್ಲಿ ವಾಸ್ತವ್ಯಕ್ಕೆ ನಿರ್ಬಂಧ ವಿಧಿಸಲಾಗಿದೆ. ಆನ್‌ ಲೈನ್ ಬುಕಿಂಗ್ ಕೂಡಾ ಬ್ಲಾಕ್ ಮಾಡಲಾಗಿದೆ. ಡಿಸೆಂಬರ್ 31 ಹಾಗೂ ಜನವರಿ 1 ಕ್ಕೆ ಬಂಡೀಪುರದಲ್ಲಿ ಮೋಜು-ಮಸ್ತಿಗಷ್ಟೇ ಬ್ರೇಕ್ ಹಾಕಲಾಗಿದ್ದು, ಎಂದಿನಂತೆ ಬೆಳಗ್ಗೆ ಹಾಗೂ ಸಂಜೆ ಸಫಾರಿ ಇರಲಿದೆ. ಆದರೆ ವಾಸ್ತವ್ಯ ಹೂಡುವಂತಿಲ್ಲ ಎಂದು ಬಂಡೀಪುರ ಡಾ.ರಮೇಶ್ ಕುಮಾರ್ ಹೇಳಿದ್ದಾರೆ. : – - – .