ಕೋವಿಡ್ ಭೀತಿ: ಸಫ್ದರ್ ಜಂಗ್ ಆಸ್ಪತ್ರೆಗೆ ಭೇಟಿ ನೀಡಿ ಮಾಕ್ ಡ್ರಿಲ್ ವೀಕ್ಷಿಸಿದ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ನವದೆಹಲಿ,ಡಿಸೆಂಬರ್,27,2022(..):ಚೀನಾ ಸೇರಿದಂತೆ ಹಲವಾರು ದೇಶಗಳಲ್ಲಿ ಕೊರೊನಾ ವೇಗವಾಗಿ ಹರಡುತ್ತಿದ್ದು ಭಾರತದಲ್ಲೂ ಹೆಚ್ಚಾಗುವ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ಇಂದು ದೇಶಾದ್ಯಂತ ಆಸ್ಪತ್ರೆಗಳಲ್ಲಿ ,ಆಕ್ ಡ್ರಿಲ್‌ ಡ್ರೈರನ್ ನಡೆಸಲಾಗುತ್ತಿದೆ. ಎಲ್ಲಾ ರಾಜ್ಯಗಳ ಆರೋಗ್ಯ ಸಚಿವರು ಅಣಕು ಡ್ರಿಲ್‌ನಲ್ಲಿ ಭಾಗವಹಿಸಲಿದ್ದಾರೆ. ಈ ನಡುವೆ ಇಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಗೆ ಭೇಟಿ ನೀಡಿ ಮಾಕ್ ಡ್ರಿಲ್ ವೀಕ್ಷಿಸಿದರು. ಮಾಕ್ ಡ್ರಿಲ್‌ ಗಳು ಎಲ್ಲಾ ಜಿಲ್ಲೆಗಳಲ್ಲಿ ಆರೋಗ್ಯ ಸೌಲಭ್ಯಗಳ ಲಭ್ಯತೆ, ಪ್ರತ್ಯೇಕ ಹಾಸಿಗೆಗಳ ಸಾಮರ್ಥ್ಯ, ಆಮ್ಲಜನಕ-ಬೆಂಬಲಿತ ಹಾಸಿಗೆಗಳು, ಐಸಿಯು (ತೀವ್ರ ನಿಗಾ ಘಟಕ) ಹಾಸಿಗೆಗಳು ಮತ್ತು ವೆಂಟಿಲೇಟರ್ ಬೆಂಬಲಿತ ಹಾಸಿಗೆಗಳಂತಹ ನಿಯತಾಂಕಗಳ ಮೇಲೆ ಕೇಂದ್ರೀಕರಿಸುತ್ತವೆ. : – - –- -