ಅವಧಿ ಪೂರ್ವ ಚುನಾವಣೆ ಇಲ್ಲ- ಸಿಎಂ ಬೊಮ್ಮಾಯಿ ಸ್ಪಷ್ಟನೆ. ಹುಬ್ಬಳ್ಳಿ, ಡಿಸೆಂಬರ್ 24,2022(..):ಅವಧಿ ಪೂರ್ವ ಚುನಾವಣೆ ಮಾಡುವ ಯೋಚನೆಯನ್ನು ನಮ್ಮ ಸರ್ಕಾರ ಅಥವಾ ಪಕ್ಷ ಮಾಡಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಜನರಿಗೆ ನಮ್ಮ ಕಾರ್ಯಕ್ರಮ ಮುಟ್ಟಿಸಿ, ಆ ವರದಿಯ ಆಧಾರದ ಮೇಲೆ ಸಕಾರಾತ್ಮಕ ಜನಾದೇಶ ಪಡೆಯಲು ನಾವು ಪ್ರಯತ್ನ ಮಾಡು ತ್ತಿದ್ದೇವೆ. ಬಹುಶಃ ಕಾಂಗ್ರೆಸ್ ಗೆ ಸಮಯ ಕೊಟ್ಟಷ್ಟು ಅವರ ಒಳಜಗಳ ಹೆಚ್ಚಾಗುತ್ತದೆ ಎಂದು ಅಭದ್ರತೆ ಕಾಡುತ್ತಿದೆ. ಚುನಾವಣೆ ಮುಂಚೆಯಾಗುತ್ತದೆ ಜಗಳವಾಡಬೇಡಿ ಎಂದು ಕಾಂಗ್ರೆಸ್ ನ ಕಾರ್ಯಕರ್ತರಿಗೆ ನೀಡಿರುವ ಸಂದೇಶ ಎಂದರು. : - – - .