ಬಿಎಂಟಿಸಿ ಬಸ್ ಗಳಲ್ಲಿ ಪ್ರಯಾಣಿಕರಿಗೆ ಮಾಸ್ಕ್ ಕಡ್ಡಾಯ. ಬೆಂಗಳೂರು,ಡಿಸೆಂಬರ್,23,2022(..):ಚೀನಾ ಸೇರಿದಂತೆ ಹಲವು ದೇಶಗಳಲ್ಲಿ ಕೊರೋನಾ ಉಲ್ಬಣವಾಗುತ್ತಿದ್ದು ದೇಶದಲ್ಲೂ ಕೊವೀಡ್ ಭೀತಿ ಎದುರಾದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುತ್ತಿದೆ. ಈ ನಡುವೆ ಬಿಎಂಟಿಸಿ ಬಸ್ ​ಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಮಾಸ್ಕ್​ ಕಡ್ಡಾಯ ಮಾಡಲಾಗಿದೆ. ಆರೋಗ್ಯ ಇಲಾಖೆ ನಿರ್ದೇಶನದಂತೆ ಈ ಕುರಿತು ಬಿಎಂಟಿಸಿ ಸುತ್ತೋಲೆ ಹೊರಡಿಸಿದ್ದು, ಬಿಎಂಟಿಸಿ ಬಸ್ ನಲ್ಲಿ ಪ್ರಯಾಣಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಬಿಎಂಟಿಸಿ ಬಸ್ ಸಿಬ್ಬಂದಿಗಳಿಗೂ ಮಾಸ್ಕ್ ಕಡ್ಡಾಯ ಬೂಸ್ಟರ್ ಡೋಸ್ ಹಾಕಿಸಿಕೊಳ್ಳುವಂತೆ ಮನವಿ ಮಾಡಿದೆ. ನಾಳೆಯಿಂದ ಬಿಎಂಟಿಸಿ ಬಸ್​ಗಳಲ್ಲಿ ಪ್ರಯಾಣಿಸಬೇಕಾದರೆ ಮಾಸ್ಕ್​ ಕಡ್ಡಾಯವಾಗಿ ಧರಸಬೇಕು. ಒಂದು ವೇಳೆ ಮಾಸ್ಕ್​ ಹಾಕಿಲ್ಲ ಅಂದ್ರೆ ಬಸ್​ ಹತ್ತುವಂತಿಲ್ಲ. : - - – - .