ಯಾತ್ರೆಗೆ ದುಡ್ಡು ಎಲ್ಲಿಂದ ಬಂತು ಎಂದು ಪ್ರಶ್ನಿಸಿದ ಸಿ.ಪಿ ಯೋಗೇಶ್ವರ್ ಗೆ ಮಾಜಿ ಸಿಎಂ ಹೆಚ್.ಡಿಕೆ ತಿರುಗೇಟು. ಮಂಡ್ಯ,ಡಿಸೆಂಬರ್,23,2022(..):ಪಂಚರತ್ನ ಯಾತ್ರೆಗೆ ದುಡ್ಡು ಎಲ್ಲಿಂದ ಬಂತು ಎಂದು ಪ್ರಶ್ನಿಸಿದ ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ. ಈ ಕುರಿತು ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ, ನಾನು ಅಕ್ರಮವಾಗಿ ಹಣ ಸಂಪಾದಿಸಿಲ್ಲ, ನಾನು ಈ ಕಾರ್ಯಕ್ರಮಕ್ಕೆ ಒಂದು ನಯಾ ಪೈಸೆ ಕೊಟ್ಟಿಲ್ಲ. ಕಾರ್ಯಕರ್ತರು ಶಾಸಕರೇ ಹಣ ಖರ್ಚು ಮಾಡಿದ್ದಾರೆ ಎಂದರು. ನಾಡಿನ ಜನತೆ ಪಂಚರತ್ನ ಯಾತ್ರೆ ಬಗ್ಗೆ ಮಾತನಾಡುತ್ತಿದ್ದಾರೆ. ಜನರು ಯಾತ್ರೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ರೈತರು, ಜನರು ಪಂಚರತ್ನಯಾತ್ರೆಗೆ ಬೆಂಬಲ ನೀಡುತ್ತಿದ್ದಾರೆ. ನೀಡುತ್ತಿದ್ದಾರೆ ಎಂದು ಹೆಚ್.ಡಿಕೆ ತಿಳಿಸಿದರು. : - - –