ಪಂಚಮಸಾಲಿ 2ಎ ಮೀಸಲಾತಿ ವಿಚಾರ : ಮಧ್ಯಂತರ ವರದಿ ಸಲ್ಲಿಸಿದ ಹಿಂದುಳಿದ ವರ್ಗಗಳ ಆಯೋಗ. ಬೆಂಗಳೂರು,ಡಿಸೆಂಬರ್,22,2022(..):ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವಂತೆ ಅಲ್ಲದೇ ಇಂದೇ ಘೋಷಣೆ ಮಾಡುವಂತೆ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಪಟ್ಟು ಹಿಡಿದಿದ್ದು ಈ ಬೆನ್ನಲ್ಲೆ ಸರ್ಕಾರಕ್ಕೆ ಹಿಂದುಳಿದ ವರ್ಗಗಳ ಆಯೋಗವು ಮಧ್ಯಂತರ ವರದಿ ಸಲ್ಲಿಸಿದೆ. ಇಂದು ಸಿಎಂ ಭೇಟಿಯಾದ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆಅವರು ಮಧ್ಯಂತರ ವರದಿ ಸಲ್ಲಿಕೆ ಮಾಡಿದರು. ಇನ್ನು ಮಧ್ಯಂತರ ವರದಿ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸುವ ಸಾಧ್ಯತೆ ಇದೆ. ಈ ಮಧ್ಯೆ ಇಂದೇ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಘೋಷಿಸುವಂತೆ ಹಠ ಹಿಡಿದಿರುವ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಮತ್ತು ಸಮುದಾಯದ ಮುಖಂಡರು ಇಂದು ಬೆಳಗಾವಿಯಲ್ಲಿ ಸಮಾವೇಶ ನಡೆಸುತ್ತಿದ್ದಾರೆ. : - 2A- - . –-.