ವಿಚಾರಣೆಗೆ ಹಾಜರಾಗುವಂತೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿಗೆ ಸಮನ್ಸ್ ಬೆಂಗಳೂರು, ಆಗಸ್ಟ್​, 8,2024 (..):ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ದ ಇಡಿ ವಿಚಾರಣೆ ಖಂಡಿಸಿ ಪ್ರತಿಭಟನೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರಿಗೆ ಆಗಸ್ಟ್ 29 ರಂದು ವಿಚಾರಣೆಗೆ ಖುದ್ದು ಹಾಜರಾಗುವಂತೆ ಕೋರ್ಟ್​ ಸಮನ್ಸ್ ನೀಡಿದೆ. ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ಸಿಎಂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಗೆ​ ಸಮನ್ಸ್ ಜಾರಿ ಮಾಡಿದೆ. ನ್ಯಾಷನಲ್​ ಹೆರಾಲ್ಡ್​ ಪತ್ರಿಕೆ ಹೆಸರಿನಲ್ಲಿ ಹಣ ಅಕ್ರಮ ವರ್ಗಾವಣೆ ಆರೋಪ ಪ್ರಕರಣದಲ್ಲಿ ರಾಹುಲ್​ ಗಾಂಧಿ ಅವರಿಗೆ ಇಡಿ ಅನಗತ್ಯವಾಗಿ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿ 2022ರಲ್ಲಿ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಬೆಂಗಳೂರಿನಲ್ಲಿ ಪ್ರತಿಭಟನೆ ಮಾಡಿದ್ದರು. ಕಾನೂನುಬಾಹಿರವಾಗಿ ಪ್ರತಿಭಟನೆ ಮಾಡಿದ್ದಾರೆಂದು ಆರೋಪದ ಮೇಲೆ ವಿಲ್ಸನ್​​​ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ವಿರುದ್ಧ ದೂರು ದಾಖಲಾಗಿತ್ತು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಅವರಿಗೆ ಆಗಸ್ಟ್​ 29ರಂದು ಖುದ್ದು ಹಾಜರಾಗುವಂತೆ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ಸಮನ್ಸ್​ ನೀಡಿದೆ. : , , ,