ಕೋವಿಡ್ ಇನ್ನೂ ಮುಗಿದಿಲ್ಲ. ಎಚ್ಚರಿಕೆಯಿಂದಿರಿ- ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯ ಮನವಿ. ನವದೆಹಲಿ,ಡಿಸೆಂಬರ್,21,2022(..):ದೇಶದಲ್ಲಿ ಕೊರೋನಾ ಇನ್ನು ಇದೆ . ಕೋವಿಡ್ ಇನ್ನೂ ಮುಗಿದಿಲ್ಲ. ಎಚ್ಚರಿಕೆಯಿಂದಿರಿ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯ ಮನವಿ ಮಾಡಿದರು. ದೇಶದ ಕೋವಿಡ್ ಪರಿಸ್ಥಿತಿಯನ್ನು ಪರಿಶೀಲಿಸಲು ಇಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯ ತಜ್ಞರ ತಂಡದೊಂದಿಗೆ ಸಭೆ ನಡೆಸಿ ಚರ್ಚಿಸಿದರು. ಸಭೆಯಲ್ಲಿ ಆರೋಗ್ಯ ಮತ್ತು ಆಯುಷ್ ಸಚಿವಾಲಯದ ಕಾರ್ಯದರ್ಶಿಗಳು, ಫಾರ್ಮಸ್ಯುಟಿಕಲ್ಸ್ ಮತ್ತು ಬಯೋಟೆಕ್ನಾಲಜಿ ವಿಭಾಗ, ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ನಿರ್ದೇಶಕ ರಾಜೀವ್ ಬೇಲ್, ನೀತಿ ಆಯೋಗ (ಆರೋಗ್ಯ) ಸದಸ್ಯ ವಿ.ಕೆ ಪೌಲ್ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು. ಸಭೆ ಬಳಿಕ ಟ್ವೀಟ್ ಮಾಡಿದ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯ, ಕೆಲವು ದೇಶಗಳಲ್ಲಿ ಕೋವಿಡ್ 19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ತಜ್ಞರು ಮತ್ತು ಅಧಿಕಾರಿಗಳೊಂದಿಗೆ ಇಂದು ಪರಿಶೀಲನಾ ಸಭೆ ನಡೆಸಿದ್ದೇನೆ. ಕೋವಿಡ್ ಇನ್ನೂ ಮುಗಿದಿಲ್ಲ. ಎಚ್ಚರಿಕೆ ಮತ್ತು ಹೆಚ್ಚಿನ ಕಣ್ಗಾವಲು ವಹಿಸುವುದಕ್ಕಾಗಿ ನಾವು ಎಲ್ಲ ಸೂಚನೆಗಳನ್ನು ನೀಡಿದ್ದೇವೆ. ಯಾವುದೇ ಪರಿಸ್ಥಿತಿ ನಿಭಾಯಿಸಲು ನಾವು ಸಿದ್ಧರಾಗಿದ್ದೇವೆ ಎಂದಿದ್ದಾರೆ. : – - – - - -