ಕಾರಿನಲ್ಲೇ ಸಾಫ್ಟ್​ವೇರ್ ಇಂಜಿನಿಯರ್ ಆತ್ಮಹತ್ಯೆಗೆ ಶರಣು. ಬೆಂಗಳೂರು,ಡಿಸೆಂಬರ್,21,2022(..):ಕಾರಿನಲ್ಲೇ ಸಾಫ್ಟ್​ವೇರ್ ಇಂಜಿನಿಯರ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕುರಬರಹಳ್ಳಿ ಜಂಕ್ಷನ್ ಬಳಿ ಈ ಘಟನೆ ನಡೆದಿದ್ದು, ವಿಜಯ್​ಕುಮಾರ್(51) ಮೃತಪಟ್ಟ ಇಂಜಿನೀಯರ್ ಎಂದು ಗುರುತಿಸಲಾಗಿದೆ. ವಿಜಯ್ ಕುಮಾರ್ ಅವರು ಮಹಾಲಕ್ಷ್ಮೀ ಲೇಔಟ್ ನ ನಿವಾಸಿಯಾಗಿದ್ದು, ಕೆಲವು ದಿನಗಳಿಂದ ಅವರು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಅನಾರೋಗ್ಯದಿಂದ ಬೇಸತ್ತು ಟೆಕ್ಕಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಅಂದಾಜಿಸಲಾಗಿದೆ. ಹೃದಯ ಸಂಬಂಧಿ ಸಮಸ್ಯೆಗೆ ಚಿಕಿತ್ಸೆ ಪಡೆಯುತ್ತಿದ್ದರು. ಮನೆಯಲ್ಲಿ ಪತ್ನಿ ಜತೆ ಹಲವು ಬಾರಿ ಆತ್ಮಹತ್ಯೆ ಮಾಡಿಕೊಳ್ಳುವ ವಿಷಯವನ್ನು ಪ್ರಸ್ತಾಪಿಸಿದ್ದರು ಎನ್ನಲಾಗಿದೆ. : - –- – .