ಬಸ್ ಹರಿದು ಮೂವರು ವಿದ್ಯಾರ್ಥಿಗಳು ಸಾವು. ಬಳ್ಳಾರಿ,ಡಿಸೆಂಬರ್,19,2022(..):ತಾಲ್ಲೂಕಿನ ಹಲಕುಂದಿ ಗ್ರಾಮದ ಬಳಿಯ ಕಲ್ಯಾಣ ಕೋಳಿ ಫಾರಂ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾರಿಗೆ ಸಂಸ್ಥೆಯ ಬಸ್ ಹರಿದು ಮೂವರು ಜನ ಹಾಸ್ಟಲ್ ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ತಡರಾತ್ರಿ ಸಂಭವಿಸಿದೆ. ಬೆಂಗಳೂರಿನಿಂದ ಜೇವರ್ಗಿಗೆ ಹೊರಟಿದ್ದ ಬಸ್ ರಸ್ತೆ ದಾಟುತ್ತಿದ್ದ ಯುವಕರ ಮೇಲೆ ಹರಿದು ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ಮುರುಡಿಯ ಶಂಕರ್ (18) ಎಮ್ಮಿಗನೂರಿನ ಕನಕರಾಜ್ (19) ನಾಗೇನಹಳ್ಳಿಯ ಹೊನ್ನೂರ (22) ಎಂದು ಗುರುತಿಸಿದ್ದು ಇವರು ಬಳ್ಳಾರಿ ನಗರದ ಎಸ್ಎಸ್ಟಿ ಹಾಸ್ಟಲ್ ನ ವಿದ್ಯಾರ್ಥಿಗಳಾಗಿದ್ದಾರೆ. ಈ ಕುರಿತು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. : - - – -.