ಭಾರತಕ್ಕೆ ಪರಮಾಣು ಯುದ್ಧದ ಬೆದರಿಕೆ: ಪಾಕ್ ನಾಯಕರ ಹೇಳಿಕೆಗೆ ಆಕ್ರೋಶ ಬೆಂಗಳೂರು, ಡಿಸೆಂಬರ್ 18, 2022 (..):ಪಾಕಿಸ್ತಾನ ಪೀಪಲ್ಸ್ ಪಾರ್ಟಿಯ ನಾಯಕಿ ಶಾಜಿಯಾ ಮಾರಿ ಭಾರತಕ್ಕೆ ಪರಮಾಣು ಯುದ್ಧದ ಬೆದರಿಕೆ ಹಾಕಿದ್ದಾರೆ. ಈ ಹೇಳಿಕೆಗೆ ಭಾರತದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗುತ್ತಿದೆ. ನರೇಂದ್ರ ಮೋದಿ ಬಗ್ಗೆ ಪಾಕ್‌ ವಿದೇಶಾಂಗ ಸಚಿವ ಬಿಲಾವಲ್‌ ಭುಟ್ಟೋ ನೀಡಿದ ವಿವಾದಿತ ಹೇಳಿಕೆಗೆ ಭಾರತದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಇದರ ಬೆನ್ನಲ್ಲೆ ಈ ಹೊಸದೊಂದು ವಿವಾದ ಸೃಷ್ಟಿಯಾಗಿದೆ. ಪಾಕಿಸ್ತಾನದಲ್ಲಿ ಅಣುಬಾಂಬ್ ಇದೆ ಎಂಬುದನ್ನು ಭಾರತ ಮರೆಯಬಾರದು. ನಮ್ಮ ಪರಮಾಣು ಸ್ಥಿತಿಯು ಮೌನವಾಗಿರಲು ಅಲ್ಲ. ಅಗತ್ಯ ಬಿದ್ದರೆ ನಾವು ಹಿಂದೆ ಸರಿಯುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ. ಈ ಹೇಳಿಕೆಗೆ ಭಾರತದಲ್ಲಿ ಸಾಕಷ್ಟು ಆಕ್ರೋಶ ವ್ಯಕ್ತವಾಗುತ್ತಿದೆ. ಬಿಜೆಪಿ ನಾಯಕರು ಪಾಕ್ ವಿರುದ್ಧ ಟೀಕಾ ಪ್ರಹಾರ ನಡೆಸುತ್ತಿದ್ದಾರೆ.