ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರುಪಾಲು.. ವಿಜಯನಗರ,ಡಿಸೆಂಬರ್,17,2022(..):ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರುಪಾಲಾಗಿರುವ ಘಟನೆ ವಿಜಯನಗರ ಜಿಲ್ಲೆಯಲ್ಲಿ ನಡೆದಿದೆ. ಹೊಸಪೇಟೆ ಹೊರವಲಯದಲ್ಲಿ ಈ ಘಟನೆ ನಡೆದಿದೆ. ಯಶವಂತ , ಅಂಜಿನಿ, ಗುರುರಾಜ್ ಮೃತಪಟ್ಟ ವಿದ್ಯಾರ್ಥಿಗಳು. ಕಾಲುವೆಗೆ ಆರು ಮಂದಿ ವಿದ್ಯಾರ್ಥಿಗಳು ಈಜಲು ತೆರಳಿದ್ದರು. ಈ ವೇಳೆ ಮೂವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಹೊಸಪೇಟೆ ಗ್ರಾಮೀಣ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಕುರಿತು ಪ್ರಕರಣ ದಾಖಲಾಗಿದೆ. : - – --