ಕಾರಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಸಾವು. ವಿಜಯಪುರ,ಡಿಸೆಂಬರ್,15,2022(..):ಕಾರಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿರುವ ಘಟನೆ ವಿಜಯಪುರದಲ್ಲಿ ನಡೆದಿದೆ. ಸಿಂದಗಿ ತಾಲ್ಲೂಕು ಹಂಚಿನಾಳ ಕ್ರಾಸ್ ಬಳಿ ಈ ಘಟನೆ ನಡೆದಿದೆ. ಸಂಜು ಹಿತಾರಗೌಡರ(33), ನಾಗರಾಜ ಯಡವಣ್ಣವರ(34) ಮೃತಪಟ್ಟವರು. ಮೃತಪಟ್ಟ ಇಬ್ಬರು ಬೆಳಗಾವಿ ಜಿಲ್ಲೆ ಗೋಕಾಕ್ ಮೂಲದವರು ಎನ್ನಲಾಗಿದೆ. ಘಟನೆಯಲ್ಲಿ ಆಶೀಫ್ ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಸಿಂದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. : - – - - – .