ಬಿ.ಎಸ್ ಯಡಿಯೂರಪ್ಪರನ್ನ ಮೂಲೆಗುಂಪು ಮಾಡಲು ಯಾರಿಂದಲೂ ಸಾಧ್ಯವಿಲ್ಲ- ಸಚಿವ ನಾರಾಯಣಗೌಡ ಮಂಡ್ಯ,ಡಿಸೆಂಬರ್,16,2022(..):ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಬಿಎಸ್ ಯಡಿಯೂರಪ್ಪ ನಡುವೆ ಯಾವುದೇ ಮನಸ್ತಾಪವಿಲ್ಲ. ಬಿಎಸ್ ಯಡಿಯೂರಪ್ಪರನ್ನ ಮೂಲೆಗುಂಪು ಮಾಡಲು ಯಾರಿಂದಲೂ ಸಾಧ್ಯವಿಲ್ಲ ಎಂದು ಸಚಿವ ನಾರಾಯಣಗೌಡ ತಿಳಿಸಿದರು. ಮಂಡ್ಯದಲ್ಲಿ ಇಂದು ಮಾತನಾಡಿದ ಸಚಿವ ನಾರಾಯಣಗೌಡ, ಕಾಂಗ್ರೆಸ್ ಗೆ ನಮ್ಮ ಕಡೆ ಬೊಟ್ಟು ಮಾಡಿ ತೋರಿಸುವುದೇ ಕೆಲಸ. ಬಿಎಸ್ ವೈರನ್ನ ಮೂಲೆಗುಂಪು ಮಾಡಲು ಯಾರಿಂದಲೂ ಸಾಧ್ಯವಿಲ್ಲ, ಮಂಡ್ಯದಲ್ಲಿ 7 ಕ್ಷೇತ್ರಗಳಲ್ಲಿ 4 ಕ್ಷೇತ್ರಗಳಲ್ಲಿ ಗೆಲ್ಲೋದು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಕುಕ್ಕರ್ ಬ್ಲಾಸ್ಟ್ ವಿಚಾರಕ್ಕೆ ಸಂಬಂಧಿಸಿದಂತೆ ಡಿ.ಕೆ ಶಿವಕುಮಾರ್ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಸಚಿವ ನಾರಾಯಣಗೌಡ, ತಮ್ಮ ತಪ್ಪು ಮುಚ್ಚಿಕೊಳ್ಳಲು ಡಿ.ಕೆ ಶಿವಕುಮಾರ್ ಮಾತನಾಡುತ್ತಾರೆ. ಶಾರಿಕ್ ಒಬ್ಬ ಭಯೋತ್ಪಾದಕ. ಯಾವುದೇ ವೋಟರ್ ಐಡಿ ಹಗರಣವೂ ನಡೆದಿಲ್ಲ ಪ್ರಕರಣ ಮುಚ್ಚಿ ಹಾಕುವ ಪ್ರಶ್ನೆಯೇ ಇಲ್ಲ ಎಂದರು. : - - -