ಕೊಬ್ಬರಿಗೆ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಅರಸಿಕೆರೆ ಪಟ್ಟಣ ಬಂದ್. ಹಾಸನ,ಡಿಸೆಂಬರ್,16,2022(..):ಕೊಬ್ಬರಿಗೆ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಹಾಸನ ಜಿಲ್ಲೆ ಅರಸೀಕೆರೆ ಬಂದ್‌ ಗೆ ಕರೆ ನೀಡಲಾಗಿದೆ. ಅರಸೀಕೆರೆ ಕ್ಷೇತ್ರದ ಜೆಡಿಎಸ್ ಶಾಸಕ ಕೆ.ಎಂ.ಶಿವಲಿಂಗೇಗೌಡರು ಈ ಬಂದ್ ಗೆ ಕರೆ ನೀಡಿದ್ದು, ಅರಸೀಕೆರೆ ಪಟ್ಟಣದಲ್ಲಿ ಇಂದು ಬೃಹತ್ ಪ್ರತಿಭಟನೆ ನಡೆಯಲಿದೆ. ಶಾಸಕ ಶಿವಲಿಂಗೇಗೌಡ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗಿತ್ತು. ಕೊಬ್ಬರಿ ಬೆಲೆ ಕುಸಿತ ಹಿನ್ನೆಲೆಯಲ್ಲಿ ಬಂದ್ ಗೆ ಕರೆ ನೀಡಲಾಗಿದ್ದು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬೆಳಿಗ್ಗೆ 6 ಗಂಟೆಯಿಂದಲೇ ಅಂಗಡಿ ಮುಂಗಟ್ಟು ಬಂದ್ ಆಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. : - - - - –