ಮುನಿಸು ಮರೆತು ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದ ಬಿ.ಕೆ ಹರಿಪ್ರಸಾದ್ ಬೆಂಗಳೂರು,ಆಗಸ್ಟ್8,2024 (..):ಅಗ್ಗಾಗ್ಗೆ ಸಿಎಂ ಸಿದ್ದರಾಮಯ್ಯ ಅವರನ್ನು ಟೀಕಿಸಿ ಅಸಮಾಧಾನ ವ್ಯಕ್ತಪಡಿಸುತ್ತಿದ್ದ ವಿಧಾನಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಸಿಎಂ ಸಿದ್ದರಾಮಯ್ಯ ಅವರನ್ನ ದಿಢೀರ್ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಉಭಯ ನಾಯಕರು ಭೇಟಿಯಾಗಿ ಸಮಾಲೋಚನೆ ನಡೆಸಿರುವುದು ಕುತೂಹಲ ಮೂಡಿಸಿದ್ದು ಈ ಮೂಲಕ ಇಬ್ಬರು ನಾಯಕರ ನಡುವಿನ ಭಿನ್ನಾಭಿಪ್ರಾಯ ದೂರವಾಗಿದೆ ಎನ್ನಲಾಗಿದೆ. ಸಿಎಂ ಸರ್ಕಾರಿ ನಿವಾಸ ಕಾವೇರಿಗೆ ತೆರಳಿದ ಬಿಕೆ ಹರಿಪ್ರಸಾದ್, ಸಿಎಂ ಸಿದ್ದರಾಮಯ್ಯ ಜೊತೆ ಚರ್ಚಿಸಿದ್ದಾರೆ ಎನ್ನಲಾಗಿದೆ. ಈ ಕುರಿತು ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಉಭಯ ಕುಶಲೊಪರಿ ವಿಚಾರಿಸಿದ್ದೇವೆ ಎಂದು ತಿಳಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಕೆ ಹರಿಪ್ರಸಾದ್ ವಾಗ್ದಾಳಿ ನಡೆಸುತ್ತಲೇ ಬಂದಿದ್ದರು. ಸಿದ್ದರಾಮಯ್ಯ ಸಂಪುಟದಲ್ಲಿ ತಮಗೆ ಸಚಿವ ಸ್ಥಾನ ದೊರೆಯದೇ ಇರುವ ಬಗ್ಗೆಯೂ ಹರಿಪ್ರಸಾದ್ ಆಗಾಗ್ಗೆ ಅಸಮಾಧಾನ ವ್ಯಕ್ತಪಡಿಸುತ್ತಿದ್ದರು. : , , ,