ಮೊದಲಿನಿಂದಲೂ ಸಿದ್ಧರಾಮಯ್ಯ ಟಾರ್ಗೆಟ್: ಇವರ ಕುತಂತ್ರಗಳು ನಡೆಯಲ್ಲ- ಯತೀಂದ್ರ ಸಿದ್ದರಾಮಯ್ಯ ಮೈಸೂರು, ಆಗಸ್ಟ್,8,2024 (..):ಸಿಎಂ ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸುವ ತನಕ ಹೋರಾಟ ನಿಲ್ಲಲ್ಲ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿಕೆಗೆ ವಿಧಾನಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ, ನಮ್ಮನ್ನ ಆಯ್ಕೆ ಮಾಡೋರು ಜನ, ಅಧಿಕಾರದಿಂದ ಇಳಿಸೋರು ಜನ. ನಾವು ಪ್ರಜಾಪ್ರಭುತ್ವದ ಅಡಿಯಲ್ಲಿ ಕೆಲಸ ಮಾಡೋದು. ಜನ ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಬಹುಮತ ಕೊಟ್ಟಿದ್ದಾರೆ. ಇವರು ವಿರೋಧ ಪಕ್ಷದಲ್ಲಿ ಕುಳಿತು ಕೆಲಸ ಮಾಡಬೇಕು. ಸುಳ್ಳು ಆರೋಪಗಳ ಹೊರಿಸಿ ಸರ್ಕಾರವನ್ನ ಅಸ್ಥಿರಗೊಳಿಸುವ ಕೆಲಸ ಮಾಡುತ್ತಿದ್ದಾರೆ. ಇವರ ಕುತಂತ್ರಗಳು ನಡೆಯಲ್ಲ ಎಂದು ವಾಗ್ದಾಳಿ ನಡೆಸಿದರು. ಬಿಜೆಪಿಯೇತರ ಪಕ್ಷಗಳು ಆಡಳಿತ ನಡೆಸುವ ರಾಜ್ಯಗಳ ಮೇಲೆ ಈ ರೀತಿ ಟಾರ್ಗೆಟ್ ಮಾಡಿ ಸರ್ಕಾರವನ್ನ ಅಸ್ಥಿರಗೊಳಿಸುವ ಕೆಲಸ ಮಾಡುತ್ತಾರೆ. ಸಿದ್ದರಾಮಯ್ಯ ಅವರನ್ನ ಮೊದಲಿನಿಂದಲೂ ಟಾರ್ಗೆಟ್ ಮಾಡುತ್ತಾ ಬಂದಿದ್ದಾರೆ. ಸುಳ್ಳು ಆರೋಪಗಳನ್ನ ಮಾಡಿ ಜನರಲ್ಲಿ ಅಪನಂಬಿಕೆ ಸೃಷ್ಟಿ ಮಾಡಲು ಹೊರಟಿದ್ದಾರೆ ಇದು ನಡೆಯಲ್ಲ ಎಂದು ಟಾಂಗ್ ಕೊಟ್ಟರು. ನಾಳೆ ನಡೆಯುವ ಜನಾಂದೋಲನ ಸಮಾವೇಶಕ್ಕೆ ಸಾಧ್ಯವಾದಷ್ಟು ಹೆಚ್ಚಿನ ಜನ ಸೇರಿಸುವ ಪ್ರಯತ್ನ ಮಾಡಿದ್ದೇವೆ. ಹೆಚ್ಚಿನ ಸಂಖ್ಯೆಯಲ್ಲಿ ಜನ ಬರುವ ನಿರೀಕ್ಷೆ ಇದೆ. ಸಮಾವೇಶಕ್ಕೆ ಕೇಂದ್ರದ ನಾಯಕರು ಯಾರು ಬರುತ್ತಿಲ್ಲ. ಒಟ್ಟಿಗೆ ಮೈಸೂರಿನಲ್ಲಿ ಒಂದು ದಾಖಲೆ ಕಾರ್ಯಕ್ರಮ ಮಾಡುವ ಯೋಜನೆ ಇದೆ ಎಂದು ಸಿಎಂ‌ ಪುತ್ರ ಯತೀಂದ್ರ ಸಿದ್ದರಾಮಯ್ಯ ಹೇಳಿದರು. : , ,