ಪಕ್ಷೇತರವಾಗಿ ಸ್ಪರ್ಧಿಸಿ ಕಾಂಗ್ರೆಸ್ ಜೆಡಿಎಸ್ ಗಿಂತ ಹೆಚ್ಚು ಮತ ಗಳಿಸದಿದ್ದರೇ ರಾಜಕೀಯ ನಿವೃತ್ತಿ-ಎಲ್ ಆರ್ ಶಿವರಾಮೇಗೌಡ. ನಾಗಮಂಗಲ,ಡಿಸೆಂಬರ್,14,2022(..):ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪಕ್ಷೇತರವಾಗಿ ಸ್ಪರ್ಧಿಸಿ ಕಾಂಗ್ರೆಸ್ ಜೆಡಿಎಸ್ ಗಿಂತ ಹೆಚ್ಚು ಮತ ಗಳಿಸದಿದ್ದರೇ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಮಾಜಿ ಸಂಸದ ಎಲ್.ಆರ್ ಶಿವರಾಮೇಗೌಡ ತಿಳಿಸಿದರು. ನಾಗಮಂಗಲದಲ್ಲಿ ಇಂದು ಮಾತನಾಡಿದ ಎಲ್.ಆರ್ ಶಿವರಾಮೇಗೌಡ, 15 ವರ್ಷದಿಂದ ಎಂಎಲ್ ಎ ಕನಸು ಆಸೆ ಬಿಚ್ಚಿಟ್ಟಿದ್ದೆ. ಮುಂದಿನ ಚುನಾವಣೆಯಲ್ಲಿ ಪಕ್ಷೇತರವಾಗಿ ಸ್ಪರ್ಧಿಸುತ್ತೇನೆ. ಕಾಂಗ್ರೆಸ್ ಜೆಡಿಎಸ್ ಗಿಂತ ಹೆಚ್ಚು ಮತ ಪಡೆದು ಗೆಲ್ಲುತ್ತೇನೆ. ಹೆಚ್ಚು ಮತಗಳ ಅಂತರದಿಂದ ಗೆಲ್ಲದಿದ್ದರೇ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಹೇಳಿದರು. : - -- – - -