ಕಾರುಗಳ ನಡುವೆ ಭೀಕರ ಅಪಘಾತ: ಐವರು ಸಾವು. ನಾಗಮಂಗಲ,ಡಿಸೆಂಬರ್,12,2022(..):ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿ ಐವರು ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನಲ್ಲಿ ನಡೆದಿದೆ. ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ತಿಟ್ಟನಹೊಸಹಳ್ಳಿ ಬಳಿ ಈ ಅಪಘಾತ ಸಂಭವಿಸಿದೆ ಘಟನೆಯಲ್ಲಿ ಶ್ರೀನಿವಾಸ್ ಮೂರ್ತಿ ಜಯಂತಿ ಹಾಗೂ ಪ್ರಭಾಕರ್ ಕಿಶೋರ್ ಸೇರಿ ಐವರು ಸಾವನ್ನಪ್ಪಿದ್ದು ಐವರಿಗೆ ಗಂಭೀರ ಗಾಯಗಳಾಗಿದೆ ಎನ್ನಲಾಗಿದೆ. ಬೆಂಗಳೂರಿನಿಂದ ಬರುತ್ತಿದ್ದ ಇನ್ನೋವಾ ಕಾರು ಹಾಸನದಿಂದ ಬರುತ್ತಿದ್ದ ಶಿಫ್ಟ್ ಕಾರಿನ ನಡುವೆ ಡಿಕ್ಕಿಯಾಗಿ ಈ ಘಟನೆ ಸಂಭವಿಸಿದೆ. ಈ ಕುರಿತು ಬಿಂಡಿಗನವಿಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. : - –- -- .