ಗುಜರಾತ್ ಸಿಎಂ ಸ್ಥಾನಕ್ಕೆ ಭೂಪೇಂದ್ರ ಪಟೇಲ್ ರಾಜೀನಾಮೆ ಸಲ್ಲಿಕೆ ಗಾಂಧಿನಗರ,ಡಿಸೆಂಬರ್,9,2022(..):ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಜಯ ಸಾಧಿಸಿ ಮತ್ತೆ ಅಧಿಕಾರದ ಗದ್ದುಗೆಗೇರಿದ್ದು ಈ ನಡುವೆ ಇಂದು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ಡಿಸೆಂಬರ್ 12 ರಂದು 2ನೇ ಬಾರಿಗೆ ಗುಜರಾತ್ ಸಿಎಂ ಆಗಿ ಭೂಪೇಂದ್ರ ಪಟೇಲ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ರಾಜ್ಯಪಾಲ ಆಚಾರ್ಯ ದೇವ್ ವ್ರತ್ ಅವರಿಗೆ ರಾಜೀನಾಮೆ ಸಲ್ಲಿಸಿದರು. ಭೂಪೇಂದ್ರ ಪಟೇಲ್ ಸೋಮವಾರ ಗುಜರಾತ್ ನ ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿ ಹಲವು ನಾಯಕರು ಪಾಲ್ಗೊಳ್ಳಲಿದ್ದಾರೆ. : – - –