ಬೆಂಗಳೂರು 'ಪಿಜಿ'ಗಳಿಗೆ ಹೊಸ ಮಾರ್ಗಸೂಚಿ ಪ್ರಕಟ; ಈ ಸೌಲಭ್ಯಗಳಿಲ್ಲದಿದ್ದರೆ ಹಣ ಪಾವತಿಸಬೇಡಿ! ಬೆಂಗಳೂರಿನ ಪೇಯಿಂಗ್ ಗೆಸ್ಟ್‌ಗಳ ಲೈಸೆನ್ಸ್ ಹಾಗೂ ಲೈಸೆನ್ಸ್ ನವೀಕರಣಕ್ಕೆ ಬಿಬಿಎಂಪಿಯಿಂದ ಹೊಸ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಈ ಸೌಲಭ್ಯಗಳು ಇಲ್ಲದಿದ್ದರೆ ಪಿಜಿಗಳ ಮಾಲೀಕರುಗೆ ಹಣ ಪಾವತಿಸಬೇಡಿ. ಬೆಂಗಳೂರು (ಆ.09):ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಾಯ್ದೆ-2020ರ ಸೆಕ್ಷನ್ 305ರ ಪ್ರಕಾರ ಪಾಲಿಕೆ ವ್ಯಾಪ್ತಿಯಲ್ಲಿರುವ ಎಲ್ಲಾ 'ಪಾವತಿಸುವ ಅತಿಥಿ ಗೃಹಗಳು( - )ಗಳಿಗೆ ಉದ್ದಿಮೆ ಪರವಾನಗಿಯನ್ನು ನೀಡುವಾಗ ಮಾರ್ಗಸೂಚಿ ಪಾಲನೆಯ ಆದೇಶ ಜಾರಿ ಮಾಡುವಂತೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಆದೇಶ ಹೊರಡಿಸಿದ್ದಾರೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ-2020ರ ಕಾಯ್ದೆಯಡಿ, ಪಾಲಿಕೆ ವ್ಯಾಪ್ತಿಯಲ್ಲಿ ಹೊಸದಾಗಿ ಪ್ರಾರಂಭಿಸಲು ಉದ್ದೇಶಿಸಿರುವ 'ಪೇಯಿಂಗ್ ಗೆಸ್ಟ್' ()ಗಳಿಗೆ 'ಪರವಾನಿಗೆ ಮಂಜೂರಾತಿ'/'ನವೀಕರಣ' ಹಾಗೂ ಈಗಾಗಲೇ ಪರವಾನಿಗೆ ಪಡೆದು ಅಸ್ತಿತ್ವದಲ್ಲಿರುವ ಪೇಯಿಂಗ್ ಗೆಸ್ಟ್‌ಗಳಿಗೆ ಸಂಬಂಧಿಸಿದಂತೆ ಈ ಕೆಳಕಂಡ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಮಕ್ಕಳಿಗೆ ಜ್ವರ, ಶೀತ, ಕೆಮ್ಮು, ಕಫ ನಿವಾರಣೆಗೆ ದೊಡ್ಡಪತ್ರೆ ಎಲೆ ಬಳಸುವ ವಿಧಾನಗಳು ಬಿಬಿಎಂಪಿಯ ಎಲ್ಲ ವಲಯ ಆರೊಗ್ಯಾಧಿಕಾರಿಗಳು, ಆರೋಗ್ಯ ವೈದ್ಯಾಧಿಕಾರಿಗಳು ಮತ್ತು ಹಿರಿಯ ಆರೋಗ್ಯ ಪರಿವೀಕ್ಷಕರು ತಮ್ಮ-ತಮ್ಮ ಕಾರ್ಯಕ್ಷೇತ್ರದ ವ್ಯಾಪ್ತಿಯಲ್ಲಿ ಮೇಲ್ಕಂಡ ಮಾರ್ಗಸೂಚಿಗಳ ಪಾಲನೆಯಾಗುತ್ತಿರುವ ಕುರಿತು ಪ್ರತೀ 6 ತಿಂಗಳಿಗೊಮ್ಮೆ ಪೇಯಿಂಗ್‌ ಗೆಸ್ಟ್‌ಗಳಿಗೆ ಭೇಟಿ ನೀಡಿ ಪರಿಶೀಲಿಸಬೇಕು. ಎಲ್ಲ ವಲಯ ಆಯುಕ್ತರುಗಳು ಮೇಲ್ಕಂಡ ಮಾರ್ಗಸೂಚಿಗಳ ಪಾಲನೆಯಾಗುತ್ತಿರುವುದರ ಕುರಿತು ಪರಿಶೀಲಿಸಿ ಖಚಿತಪಡಿಸಿಕೊಳ್ಳಬೇಕು. ಒಂದು ವೇಳೆ ಮಾರ್ಗಸೂಚಿಗಳ ಉಲ್ಲಂಘನೆ ಕಂಡುಬಂದಲ್ಲಿ ಸಂಬಂಧಪಟ್ಟ ಉದ್ದಿಮೆದಾರರ ವಿರುದ್ಧ ಬಿಬಿಎಂಪಿ-2020ರ ಕಾಯ್ದೆ ಸೆಕ್ಷನ್ 307 & 308ರಂತೆ ಅಗತ್ಯ ಕ್ರಮ ಜರುಗಿಸುವಂತೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಆದೇಶಿಸಿದ್ದಾರೆ.