ಒನ್ ರ‍್ಯಾಂಕ್, ಒನ್ ಪೆನ್ಷನ್: ಕೇಂದ್ರ ಸರ್ಕಾರಕ್ಕೆ ಛೀಮಾರಿ ಹಾಕಿ 2 ಲಕ್ಷ ದಂಡ ವಿಧಿಸಿದ ಸುಪ್ರೀಂ ನವೆಂಬರ್ 14ರೊಳಗೆ ಎಲ್ಲಾ ಪಿಂಚಣಿ ಸಮಸ್ಯೆಗಳನ್ನು ಸರಿಪಡಿಸಲು ಸರ್ಕಾರಕ್ಕೆ ಆದೇಶಿಸಿದೆ. ಈ ಪ್ರಕರಣದ ಮುಂದಿನ ವಿಚಾರಣೆ ನವೆಂಬರ್ 25ಕ್ಕೆ ಮುಂದೂಡಲಾಗಿದೆ. ನವದೆಹಲಿ:ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಸುಪ್ರೀಂ ಕೋರ್ಟ್ ( ) 2 ಲಕ್ಷ ರೂಪಾಯಿ ದಂಡ ವಿಧಿಸಿದೆ. ಒಂದು ಶ್ರೇಣಿ, ಒಂದು ಪಿಂಚಣಿ ಯೋಜನೆಯಡಿ ( ) ನಿವೃತ್ತ ಸೇನಾ ಕ್ಯಾಪ್ಟನ್‌ಗಳ ಪಿಂಚಣಿ ಕುರಿತು ಕೇಂದ್ರ ಸರ್ಕಾರ ಯಾವುದೇ ನಿರ್ಧಾರ ತೆಗೆದುಕೊಳ್ಳದ ಹಿನ್ನೆಲೆ ಸುಪ್ರೀಂ ಕೋರ್ಟ್, ಪಿಂಚಣಿಯನ್ನು ಶೇಕಡಾ 10 ರಷ್ಟು ಹೆಚ್ಚಿಸಬೇಕು. ನವೆಂಬರ್ 14ರೊಳಗೆ ಎಲ್ಲಾ ಪಿಂಚಣಿ ಸಮಸ್ಯೆಗಳನ್ನು ಸರಿಪಡಿಸಲು ಸರ್ಕಾರಕ್ಕೆ ಆದೇಶಿಸಿದೆ. ಈ ಪ್ರಕರಣದ ಮುಂದಿನ ವಿಚಾರಣೆ ನವೆಂಬರ್ 25ಕ್ಕೆ ಮುಂದೂಡಲಾಗಿದೆ. ಕೇಂದ್ರ ಸರ್ಕಾರ ದಂಡವನ್ನು ಒಂದು ತಿಂಗಳೊಳಗೆ ಸಶಸ್ತ್ರ ಪಡೆಗಳ ಕಲ್ಯಾಣ ನಿಧಿಗೆ ( ) ಜಮೆ ಮಾಡಬೇಕು ಎಂದು ನ್ಯಾಯಾಲಯ ಆದೇಶ ನೀಡಿದೆ. 2021ರಿಂದ ಒನ್ ರ‍್ಯಾಂಕ್, ಒನ್ ಪೆನ್ಷನ್ ಪ್ರಕರಣದ ವಿಚಾರಣೆಯನ್ನು ಸುಪ್ರೀಂಕೋರ್ಟ್ ನಡೆಸುತ್ತಿದೆ. # (). . .…../7jRBl3yvE8