ಚಿನ್ನದ ಬೆಲೆಯ ಇಳಿಕೆಗೆ ಕಾಯ್ತಿದ್ದೀರಾ? ಕಡಿಮೆಯಾಗಿದೆ ದರ.. ಈ ಚಾನ್ಸ್ ಮಿಸ್ ಮಾಡ್ಕೊಬೇಡಿ : ಚಿನ್ನದ ದರದಲ್ಲಿ ಪ್ರತಿದಿನವೂ ಏರಿಳಿತಗಳಾಗುತ್ತಲೇ ಇರುತ್ತವೆ. ಇಂದಿನ ಚಿನ್ನ ಹಾಗೂ ಬೆಳ್ಳಿ ಆಭರಣ ದರ ಹೇಗಿದೆ? ಷೇರು ಮಾರುಕಟ್ಟೆಯಲ್ಲಿ ಚಿನ್ನ ಹೂಡಿಕೆಯ ಪ್ರಮುಖ ವಿಚಾರವಾಗಿರುವುದರಿಂದ ಚಿನ್ನದ ದರದಲ್ಲಿ ಪ್ರತಿದಿನವೂ ಏರಿಳಿತಗಳಾಗುತ್ತಲೇ ಇರುತ್ತವೆ. ಸೋಮವಾರದ ಬಳಿಕ ಇಂದು ಸಹ ಚಿನ್ನದ ದರದಲ್ಲಿ ಇಳಿಕೆಯಾಗಿದೆ. ಆದ್ರೆ ಬೆಳ್ಳಿ ಕೊಂಚ ಭಾರವಾಗಿದೆ. ಹಾಗಿದ್ದರೆ ಇಂದಿನ ಚಿನ್ನ ಹಾಗೂ ಬೆಳ್ಳಿ ಆಭರಣ ದರ ಹೇಗಿದೆ ನೋಡೋಣ... ಒಂದು ಗ್ರಾಂ ಚಿನ್ನ (1GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 674924 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 7,363 ಎಂಟು ಗ್ರಾಂ ಚಿನ್ನ (8GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 53,99224 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 58,904 ಹತ್ತು ಗ್ರಾಂ ಚಿನ್ನ (10GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 67,49024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 73,630 ನೂರು ಗ್ರಾಂ ಚಿನ್ನ (100GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 6,74,90024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 7,36,300 ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 24 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 73,630 ಆಗಿದ್ದರೆ ಚೆನ್ನೈ 74,010 ಮುಂಬೈ 73,630 ಹಾಗೂ ಕೋಲ್ಕತ್ತಾದಲ್ಲಿ 73,360 ಹಾಗೆಯೇ ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ 73,780 ರೂ. ಆಗಿದೆ. ಇಂದಿನ ಬೆಳ್ಳಿ ದರಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಹಾಗೂ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನದ ಮೇಲೆ ಅವಲಂಬಿತವಾಗಿದ್ದು, ಇದರಿಂದ ದೇಶೀಯ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ. ರೂಪಾಯಿ ಮೌಲ್ಯದಲ್ಲಿ ಏರಿಕೆ, ಇಳಿಕೆಯಾದಂತೆಯೂ ಚಿನ್ನ ಬೆಳ್ಳಿ ದರ ವ್ಯತ್ಯಾಸವಾಗುತ್ತಿದೆ. ಒಬ್ಬರ ಬಳಿ ಗರಿಷ್ಠ ಎಷ್ಟು ಸಿಮ್ ಕಾರ್ಡ್ ಇರಬೇಕು? ಮಿತಿ ಮೀರಿದ್ರೆ 3 ವರ್ಷ ಜೈಲು, 2 ಲಕ್ಷ ದಂಡ ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್ಹಾಗೆಯೇ ಬೆಂಗಳೂರಲ್ಲಿ 10 , 100 , 1000 (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 953 ರೂ. 9,530 ಹಾಗೂ ರೂ. 95,300 ರೂ.ಗಳಾಗಿವೆ. ಇನ್ನುಳಿದಂತೆ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 99,600 ಆಗಿದ್ದರೆ, ಮುಂಬೈನಲ್ಲಿ ರೂ. 95,100 ಹಾಗೂ ಕೋಲ್ಕತ್ತದಲ್ಲಿ ಸಹ ರೂ. 95,100 ಗಳಾಗಿದೆ. ಅಲ್ಲದೆ, ರಾಷ್ಟ್ರ ರಾಜಧಾನಿ ಹೊಸ ದಿಲ್ಲಿಯಲ್ಲಿ ಸಹ ಇಂದಿನ ಬೆಳ್ಳಿ ದರ ರೂ. 95,100 ಆಗಿದೆ. ಒಮ್ಮೆ ಚಿನ್ನ ನೀವು ಖರೀದಿಸಿದ್ದೀರಿ ಎಂದಾದರೆ ಅದು ಒಂದು ರೀತಿಯ ಹೂಡಿಕೆಯಂತೆಯೇ. ಅನೇಕರು ಮದುವೆ ಮುಂಜಿಗಳಿಗೆ ಮಾತ್ರವಲ್ಲದೇ ಕಷ್ಟಕಾಲಕ್ಕೆ ನೆರವಿಗೆ ಬರಬಹುದು ಎಂಬ ಕಾರಣಕ್ಕೂ ಚಿನ್ನ ಖರೀದಿಸುತ್ತಾರೆ. ಆಭರಣದ ಬದಲು ಚಿನ್ನದ ಬಿಸ್ಕೆಟ್‌, ಚಿನ್ನದ ಬಾಂಡ್ ಖರೀದಿಸಿದರೆ ಅದು ಒಂದು ರೀತಿಯ ಹೂಡಿಕೆಯಂತೆಯೇ ಇದು ಎಂದಿಗೂ ಸೆಕೆಂಡ್ ಹ್ಯಾಂಡ್ ಆಗುವುದಿಲ್ಲ. ಇದನ್ನು ನೀವು ಆ ದಿನದ ಚಿನ್ನದ ದರ ಹೇಗಿದೆ ಎಂಬುದರ ಮೇಲೆ ಬಹು ವರ್ಷಗಳ ನಂತರವೂ ಉತ್ತಮ ದರವನ್ನು ಪಡೆಯಬಹುದು. ಹೀಗಾಗಿಯೇ ಚಿನ್ನ ಹೂಡಿಕೆದಾರರ ಅಚ್ಚುಮೆಚ್ಚಿನ ಹೂಡಿಕೆಯ ವಿಷಯವಾಗಿದೆ. ಅಲ್ಲದೇ ಷೇರು ಮಾರುಕಟ್ಟೆಯ ಹೂಡಿಕೆದಾರರು ಮಾತ್ರವಲ್ಲದೇ ಜನ ಸಾಮಾನ್ಯರು ಕೂಡ ಚಿನ್ನದ ದರದ ಮೇಲೆ ಒಂದು ಕಣ್ಣಿಟ್ಟಿರುತ್ತಾರೆ. ಉತ್ತರ ಕನ್ನಡದಲ್ಲಿ ಅತ್ಯಧಿಕ ದರ ಇಳಿಕೆ; ನಿಮ್ಮ ಜಿಲ್ಲೆಯಲ್ಲಿ ಎಷ್ಟಿದೆ ಪೆಟ್ರೋಲ್-ಡೀಸೆಲ್ ದರ!