ಮಹಾರಾಜ ಯದುವೀರ್‌ಗೆ 7,95,503 ಮತ ಹಾಕಿದ ಜನತೆ; ಲೀಡ್ ಕೊಟ್ಟ ಕ್ಷೇತ್ರ ಯಾವುದು ಗೊತ್ತಾ? ಮೈಸೂರು-ಕೊಡಗು ಲೋಕಸಭಾ ಚುನಾವಣೆಯಲ್ಲಿ ಮೊದಲ ಬಾರಿಗೆ ಬಿಜೆಪಿಯಿಂದ ಸ್ಪರ್ಧೆ ಮಾಡಿದ್ದ ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಬರೋಬ್ಬರಿ 7,95,503 ಮತಗಳನ್ನು ಪಡೆಯುವ ಮೂಲಕ ಭರ್ಜರಿ ಗೆಲುವು ಸಾಧಿಸಿದ್ದಾರೆ. ಮೈಸೂರು (ಜೂ.04):ರಾಜ್ಯದ ಸಾಂಸ್ಕೃತಿಕ ರಾಜಧಾನಿ ಮೈಸೂರು-ಕೊಡಗು ಲೋಕಸಭಾ ಚುನಾವಣೆಯಲ್ಲಿ ಮೊದಲ ಬಾರಿಗೆ ಬಿಜೆಪಿಯಿಂದ ಸ್ಪರ್ಧೆ ಮಾಡಿದ್ದ ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಬರೋಬ್ಬರಿ 7,95,503 ಮತಗಳನ್ನು ಪಡೆಯುವ ಮೂಲಕ ಭರ್ಜರಿ ಗೆಲುವು ಸಾಧಿಸಿದ್ದಾರೆ. ಆದರೆ, 8 ವಿಧಾನಸಭಾ ಕ್ಷೇತ್ರಗಳಲ್ಲಿ ಆರು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿ ಯದುವೀರ್‌ಗೆ ಲೀಡ್ ಕೊಟ್ಟಿದ್ದಾರೆ. ನರಸಿಂಹರಾಜ ಮತ್ತು ಪಿರಿಯಾಪಟ್ಟಣ ಕ್ಷೇತ್ರದಲ್ಲಿ ಕಾಂಗ್ರೆಸ್ ಲೀಡ್ ಪಡೆದುಕೊಂಡಿದೆ. ಮೈಸೂರು-ಕೊಡಗು ಕ್ಷೇತ್ರದಲ್ಲಿ ಯದುವೀರ್ ಕೃಷ್ಣದತ್ತ ಚಾಮರಾಜ್ ಒಡೆಯರ್ ಅವರು ಒಟ್ಟು 7,95,503 ಮತಗಳನ್ನು ಪಡೆದಿದ್ದಾರೆ. ಇವರ ಎದುರಾಳಿ ಕಾಂಗ್ರೆಸ್ ಅಭ್ಯರ್ಥಿ ಎಂ. ಲಕ್ಷ್ಮಣ್ 6,56,241 ಮತಗಳನ್ನು ಪಡೆದಿದ್ದಾರೆ. ಇನ್ನು ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಯದುವೀರ್ ಅವರು 1,39,262 ಮತಗಳ ಅಂತರದಿಂದ ಗೆಲವು ಸಾಧಿಸಿದ್ದಾರೆ. ಮೈಸೂರು ಕೊಡಗು ಲೋಕಸಭಾ ಕ್ಷೇತ್ರದಲ್ಲಿನ 8 ವಿಧಾನಸಭಾ ಕ್ಷೇತ್ರಗಳಲ್ಲಿ ಯಾವ ಪಕ್ಷಕ್ಕೆ ಎಷ್ಟು ಮತಗಳು ಬಂದಿವೆ ಎಂಬುದರ ಸ್ಪಷ್ಟ ಮಾಹಿತಿ ಇಲ್ಲಿದೆ ನೋಡಿ... ಡಾ. ಮಂಜುನಾಥ್ ಒಳ್ಳೆಯ ವ್ಯಕ್ತಿ ಅಂತ ಜನ ಗೆಲ್ಲಿಸಿದ್ದಾರೆ, ಬಿಜೆಪಿಗೆ ಓಟ್ ಹಾಕಿಲ್ಲ: ಡಿ.ಕೆ.ಶಿವಕುಮಾರ್ ಮೈಸೂರು - ಕೊಡಗು ಲೋಕಸಭಾ ಕ್ಷೇತ್ರ ಚುನಾವಣೆ ಫಲಿತಾಂಶದ ವಿವರ01) ಮಡಿಕೇರಿ ವಿಧಾನ ಸಭಾ ಕ್ಷೇತ್ರಬಿಜೆಪಿ :- 108402ಕಾಂಗ್ರೆಸ್ :- 66994ಬಿಜೆಪಿ ಲೀಡ್ 41408 02) ವಿರಾಜಪೇಟೆ ವಿಧಾನ ಸಭಾ ಕ್ಷೇತ್ರಬಿಜೆಪಿ :- 99804ಕಾಂಗ್ರೆಸ್ :- 67353ಬಿಜೆಪಿ ಲಿಡ್ 32451 03) ಪಿರಿಯಾಪಟ್ಟಣ ವಿಧಾನ ಸಭಾ ಕ್ಷೇತ್ರಬಿಜೆಪಿ :- 71237ಕಾಂಗ್ರೆಸ್ :- 82981ಕಾಂಗ್ರೆಸ್ ಲೀಡ್ 11744 04) ಹುಣಸೂರು ವಿಧಾನ ಸಭಾ ಕ್ಷೇತ್ರಬಿಜೆಪಿ :- 95266ಕಾಂಗ್ರೆಸ್ :- 92198ಬಿಜೆಪಿ ಲೀಡ್ 3068 05) ಚಾಮುಂಡೇಶ್ವರಿ ವಿಧಾನ ಸಭಾ ಕ್ಷೇತ್ರಬಿಜೆಪಿ :- 143327ಕಾಂಗ್ರೆಸ್ :- 10683ಬಿಜೆಪಿ ಲೀಡ್ 37244 06) ಕೃಷ್ಣರಾಜ ವಿಧಾನಸಭಾ ಕ್ಷೇತ್ರಬಿಜೆಪಿ :- 104596ಕಾಂಗ್ರೆಸ್ :- 50171ಬಿಜೆಪಿ ಲೀಡ್ 54425 07) ಚಾಮರಾಜ ವಿಧಾನ ಸಭಾ ಕ್ಷೇತ್ರಬಿಜೆಪಿ :- 105480ಕಾಂಗ್ರೆಸ್ :- 49083ಬಿಜೆಪಿ ಲೀಡ್ 56397 08) ನರಸಿಂಹರಾಜ ವಿಧಾನ ಸಭಾ ಕ್ಷೇತ್ರಬಿಜೆಪಿ :- 62279ಕಾಂಗ್ರೆಸ್ : 138876ಕಾಂಗ್ರೆಸ್ ಲೀಡ್ 76597