2024: ಆಂಧ್ರದಲ್ಲಿ ಜಗನ್‌ಗೆ ಶಾಕ್‌ ನೀಡಿದ ಬಿಜೆಪಿ-ಟಿಡಿಪಿ-ಜೆಎಸ್‌ಪಿ ಮೈತ್ರಿ! ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟಕ್ಕೆ ದೇಶದ ದೊಡ್ಡ ರಾಜ್ಯಗಳಲ್ಲಿ ಶಾಕ್‌ ಸಿಕ್ಕಿದ್ದರೆ, ದಕ್ಷಿಣದ ಆಂಧ್ರಪ್ರದೇಶದಲ್ಲಿ ದೊಡ್ಡ ಮಟ್ಟದ ಗೆಲುವು ಸಿಗುವ ಸೂಚನೆ ಸಿಕ್ಕಿದೆ. 25 ಲೋಕಸಭಾ ಕ್ಷೇತ್ರಗಳ ಪೈಕಿ ಟಿಡಿಪಿ-ಬಿಜೆಪಿ-ಜೆಎಸ್‌ಪಿ ನೇತೃತ್ವದ ಮೈತ್ರಿಕೂಟ 22 ಸೀಟ್‌ಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ವಿಶಾಖಪಟ್ಟಣ (ಜೂ.4):ಆಂಧ್ರ ಪ್ರದೇಶದಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಮಾತ್ರವಲ್ಲ ಲೋಕಸಭಾ ಚುನಾವಣೆಯಲ್ಲೂ ಜಗನ್‌ಮೋಹನ್‌ ರೆಡ್ಡಿ ನೇತೃತ್ವದ ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷಕ್ಕೆ ಭಾರೀ ಹಿನ್ನಡೆಯಾಗಿದೆ. ಟಿಡಿಪಿ-ಬಿಜೆಪಿ-ಜನಸೇನಾ ಪಕ್ಷ (ಜೆಎಸ್‌ಪಿ) ಮೈತ್ರಿಯು ಲೋಕಸಭೆ (ಎಲ್‌ಎಸ್) ಚುನಾವಣೆಯಲ್ಲಿ ಆಡಳಿತಾರೂಢ ವೈಎಸ್‌ಆರ್ ಕಾಂಗ್ರೆಸ್ ಪಕ್ಷಕ್ಕೆ (ವೈಎಸ್‌ಆರ್‌ಸಿಪಿ) ಹೀನಾಯ ಸೋಲು ನೀಡಲು ಮುಂದಾಗಿದೆ ಎನ್ನುವ ಮಾಹಿತಿ ಭಾರತೀಯ ಚುನಾವಣಾ ಆಯೋಗ ಪ್ರಕಟಿಸಿರುವ ಆರಂಭಿಕ ಟ್ರೆಂಡ್‌ನಿಂದ ಗೊತ್ತಾಗಿದೆ. 2019ರ ಚುನಾವಣೆಯಲ್ಲಿ ವೈಎಸ್‌ಆರ್‌ ಕಾಂಗ್ರೆಸ್‌ ದಾಖಲೆಯ 22 ಸಂಸದ ಸ್ಥಾನಗಳಲ್ಲಿ ಗೆಲುವು ಕಂಡಿತ್ತು. ಆದರೆ, ಈ ಬಾರಿ ಕೇವಲ 3 ಸ್ಥಾನಗಳಲ್ಲಿ ಮಾತ್ರವೇ ಗೆಲುವು ಸಾಧಿಸಲಿದೆ ಎನ್ನಲಾಗಿದೆ. ಉತ್ತಮ ಆಡಳಿತದ ಭರವಸೆ ನೀಡಿ ಆಂಧ್ರದಲ್ಲಿ ಅಧಿಕಾರ ಹಿಡಿಯುವನ್ನಿ ಬಿಜೆಪಿ-ಟಿಡಿಪಿ-ಜೆಎಸ್‌ಪಿ ಮೈತ್ರಿ ಜನತೆಯ ವಿಶ್ವಾಸ ಗಳಿಸುವಲ್ಲಿ ಯಶಸ್ವಿಯಾಗಿದೆ. ಆಂಧ್ರಪ್ರದೇಶಕ್ಕೆ ಮೇ 13 ರಂದು ಒಂದೇ ಹಂತದಲ್ಲಿ ಮತದಾನ ನಡೆದಿತ್ತು. ಇದು 18ನೇ ಲೋಕಸಭೆ ಚುನಾವಣೆಯ ನಾಲ್ಕನೇ ಹಂತದ ಮತದಾನವಾಗಿತ್ತು.2019ರ ಚುನಾವಣೆಯಲ್ಲಿ ವೈಎಸ್‌ಆರ್‌ಪಿ 22 ಸೀಟ್‌ಗಳಲ್ಲಿ ಗೆಲುವು ಕಂಡಿದ್ದರೆ, ಟಿಡಿಪಿ ಮೂರು ಸ್ಥಾನಗಳಲ್ಲಿ ಜಯ ಸಾಧಿಸಿತ್ತು. 2014ರ ಚುನಾವಣೆಯಲ್ಲಿ ಟಿಡಿಪಿ 15 ಸೀಟ್‌ಗಳಲ್ಲಿ ಗೆಲುವು ಕಂಡಿದ್ದರೆ, ವೈಎಸ್‌ಆರ್‌ ಕಾಂಗ್ರೆಸ್‌ 8 ಸೀಟ್‌ಗಳಲ್ಲಿ ಜಯ ಸಾಧಿಸಿತ್ತು. ಬಿಜೆಪಿ 2 ಸೀಟ್‌ ಪಡೆದುಕೊಂಡಿತ್ತು. ಟಿಡಿಪಿ-ಬಿಜೆಪಿ-ಜೆಎಸ್‌ಪಿ ಮೈತ್ರಿಯಿಂದಲೇ ಈ ಬದಲಾವಣೆ ದಾಖಲಾಗಿದೆ. 2019ರಲ್ಲಿ ಎನ್‌ಡಿಎಯಿಂದ ಟಿಡಿಪಿ ಬೇರ್ಪಟ್ಟಿತ್ತು. ಇದರ ಬೆನ್ನಲ್ಲಿಯೇ 2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ವೋಟ್‌ ಶೇರ್‌ ಶೇ. 7.18 ರಿಂದ ಶೇ. 0.96ಕ್ಕೆ ತಲುಪಿತ್ತು. ಇದು ನೋಟಾಗಿಂತಲೂ ಕಡಿಮೆಯಾಗಿತ್ತು. ಶ್ರೀಕಾಕುಳಂ, ವಿಜಯನಗರಂ ಮತ್ತು ವಿಶಾಖಪಟ್ಟಣಂ ಜಿಲ್ಲೆಗಳಲ್ಲಿ ಬಿಜೆಪಿ-ಟಿಡಿಪಿ-ಜೆಎಸ್‌ಪಿ ಮೈತ್ರಿಕೂಟ ಮುನ್ನಡೆ ಸಾಧಿಸಿದೆ.ಟಿಡಿಪಿ ನಾಯಕರ ಭೇಟಿಗೆ ಮುಂದಾದ ಕಾಂಗ್ರೆಸ್‌: ಟಿಡಿಪಿ ಇಲ್ಲದೆ ಬಿಜೆಪಿ ಸರ್ಕಾರ ರಚಿಸುವ ಸ್ಥಿತಿಯಲ್ಲಿಲ್ಲದ ಕಾರಣ ಕಾಂಗ್ರೆಸ್ ಟಿಡಿಪಿಯನ್ನು ರೀಚ್‌ ಆಗಲು ಪ್ರಯತ್ನಿಸುತ್ತಿದೆ. ಆದರೆ, ನಾಯ್ಡು ಅವರು ಕಾಂಗ್ರೆಸ್ ಜೊತೆ ಯಾವುದೇ ಮಾತುಕತೆ ನಡೆಸಲು ಸಿದ್ಧರಿಲ್ಲ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ. : ಪೆನ್ ಡ್ರೈವ್ ಕಮಾಲ್, ಹಾಸನದಲ್ಲಿ ಪ್ರಜ್ವಲ್ ರೇವಣ್ಣಂಗೆ ಸೋಲು 18ನೇ ಲೋಕಸಭೆಯ 543 ಸದಸ್ಯರನ್ನು ಆಯ್ಕೆ ಮಾಡಲು ಭಾರತದಲ್ಲಿ 19 ಏಪ್ರಿಲ್ 2024 ರಿಂದ 1 ಜೂನ್ 2024 ರವರೆಗೆ ಸಾರ್ವತ್ರಿಕ ಚುನಾವಣೆಗಳು ನಡೆದಿದ್ದವು. ಚುನಾವಣೆಗಳು ಏಳು ಹಂತಗಳಲ್ಲಿ ನಡೆದಿದ್ದು ಇಂದು ಫಲಿತಾಂಶ ಪ್ರಕಟವಾಗಿದೆ. ಚುನಾವಣೆಗೂ ಮುನ್ನವೇ ಸೂರತ್‌ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಅಧಿಕಾರಕ್ಕೆ ಏರಲು 272 ಸೀಟ್‌ಗಳ ಗೆಲುವು ಮ್ಯಾಜಿಕ್‌ ನಂಬರ್‌ ಆಗಿದೆ. ಈ ಬಾರಿ ಒಟ್ಟು ಶೇ. 66.33ರಷ್ಟು ಮತದಾನವಾಗಿದೆ. ಬಿಜೆಪಿ ಏಕಾಂಗಿಯಾಗಿ 441 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಿದ್ದರೆ, ಕಾಂಗ್ರೆಸ್‌ 328 ಕ್ಷೇತ್ರದಲ್ಲಿ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿದೆ. ಬಹುತೇಕ ಎಲ್ಲಾ ಎಕ್ಸಿಟ್‌ ಪೋಲ್‌ಗಳು ಕೂಡ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಅಧಿಕಾರಯುತವಾಗಿ ಮತ್ತೊಮ್ಮೆ ಅಧಿಕಾರಕ್ಕೆ ಏರಲಿದೆ ಎನ್ನುವ ಸಮೀಕ್ಷೆ ನೀಡಿದ್ದವು. ದೈನಿಕ್‌ ಭಾಸ್ಕರ್‌ ನೀಡಿದ್ದ 316 ಸೀಟ್‌ಗಳು ಎಕ್ಸಿಟ್‌ ಪೋಲ್‌ನಲ್ಲಿ ಎನ್‌ಡಿಎಯ ಕನಿಷ್ಠವಾಗಿದ್ದರೆ, ಟುಡೇಸ್‌ ಚಾಣಕ್ಯದ 400 ಸೀಟ್‌ಗಳು ಗರಿಷ್ಠವಾಗಿದ್ದವು. : ಎನ್‌ಡಿಎ ಮೈತ್ರಿಕೂಟಕ್ಕೆ ಈ ಬಾರಿ ಸರಳ ಬಹುಮತ