: ಬೆಂಗಳೂರು ಜನರೇ ಅಲರ್ಟ್‌, ಈ ಎರಡು ದಿನ ನಗರಕ್ಕೆ ನೀರು ಪೂರೈಕೆ ಇಲ್ಲ! ಬೆಂಗಳೂರಿನಲ್ಲಿ ಮುಂದಿನ ತಿಂಗಳ ಎರಡು ದಿನಗಳ ಕಾಲ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ. ಬೆಂಗಳೂರು (ಮೇ.29):ಉದ್ಯಾನನಗರಿಯ ಜನರಿಗೆ ಜೂನ್‌ ತಿಂಗಳ ಆರಂಭದಲ್ಲಿಯೇ ನೀರಿನ ಸಮಸ್ಯೆ ( ) ಕಾಡಲಿದೆ. ಎಲೆಕ್ಷನ್‌ ರಿಸಲ್ಟ್‌ ಬರುವ ದಿನವೇ ಬೆಂಗಳೂರಿಗೆ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ. ಕಾವೇರಿಯ ವಿವಿಧ ಹಂತದ ( 5th ) ಯೋಜನೆಗಳ ಅನುಷ್ಠಾ ಸಂಬಂಧ ನಗರಕ್ಕೆ ಜೂನ್‌ 4 ಮತ್ತು ಜೂನ್‌ 5 ರಂದು ನೀರಿನ ಪೂರೈಕೆ ಇರೋದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದೆ. ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ಕಾವೇರಿ 5ನೇ ಹಂತದ ಯೋಜನೆಗಳನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ನೀರಿನ ಪೂರೈಕೆ ಸ್ಥಗಿತ ಮಾಡಲಿದೆ. ಈ ಕಾರಣಕ್ಕಾಗಿ ಕಾವೇರಿ 1, 2 ಮತ್ತು 3ನೇ ಹಂತದ ಘಟಕಗಳಲ್ಲಿ ಬೆಳಗ್ಗೆ 6 ರಿಂದ ಸಂಜೆ 6ರವರೆಗೆ ಅಂದರೆ 12 ಗಂಟೆಗಳ ಕಾಲ ನೀರು ಸರಬರಾಜು ಸ್ಥಗಿತವಾಗಲಿದೆ. ಇನ್ನು ಕಾವೇರಿ 4ನೇ ಹಂತದಲ್ಲಿ 1 ಮತ್ತು 2ನೇ ಘಟ್ಟಗಳ ನೀರು ಸರಬರಾಜು ಘಟಕಗಳಲ್ಲಿ ಬೆಳಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಅಂದರೆ 4 ಗಂಟೆಗಳ ಕಾಲ ನೀರು ಸರಬರಾಜು ವ್ಯತ್ಯಯವಾಗಲಿದೆ. ಜೂನ್‌ 4 ಹಾಗೂ ಜೂನ್‌ 5 ರಂದು ಬೆಂಗಳೂರು ನಗರಕ್ಕೆ ಸರಬರಾಜಾಗುವ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಪ್ರಕಟಣೆಯ ಮೂಲಕ ತಿಳಿಸಿದೆ. ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸಲು ಹಾಗೂ ಅಗತ್ಯವಿರುವ ನೀರನ್ನು ಶೇಖರಿಸಿಟ್ಟುಕೊಳ್ಳಬೇಕು ಎಂದು ತಿಳಿಸಿದೆ.