ಬಾಲಿಯಲ್ಲಿ ಪತ್ನಿ-ಮಕ್ಕಳ ಜತೆ ಡೇವಿಡ್ ವಾರ್ನರ್ ಮೋಜು-ಮಸ್ತಿ..! ಫೋಟೋಗಳು ಇಲ್ಲಿವೆ ನೋಡಿ. ಬಾಲಿ: ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಸ್ಪೋಟಕ ಆರಂಭಿಕ ಬ್ಯಾಟರ್ ಡೇವಿಡ್ ವಾರ್ನರ್, ಸದ್ಯ ಕ್ರಿಕೆಟ್‌ನಿಂದ ಬಿಡುವು ಪಡೆದುಕೊಂಡಿದ್ದು, ತಮ್ಮ ಕುಟುಂಬದ ಜತೆ ಇಂಡೋನೇಷ್ಯಾದ ಬಾಲಿಗೆ ಪ್ರವಾಸ ಕೈಗೊಂಡು ಎಂಜಾಯ್ ಮಾಡಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ. ಬಾಲಿ: ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಸ್ಪೋಟಕ ಆರಂಭಿಕ ಬ್ಯಾಟರ್ ಡೇವಿಡ್ ವಾರ್ನರ್, ಸದ್ಯ ಕ್ರಿಕೆಟ್‌ನಿಂದ ಬಿಡುವು ಪಡೆದುಕೊಂಡಿದ್ದು, ತಮ್ಮ ಕುಟುಂಬದ ಜತೆ ಇಂಡೋನೇಷ್ಯಾದ ಬಾಲಿಗೆ ಪ್ರವಾಸ ಕೈಗೊಂಡು ಎಂಜಾಯ್ ಮಾಡಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ. ಆ್ಯಷಸ್ ಟೆಸ್ಟ್ ಸರಣಿ ಮುಕ್ತಾಯದ ಬಳಿಕ ವಿಶ್ರಾಂತಿಗೆ ಜಾರಿರುವ ಆಸ್ಟ್ರೇಲಿಯಾ ತಂಡದ ಆರಂಭಿಕ ಬ್ಯಾಟರ್ ಡೇವಿಡ್ ವಾರ್ನರ್, ತಮ್ಮ ಹೆಂಡತಿ ಮಕ್ಕಳ ಜತೆ ಬಾಲಿಗೆ ಪ್ರವಾಸ ಮಾಡಿದ್ದು. ಬಿಡುವಿನ ಸಮಯವನ್ನು ಬಿಂದಾಸ್ ಆಗಿಯೇ ಎಂಜಾಯ್ ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣವಾದ ಇನ್‌ಸ್ಟಾಗ್ರಾಂನಲ್ಲಿ ಡೇವಿಡ್‌ ವಾರ್ನರ್‌, ತಮ್ಮ ಫ್ಯಾಮಿಲಿ ಜತೆ ಎಂಜಾಯ್ ಮಾಡುತ್ತಿರುವ ಫೋಟೋಗಳನ್ನು ಹಂಚಿಕೊಂಡಿದ್ದು, ಅಭಿಮಾನಿಗಳ ಮೆಚ್ಚುಗೆಗೆ ವಾರ್ನರ್ ಪಾತ್ರರಾಗಿದ್ದಾರೆ. ಭೂಲೋಕದ ಸ್ವರ್ಗ ಎಂದೇ ಬಿಂಬಿತವಾಗಿರುವ ಇಂಡೋನೇಷ್ಯಾದ ಬಾಲಿ, ಪ್ರವಾಸಿಗರ ನೆಚ್ಚಿನ ತಾಣ ಎನ್ನುವುದರಲ್ಲಿ ಎರಡು ಮಾತಿಲ್ಲ. ಇದೀಗ ಬಾಲಿಯಲ್ಲಿ ವಾರ್ನರ್ ಚಿಲ್ ಮಾಡುತ್ತಿದ್ದಾರೆ. ನೀವು ಕ್ರಿಕೆಟ್ ಫ್ಯಾನ್ಸ್‌ ಆಗಿರಲಿ ಅಥವಾ ಆಗದೇ ಇರಲಿ, ವಾರ್ನರ್ ಅವರು ತಮ್ಮ ಕುಟುಂಬದ ಜತೆ ಬಿಡುವಿನ ಸಮಯವನ್ನು ಎಂಜಾಯ್ ಮಾಡುತ್ತಿರುವುದನ್ನು ಮೆಚ್ಚಿಕೊಳ್ಳದಿರಲು ಸಾಧ್ಯವೇ ಇಲ್ಲ. ಬಾಲಿಯ ಸ್ವಿಮ್ಮಿಂಗ್ ಪೂಲ್‌ನಲ್ಲಿ ಮಗಳು ಎಸೆದ ಚೆಂಡನ್ನು ಡೈವ್ ಮಾಡಿ ಕ್ಯಾಚ್ ಹಿಡಿಯಲು ಯತ್ನಿಸುತ್ತಿರುವ ಕ್ರಿಕೆಟಿಗ ಡೇವಿಡ್ ವಾರ್ನರ್. ಇನ್ನು ಡೇವಿಡ್ ವಾರ್ನರ್, ಕುಟುಂಬದ ಜತೆಗಿರುವ ಫೋಟೋಗಳನ್ನು ಶೇರ್ ಮಾಡುವುದರ ಜತೆಗೆ ಕಳೆದ ಕೆಲವು ದಿನಗಳು ಅದ್ಭುತವಾಗಿದ್ದವು ಎಂದು ಸೋಷಿಯಲ್ ಮೀಡಿಯಾವಾದ ಇನ್‌ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದಾರೆ. ಇತ್ತೀಚೆಗಷ್ಟೇ ಮುಕ್ತಾಯವಾದ ಆ್ಯಷಸ್ ಟೆಸ್ಟ್ ಸರಣಿಯಲ್ಲಿ ಡೇವಿಡ್ ವಾರ್ನರ್ ಅವರ ಪ್ರದರ್ಶನ ಅಷ್ಟೇನು ಗಮನಾರ್ಹವಾಗಿರಲಿಲ್ಲ. ವಾರ್ನರ್ 5 ಟೆಸ್ಟ್‌ ಪಂದ್ಯಗಳ 10 ಇನಿಂಗ್ಸ್‌ಗಳಿಂದ 28.50ರ ಸರಾಸರಿಯಲ್ಲಿ 2 ಅರ್ಧಶತಕ ಸಹಿತ 285 ರನ್ ಗಳಿಸಲಷ್ಟೇ ಶಕ್ತರಾಗಿದ್ದರು. ಆಸ್ಟ್ರೇಲಿಯಾ ತಂಡವು ಆಗಸ್ಟ್ ತಿಂಗಳಾಂತ್ಯದಲ್ಲಿ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳಲಿದೆ. ಇದಾದ ಬಳಿಕ ವಿಶ್ವಕಪ್‌ಗೂ ಮುನ್ನ ಭಾರತ ಎದುರು ಮೂರು ಪಂದ್ಯಗಳ ಏಕದಿನ ಸರಣಿಯನ್ನಾಡಲಿದ್ದು, ಡೇವಿಡ್ ವಾರ್ನರ್‌ ಮೇಲೆ ಸಾಕಷ್ಟು ನಿರೀಕ್ಷೆಗಳಿವೆ. ಆಸ್ಟ್ರೇಲಿಯಾ ಕ್ರಿಕೆಟ್ ತಂಡವು ಭಾರತದಲ್ಲಿ ನಡೆಯಲಿರುವ 2023ರ ಐಸಿಸಿ ಏಕದಿನ ವಿಶ್ವಕಪ್‌ ಮೇಲೆ ಕಣ್ಣಿಟ್ಟಿದೆ. ಹೀಗಾಗಿ ಕಾಂಗರೂ ಪಡೆ ಕಪ್‌ ಎತ್ತಿಹಿಡಿಯಬೇಕೆಂದರೆ ಅನುಭವಿ ಆರಂಭಿಕ ಬ್ಯಾಟರ್ ಡೇವಿಡ್ ವಾರ್ನರ್, ತಂಡಕ್ಕೆ ಸ್ಪೋಟಕ ಆರಂಭ ಒದಗಿಸಿಕೊಡಬೇಕಿದೆ.