ಸೀಮಿತ ಓವರ್‌ಗಳ ಸರಣಿ: ಕ್ರಿಕೆಟ್ ಅಭಿಮಾನಿಗಳಿಗೆ ತಿಳಿದಿರಲೇಬೇಕಾದ ಸಂಗತಿಗಳಿವು * ಭಾರತ-ಇಂಗ್ಲೆಂಡ್ ನಡುವಿನ ಸೀಮಿತ ಓವರ್‌ಗಳ ಸರಣಿಗೆ ಕ್ಷಣಗಣನೆ* ಜುಲೈ 07ರಿಂದ ಜುಲೈ 17ರವರೆಗೆ ನಡೆಯಲಿದೆ ಟಿ20 ಹಾಗೂ ಏಕದಿನ ಸರಣಿ* ಈಗಾಗಲೇ ಟೀಂ ಇಂಡಿಯಾ ಕೂಡಿಕೊಂಡಿರುವ ನಾಯಕ ರೋಹಿತ್ ಶರ್ಮಾ ಸೌಥಾಂಪ್ಟನ್‌(ಜು.06):ಭಾರತ ಹಾಗೂ ಇಂಗ್ಲೆಂಡ್ ತಂಡಗಳ ನಡುವಿನ ಬರ್ಮಿಂಗ್‌ಹ್ಯಾಮ್ ಟೆಸ್ಟ್ ಪಂದ್ಯ ಮುಕ್ತಾಯವಾದ ಬೆನ್ನಲ್ಲೇ ಇದೀಗ ಕ್ರಿಕೆಟ್ ಅಭಿಮಾನಿಗಳ ಚಿತ್ತ ಉಭಯ ತಂಡಗಳ ನಡುವಿನ ಸೀಮಿತ ಓವರ್‌ಗಳ ಸರಣಿಯತ್ತ ಹರಿದಿದೆ. ಇದೇ ಜುಲೈ 07ರಿಂದ ಜುಲೈ 17ರ ವರೆಗೆ ಭಾರತ ಹಾಗೂ ಇಂಗ್ಲೆಂಡ್ ತಂಡಗಳು ಮೂರು ಪಂದ್ಯಗಳ ಟಿ20 ಸರಣಿ ಹಾಗೂ ಮೂರು ಪಂದ್ಯಗಳ ಏಕದಿನ ಸರಣಿಯನ್ನಾಡಲಿವೆ. ಈ ಎಲ್ಲಾ ಪಂದ್ಯಗಳು ಎಲ್ಲಿ? ಯಾವಾಗ ನಡೆಯುತ್ತವೆ? ಯಾವ ವಾಹಿನಿಯ ಮೂಲಕ ವೀಕ್ಷಿಸಬಹುದು ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ. ಈಗಾಗಲೇ ಭಾರತ ಹಾಗೂ ಇಂಗ್ಲೆಂಡ್ ( ) ತಂಡಗಳ ನಡುವಿನ ಸೀಮಿತ ಓವರ್‌ಗಳ ಸರಣಿಗೆ ಉಭಯ ಕ್ರಿಕೆಟ್ ಮಂಡಳಿಗಳು ತಂಡವನ್ನು ಪ್ರಕಟಿಸಿದ್ದು, ಭಾರತ ತಂಡವನ್ನುರೋಹಿತ್ ಶರ್ಮಾ( ) ಮುನ್ನಡೆಸಲಿದ್ದಾರೆ. ಇನ್ನು ಇಯಾನ್ ಮಾರ್ಗನ್ ( ), ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಘೋಷಿಸಿರುವುದರಿಂದಾಗಿ ಇಂಗ್ಲೆಂಡ್ ಸೀಮಿತ ಓವರ್‌ಗಳ ತಂಡದ ನಾಯಕರಾಗಿ ಜೋಸ್ ಬಟ್ಲರ್‌ಗೆ ( ) ಪಟ್ಟ ಕಟ್ಟಲಾಗಿದೆ. ಜುಲೈ 07ರಂದು ಸೌಥಾಂಪ್ಟನ್‌ನ ರೋಸ್‌ ಬೌಲ್ ಮೈದಾನದಲ್ಲಿ ನಡೆಯಲಿರುವ ಮೊದಲ ಟಿ20 ಪಂದ್ಯದಿಂದವಿರಾಟ್ ಕೊಹ್ಲಿಗೆ ( ) ವಿಶ್ರಾಂತಿ ನೀಡಲಾಗಿದ್ದು, ಎರಡನೇ ಟಿ20 ಪಂದ್ಯದಿಂದ ತಂಡ ಕೂಡಿಕೊಳ್ಳಲಿದ್ದಾರೆ. ಇನ್ನುಳಿದಂತೆ ಕೋವಿಡ್‌ನಿಂದಾಗಿ ಬರ್ಮಿಂಗ್‌ಹ್ಯಾಮ್ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದ ರೋಹಿತ್ ಶರ್ಮಾ ( ), ಇದೀಗ ಸಂಪೂರ್ಣ ಗುಣಮುಖರಾಗಿ ತಂಡ ಕೂಡಿಕೊಂಡಿದ್ದು, ಬಲಿಷ್ಠ ಇಂಗ್ಲೆಂಡ್ ಎದುರು ತಂಡವನ್ನು ಯಶಸ್ವಿಯಾಗಿ ಮುನ್ನಡೆಸಲು ಎದುರು ನೋಡುತ್ತಿದ್ದಾರೆ. ಇನ್ನು ಇದೇ ಮೊದಲ ಬಾರಿಗೆ ಆರ್ಶದೀಪ್ ಸಿಂಗ್, ಭಾರತ ಏಕದಿನ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಆರ್ಶದೀಪ್ ಸಿಂಗ್ ಹಾಗೂ ಉಮ್ರಾನ್ ಮಲಿಕ್ ತಮಗೆ ಸಿಗುವ ಅವಕಾಶವನ್ನು ಎರಡು ಕೈಗಳಿಂದ ಬಾಚಿಕೊಳ್ಳಲು ಎದುರು ನೋಡುತ್ತಿದ್ದಾರೆ. ಟಿ20 ಸರಣಿ ಜುಲೈ 7ಕ್ಕೆ ಆರಂಭವಾಗಲಿದ್ದು, ಮೊದಲ ಪಂದ್ಯಕ್ಕೆ ಸೌಥಾಂಪ್ಟನ್‌ ಕ್ರೀಡಾಂಗಣ ಆತಿಥ್ಯ ವಹಿಸಲಿದೆ. ಬಳಿಕ ಜುಲೈ 9, 10ಕ್ಕೆ ಉಳಿದೆರಡು ಪಂದ್ಯಗಳು ಕ್ರಮವಾಗಿ ಬಮಿಂಗ್‌ಹ್ಯಾಮ್‌ ಹಾಗೂ ನಾಟಿಂಗ್‌ಹ್ಯಾಮ್‌ನಲ್ಲಿ ನಿಗದಿಯಾಗಿವೆ. ಏಕದಿನ ಪಂದ್ಯಗಳು ಜುಲೈ 12, 14 ಮತ್ತು 17ಕ್ಕೆ ಕ್ರಮವಾಗಿ ಓವಲ್‌, ಲಾರ್ಡ್ಸ್ ಹಾಗೂ ಮ್ಯಾಂಚೆಸ್ಟರ್‌ನಲ್ಲಿ ನಡೆಯಲಿವೆ. ಭಾರತ ಎದುರಿನ ಸೀಮಿತ ಓವರ್‌ಗಳ ಸರಣಿಗೆ ಬಲಿಷ್ಠ ಇಂಗ್ಲೆಂಡ್ ಕ್ರಿಕೆಟ್ ತಂಡ..! ಭಾರತ ಹಾಗೂ ಇಂಗ್ಲೆಂಡ್ತಂಡಗಳ ನಡುವಿನ ಸೀಮಿತ ಓವರ್‌ಗಳ ಸರಣಿಯನ್ನು ಸೋನಿ ಸ್ಪೋರ್ಟ್ಸ್‌ ನೆಟ್‌ವರ್ಕ್‌ನಲ್ಲಿ ವೀಕ್ಷಿಸಬಹುದಾಗಿದೆ. ಇದಷ್ಟೇ ಅಲ್ಲದೇ ಮೂಲಕವೂ ಭಾರತ ಹಾಗೂ ಇಂಗ್ಲೆಂಡ್ ನಡುವಿನ ಸೀಮಿತ ಓವರ್‌ಗಳ ಸರಣಿಯನ್ನು ವೀಕ್ಷಿಸಬಹುದಾಗಿದೆ. ಭಾರತ-ಇಂಗ್ಲೆಂಡ್ ನಡುವಿನ ಸೀಮಿತ ಓವರ್‌ಗಳ ಸರಣಿಯ ವೇಳಾಪಟ್ಟಿ ಜುಲೈ 07 - ಮೊದಲ ಟಿ20- ಸೌಥಾಂಪ್ಟನ್- ರಾತ್ರಿ 10.30ಜುಲೈ 09 - ಎರಡನೇ ಟಿ20- ಬರ್ಮಿಂಗ್‌ಹ್ಯಾಮ್- ಸಂಜೆ 7.00ಜುಲೈ 10 - ಮೂರನೇ ಟಿ20 - ನಾಟಿಂಗ್‌ಹ್ಯಾಮ್‌- ಸಂಜೆ 7.00 ಜುಲೈ 12 - ಮೊದಲ ಏಕದಿನ - ಲಂಡನ್ - ಸಂಜೆ 5.30ಜುಲೈ 14 - ಎರಡನೇ ಏಕದಿನ - ಲಂಡನ್ - ಸಂಜೆ 5.30ಜುಲೈ 17 - ಮೂರನೇ ಏಕದಿನ - ಮ್ಯಾಂಚೆಸ್ಟರ್ - ಮಧ್ಯಾಹ್ನ 3.30 ಮೊದಲ ಟಿ20 ಪಂದ್ಯಕ್ಕೆ ಭಾರತ ತಂಡ ರೋಹಿತ್ ಶರ್ಮಾ(ನಾಯಕ), ಇಶಾನ್ ಕಿಶನ್, ಋತುರಾಜ್ ಗಾಯಕ್ವಾಡ್, ಸಂಜು ಸ್ಯಾಮ್ಸನ್, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ದಿನೇಶ್ ಕಾರ್ತಿಕ್, ಹಾರ್ದಿಕ್ ಪಾಂಡ್ಯ, ವೆಂಕಟೇಶ್ ಅಯ್ಯರ್, ಯುಜುವೇಂದ್ರ ಚಹಲ್, ಅಕ್ಷರ್ ಪಟೇಲ್, ರವಿ ಬಿಷ್ಣೋಯಿ, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಆವೇಶ್ ಖಾನ್, ಆರ್ಶದೀಪ್‌ ಸಿಂಗ್, ಉಮ್ರಾನ್ ಮಲಿಕ್. ಎರಡನೇ ಹಾಗೂ ಮೂರನೇ ಟಿ20 ಪಂದ್ಯಕ್ಕೆ ಭಾರತ ತಂಡ ರೋಹಿತ್ ಶರ್ಮಾ(ನಾಯಕ), ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ಶ್ರೇಯಸ್ ಅಯ್ಯರ್, ದಿನೇಶ್ ಕಾರ್ತಿಕ್, ರಿಷಭ್ ಪಂತ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಯುಜುವೇಂದ್ರ ಚಹಲ್, ಅಕ್ಷರ್ ಪಟೇಲ್, ರವಿ ಬಿಷ್ಣೋಯಿ, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್, ಆವೇಶ್ ಖಾನ್, ಹರ್ಷಲ್‌ ಪಟೇಲ್, ಉಮ್ರಾನ್ ಮಲಿಕ್. ಇಂಗ್ಲೆಂಡ್ ಎದುರಿನ ಮೂರು ಪಂದ್ಯಗಳ ಏಕದಿನ ಸರಣಿಗೆ ಭಾರತ ತಂಡ ಹೀಗಿದೆ ನೋಡಿ ರೋಹಿತ್ ಶರ್ಮಾ(ನಾಯಕ), ಶಿಖರ್ ಧವನ್, ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್(ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಯುಜುವೇಂದ್ರ ಚಹಲ್‌, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಆರ್ಶದೀಪ್ ಸಿಂಗ್. ಭಾರತ ಎದುರಿನ ಟಿ20 ಸರಣಿಗೆ ಇಂಗ್ಲೆಂಡ್ ತಂಡ ಹೀಗಿದೆ ನೋಡಿ ಜೋಸ್ ಬಟ್ಲರ್(ನಾಯಕ), ಮೋಯಿನ್ ಅಲಿ, ಹ್ಯಾರಿ ಬ್ರೂಕ್, ಸ್ಯಾಮ್ ಕರ್ರನ್, ರಿಚರ್ಡ್ ಗ್ಲೀಸನ್, ಕ್ರಿಸ್ ಜೋರ್ಡನ್‌, ಲಿಯಾಮ್ ಲಿವಿಂಗ್‌ಸ್ಟೋನ್, ಡೇವಿಡ್ ಮಲಾನ್, ಟೈಮಲ್ ಮಿಲ್ಸ್‌, ಮ್ಯಾಥ್ಯೂ ಪಾರ್ಕಿನ್‌ಸನ್, ಜೇಸನ್ ರಾಯ್, ಫಿಲ್ ಸಾಲ್ಟ್‌, ರೀಸೆ ಟೋಪ್ಲೆ, ಡೇವಿಡ್ ಮಲಾನ್. ಭಾರತ ಎದುರಿನ ಏಕದಿನ ಸರಣಿಗೆ ಇಂಗ್ಲೆಂಡ್ ಕ್ರಿಕೆಟ್ ತಂಡ ಹೀಗಿದೆ ನೋಡಿ ಜೋಸ್ ಬಟ್ಲರ್(ನಾಯಕ), ಮೋಯಿನ್ ಅಲಿ, ಜಾನಿ ಬೇರ್‌ಸ್ಟೋವ್, ಹ್ಯಾರಿ ಬ್ರೂಕ್, ಬ್ರೈಡನ್ ಕೇರ್ಸ್‌, ಸ್ಯಾಮ್ ಕರ್ರನ್, ಲಿಯಾಮ್ ಲಿವಿಂಗ್‌ಸ್ಟೋನ್, ಕ್ರೆಗ್ ಓವರ್‌ಟನ್, ಮ್ಯಾಥ್ಯೂ ಪಾರ್ಕಿನ್‌ಸನ್, ಜೋ ರೂಟ್, ಜೇಸನ್ ರಾಯ್, ಫಿಲ್ ಸಾಲ್ಟ್, ಬೆನ್ ಸ್ಟೋಕ್ಸ್‌, ರೀಸೆ ಟೋಪ್ಲೆ, ಡೇವಿಡ್ ವಿಲ್ಲೆ.