T20 ಟೂರ್ನಿಗೆ ಟೀಂ ಇಂಡಿಯಾ ಈ ವೇಗಿಯನ್ನು ಆಯ್ಕೆ ಮಾಡಬಾರದೆಂದ ರವಿಶಾಸ್ತ್ರಿ..! * ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಗೆ ಭರ್ಜರಿ ಸಿದ್ದರೆ ನಡೆಸುತ್ತಿರುವ ಟೀಂ ಇಂಡಿಯಾ* ಮಾರಕ ಬೌಲಿಂಗ್ ದಾಳಿಯ ಮೂಲಕ ಗಮನ ಸೆಳೆಯುತ್ತಿರುವ ಉಮ್ರಾನ್ ಮಲಿಕ್* ಟಿ20 ವಿಶ್ವಕಪ್ ಟೂರ್ನಿಗೆ ಮಲಿಕ್‌ರನ್ನು ಯಾಕೆ ಮಾಡಬಾರದು ಎಂದು ವಿವರಿಸಿದ ರವಿಶಾಸ್ತ್ರಿ ನವದೆಹಲಿ(ಜೂ.11): ಕಳೆದ ವರ್ಷ ಯುಎಇನಲ್ಲಿ ನಡೆದ ಐಸಿಸಿ ಟಿ20 ವಿಶ್ವಕಪ್‌ ( T20 ) ಟೂರ್ನಿಯಲ್ಲಿ ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ, ಲೀಗ್ ಹಂತದಲ್ಲೇ ಹೊರಬೀಳುವ ಮೂಲಕ ಮುಖಭಂಗ ಅನುಭವಿಸಿತ್ತು. ಇದೀಗ ರೋಹಿತ್ ಶರ್ಮಾ ( ) ನೇತೃತ್ವದ ಟೀಂ ಇಂಡಿಯಾ ಮುಂಬರುವ ಅಕ್ಟೋಬರ್‌ ಹಾಗೂ ನವೆಂಬರ್‌ನಲ್ಲಿ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ಸಜ್ಜಾಗುತ್ತಿದೆ. ಇದೆಲ್ಲದರ ನಡುವೆ ಐಪಿಎಲ್‌ ಟೂರ್ನಿಯಲ್ಲಿ ಮಿಂಚಿನ ಪ್ರದರ್ಶನ ತೋರಿದ ಜಮ್ಮು ಮೂಲದ ವೇಗಿ ಉಮ್ರಾನ್ ಮಲಿಕ್ ( ) ಬಗ್ಗೆ ಟೀಂ ಇಂಡಿಯಾ ಮಾಜಿ ಕೋಚ್ ರವಿಶಾಸ್ತ್ರಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ. 15ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿಸನ್‌ರೈಸರ್ಸ್ ಹೈದರಾಬಾದ್( ) ತಂಡದ ಪರ ಉಮ್ರಾನ್ ಮಲಿಕ್ ಸರಾಸರಿ 150+ ಕಿಲೋ ಮೀಟರ್ ವೇಗದಲ್ಲಿ ಬೌಲಿಂಗ್ ಮಾಡುವ ಮೂಲಕ ಎದುರಾಳಿ ಬ್ಯಾಟರ್‌ಗಳನ್ನು ತಬ್ಬಿಬ್ಬು ಮಾಡಿದ್ದರು. ಆರೆಂಜ್ ಆರ್ಮಿ ಪರ ಉಮ್ರಾನ್ ಮಲಿಕ್‌ 14 ಪಂದ್ಯಗಳನ್ನಾಡಿ 22 ವಿಕೆಟ್‌ ಪಡೆದಿದ್ದರು. ಗ್ರೂಪ್ ಹಂತದಲ್ಲಿ ಗುಜರಾತ್ ಟೈಟಾನ್ಸ್ ( ) ಎದುರು ಉಮ್ರಾನ್ ಮಲಿಕ್‌ ಕೇವಲ 25 ರನ್ ನೀಡಿ 5 ವಿಕೆಟ್ ಕಬಳಿಸಿದ್ದರು. ದಕ್ಷಿಣ ಆಫ್ರಿಕಾ ದಿಗ್ಗಜ ವೇಗಿ ಡೇಲ್‌ ಸ್ಟೇನ್‌ ಗರಡಿಯಲ್ಲಿ ಪಳಗಿದ ಉಮ್ರಾನ್ ಮಲಿಕ್ 163.7 ಕಿಲೋ ಮೀಟರ್‌ ವೇಗದಲ್ಲಿ ಬೌಲಿಂಗ್ ಮಾಡಿ ಮಿಂಚಿದ್ದರು. ಇದರ ಬೆನ್ನಲ್ಲೇ ದಕ್ಷಿಣ ಆಫ್ರಿಕಾ ಎದುರಿನ 5 ಪಂದ್ಯಗಳ ಟಿ20 ಸರಣಿಗೆ ಭಾರತ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದರು. ಇದೀಗ ಉಮ್ರಾನ್‌ ಮಲಿಕ್ ಮುಂಬರುವ ಟಿ20 ವಿಶ್ವಕಪ್ ಟೂರ್ನಿಗೆಟೀಂ ಇಂಡಿಯಾದಲ್ಲಿ ಸ್ಥಾನ ಪಡೆಯುವ ಸಾಧ್ಯತೆಯಿದೆ ಎನ್ನುವ ಮಾತುಗಳು ಕೇಳಿಬರಲಾರಂಭಿಸಿವೆ. ಇದರ ಬೆನ್ನಲ್ಲೇ ಟೀಂ ಇಂಡಿಯಾ ಮಾಜಿ ಕೋಚ್ ರವಿಶಾಸ್ತ್ರಿ ( ), ಉಮ್ರಾನ್ ಮಲಿಕ್ ಅವರನ್ನು ಮುಂಬರುವ ಟಿ20 ವಿಶ್ವಕಪ್ ಟೂರ್ನಿಗೆ ಆಯ್ಕೆ ಮಾಡಬಾರದು ಎಂದು ಹೇಳಿದ್ದಾರೆ. ಉಮ್ರಾನ್ ಮಲಿಕ್ ಅವರಿಗೆ ಈಗಲೇಟಿ20 ವಿಶ್ವಕಪ್ ಟೂರ್ನಿಯಲ್ಲಿ ಆಡಿಸಬಾರದು. ವಿಶ್ವಕಪ್ ಟೂರ್ನಿಗೂ ಮುನ್ನ ಅವರು ಸೀಮಿತ ಓವರ್‌ಗಳ ಸರಣಿ ಅದರಲ್ಲೂ 50 ಓವರ್‌ಗಳ ಪಂದ್ಯಗಳನ್ನಾಡಬೇಕು. ಇದರ ಜತೆಗೆ ರೆಡ್ ಬಾಲ್ ಪಂದ್ಯಗಳನ್ನಾಡಬೇಕು. ರೆಡ್ ಬಾಲ್ ಕ್ರಿಕೆಟ್ ಆಡಿ ಅವರು ಬೆಳೆಯಬೇಕು. ಆ ಬಳಿಕ ಅವರ ಪ್ರದರ್ಶನವನ್ನು ನೋಡಿ ತೀರ್ಮಾನಿಸಬೇಕು ಎಂದು ಗೆ ನೀಡಿರುವ ಸಂದರ್ಶನದಲ್ಲಿ ತಿಳಿಸಿದ್ದಾರೆ. T20 ಟೂರ್ನಿಗೂ ಮುನ್ನ ಆಸೀಸ್ ಎದುರು ಟಿ20 ಸರಣಿಯಾಡಲಿದೆ ಟೀಂ ಇಂಡಿಯಾ ದಕ್ಷಿಣ ಆಫ್ರಿಕಾ ಎದುರು ಆಘಾತಕಾರಿ ಸೋಲು ಕಂಡ ಟೀಂ ಇಂಡಿಯಾ ದಕ್ಷಿಣ ಆಫ್ರಿಕಾ ಎದುರಿನ 5 ಪಂದ್ಯಗಳ ಟಿ20 ಸರಣಿಗೆ ಉಮ್ರಾನ್ ಮಲಿಕ್‌ ಭಾರತ ಕ್ರಿಕೆಟ್‌ ತಂಡದಲ್ಲಿ ಸ್ಥಾನ ಪಡೆದಿದ್ದರೂ ಸಹಾ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆದಿರಲಿಲ್ಲ. ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಇಶಾನ್ ಕಿಶನ್ ಬಾರಿಸಿದ ಸ್ಪೋಟಕ ಅರ್ಧಶತಕದ ನೆರವಿನಿಂದ 4 ವಿಕೆಟ್ ಕಳೆದುಕೊಂಡು 211 ರನ್ ಬಾರಿಸಿತ್ತು. ಈ ಗುರಿಯನ್ನು ರಕ್ಷಿಸಿಕೊಳ್ಳಲು ಟೀಂ ಇಂಡಿಯಾ ವಿಫಲವಾಗಿತ್ತು. ಇದೀಗ ಎರಡನೇ ಟಿ20 ಪಂದ್ಯವು ಜೂನ್ 12ರಂದು ಕಟಕ್‌ನ ಬಾರಬತಿ ಸ್ಟೇಡಿಯಂನಲ್ಲಿ ನಡೆಯಲಿದ್ದು, ಉಮ್ರಾನ್‌ ಮಲಿಕ್ ಟೀಂ ಇಂಡಿಯಾಗೆ ಪಾದಾರ್ಪಣೆ ಮಾಡುವ ಸಾಧ್ಯತೆಯಿದೆ.