ಪರಿಶ್ರಮಕ್ಕೆ ಸಿಕ್ಕ ಬೆಲೆ: ಟೀಂ ಇಂಡಿಯಾಗೆ ಭರ್ಜರಿ ಕಮ್‌ಬ್ಯಾಕ್‌ ಮಾಡಿದ ದಿನೇಶ್ ಕಾರ್ತಿಕ್‌...! * ಟೀಂ ಇಂಡಿಯಾಗೆ ಕಮ್‌ಬ್ಯಾಕ್‌ ಮಾಡಿದ ದಿನೇಶ್‌ ಕಾರ್ತಿಕ್‌ * ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡ ಮಿಂಚುತ್ತಿರುವ ಡಿಕೆ ಬಾಸ್ * ಮ್ಯಾಚ್ ಫಿನಿಶರ್ ಆಗಿ ಗಮನ ಸೆಳೆದಿರುವ ಅನುಭವಿ ವಿಕೆಟ್ ಕೀಪರ್‌ ನವದೆಹಲಿ(ಮೇ.23): ಅನುಭವಿ ವಿಕೆಟ್‌ ಕೀಪರ್‌ ಬ್ಯಾಟರ್‌ದಿನೇಶ್ ಕಾರ್ತಿಕ್‌( - ), 15ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ( ) ಟೂರ್ನಿಯಲ್ಲಿ ಭರ್ಜರಿ ಪ್ರದರ್ಶನ ತೋರುವ ಮೂಲಕ ಬಿಸಿಸಿಐ ಆಯ್ಕೆ ಸಮಿತಿ ( ) ಮನಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಸಕ್ತ ಆವೃತ್ತಿಯ ಐಪಿಎಲ್‌ ಟೂರ್ನಿಯಲ್ಲಿರಾಯಲ್ ಚಾಲೆಂಜರ್ಸ್‌ ಬೆಂಗಳೂರು( ) ತಂಡದ ಪರ ದಿನೇಶ್ ಕಾರ್ತಿಕ್‌ ಮ್ಯಾಚ್ ಫಿನಿಶರ್ ಆಗಿ ಗಮನ ಸೆಳೆದಿದ್ದು, ಡೆತ್‌ ಓವರ್‌ನಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಮೂಲಕ ಏಕಾಂಗಿಯಾಗಿ ತಂಡಕ್ಕೆ ಗೆಲುವು ತಂದುಕೊಟ್ಟಿದ್ದಾರೆ. ಗ್ರೂಪ್‌ ಹಂತದಲ್ಲಿ ದಿನೇಶ್ ಕಾರ್ತಿಕ್‌, ಆರ್‌ಸಿಬಿ ಪರ 191ರ ಸ್ಟ್ರೈಕ್‌ರೇಟ್‌ನಲ್ಲಿ 287 ರನ್ ಸಿಡಿಸುವ ಮೂಲಕ ಮಿಂಚಿದ್ದು, ಇದೀಗ ದಕ್ಷಿಣ ಆಫ್ರಿಕಾ ಎದುರು ತವರಿನಲ್ಲಿ ನಡೆಯಲಿರುವ 5 ಪಂದ್ಯಗಳ ಟಿ20 ಸರಣಿಗೆ ಭಾರತ ತಂಡದಲ್ಲಿ ಸ್ಥಾನ ಪಡೆಯುವ ಮೂಲಕ ಭರ್ಜರಿಯಾಗಿಯೇ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಕಮ್‌ಬ್ಯಾಕ್‌ ಮಾಡಿದ್ದಾರೆ. 2019ರಲ್ಲಿ ಇಂಗ್ಲೆಂಡ್‌ನಲ್ಲಿ ನಡೆದ ಐಸಿಸಿ ಏಕದಿನ ವಿಶ್ವಕಪ್ ( 2019) ಟೂರ್ನಿಯ ಸೆಮಿಫೈನಲ್‌ನಲ್ಲಿ ನ್ಯೂಜಿಲೆಂಡ್ ಎದುರು ಭಾರತ ಕ್ರಿಕೆಟ್ ತಂಡವು ಆಘಾತಕಾರಿ ಸೋಲು ಕಾಣುವ ಮೂಲಕ ಟೂರ್ನಿಯಿಂದ ಹೊರಬಿದ್ದಿತ್ತು. ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ದಿನೇಶ್ ಕಾರ್ತಿಕ್‌ ನಿರಾಶಾದಾಯಕ ಪ್ರದರ್ಶನ ತೋರಿದ್ದರಿಂದಾಗಿ ತಂಡದಿಂದಲೇ ಹೊರಬಿದ್ದಿದ್ದರು. ಇದಾದ ಬಳಿಕ ಭಾರತ ತಂಡದಲ್ಲಿ ಸ್ಥಾನಗಿಟ್ಟಿಸಲು ದಿನೇಶ್ ಕಾರ್ತಿಕ್ ಸಾಕಷ್ಟು ಪ್ರಯತ್ನಪಟ್ಟರಾದರೂ ಯಶಸ್ವಿಯಾಗಿರಲಿಲ್ಲ. ಆದರೆ 2022ರ ಐಪಿಎಲ್‌ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡದ ಪಾಲಿಗೆ ದಿನೇಶ್‌ ಕಾರ್ತಿಕ್ ಉಪಯುಕ್ತ ಸಂದರ್ಭದಲ್ಲಿ ರನ್‌ಗಳಿಸುವ ಮೂಲಕ ಅಕ್ಷರಶಃ ಆಪತ್ಬಾಂದವ ಎನಿಸಿದ್ದಾರೆ.15ನೇ ಆವೃತ್ತಿಯ ಇಂಡಿಯನ್‌ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ದಿನೇಶ್ ಕಾರ್ತಿಕ್ ಚೆಂಡನ್ನು ಬೌಂಡರಿಯ ಮೂಲೆ ಮೂಲೆಗೆ ಅಟ್ಟಿದ್ದಾರೆ. ಕಾರ್ತಿಕ್ ಸ್ಪಷ್ಟವಾದ ಮನಸ್ಥಿತಿಯಲ್ಲಿ ಕಣಕ್ಕಿಳಿಯುತ್ತಿದ್ದು, ಡಿಕೆ ನಿರ್ಭಯವಾಗಿ ಬ್ಯಾಟ್‌ ಬೀಸುತ್ತಿರುವ ರೀತಿಯು ಆಯ್ಕೆ ಸಮಿತಿಯ ಮನಗೆಲ್ಲುವಂತೆ ಮಾಡಿದೆ. ಮುಂಬರುವ ಅಕ್ಟೋಬರ್ ಹಾಗೂ ನವೆಂಬರ್‌ನಲ್ಲಿ ಆಸ್ಟ್ರೇಲಿಯಾದಲ್ಲಿ ನಡೆಯಲಿರುವಐಸಿಸಿ ಟಿ20 ವಿಶ್ವಕಪ್‌ ಟೂರ್ನಿಯನ್ನು ಗಮನದಲ್ಲಿಟ್ಟುಕೊಂಡು ಬಿಸಿಸಿಐ ಆಯ್ಕೆ ಸಮಿತಿಯು ಮ್ಯಾಚ್‌ ಫಿನಿಶರ್‌ ರೂಪದಲ್ಲಿ ದಿನೇಶ್‌ ಕಾರ್ತಿಕ್‌ಗೆ ತಂಡದಲ್ಲಿ ಮಣೆ ಹಾಕಿದೆ. ಟಿ20 ಸರಣಿ ಹಾಗೂ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ಪ್ರಕಟ, ಉಮ್ರಾನ್ ಮಲಿಕ್‌‌ಗೆ ಚಾನ್ಸ್! ದಿನೇಶ್ ಕಾರ್ತಿಕ್‌, ಟೀಂ ಇಂಡಿಯಾಗೆ ಆಯ್ಕೆಯಾಗುತ್ತಿದ್ದಂತೆಯೇ ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಮಾಡಿರುವ ತಮಿಳುನಾಡು ಮೂಲದ ಬ್ಯಾಟರ್, ನಿಮ್ಮ ಮೇಲೆ ನಿಮಗೆ ವಿಶ್ವಾಸವಿದ್ದರೆ, ಎಲ್ಲವೂ ಅಂದುಕೊಂಡಂತೆಯೇ ಆಗುತ್ತದೆ. ನನ್ನ ಮೇಲೆ ನಂಬಿಕೆಯಿಟ್ಟು ಬೆಂಬಲಿಸಿದ ಎಲ್ಲರಿಗೂ ಧನ್ಯವಾದಗಳು. ಕಠಿಣ ಪರಿಶ್ರಮ ಮುಂದುವರೆಯಲಿದೆ ಎಂದು ದಿನೇಶ್ ಕಾರ್ತಿಕ್ ಟ್ವೀಟ್‌ ಮಾಡಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ದದ ಜೂನ್ 09ರಿಂದ 5 ಪಂದ್ಯಗಳ ಟಿ20 ಸರಣಿ ಆರಂಭವಾಗಲಿದ್ದು, ಭಾರತ ತಂಡದಲ್ಲಿ ನಾಯಕ ಕೆ ಎಲ್ ರಾಹುಲ್, ರಿಷಭ್ ಪಂತ್, ಇಶಾನ್ ಕಿಶನ್ ಹಾಗೂ ದಿನೇಶ್ ಕಾರ್ತಿಕ್‌ ಹೀಗೆ ನಾಲ್ವರು ತಜ್ಞ ವಿಕೆಟ್‌ ಕೀಪರ್‌ ಬ್ಯಾಟರ್‌ಗಳಿದ್ದು, ಆಡುವ ಹನ್ನೊಂದರ ಬಳಗದಲ್ಲಿ ಯಾರೆಲ್ಲಾ ಸ್ಥಾನ ಪಡೆಯಲಿದ್ದಾರೆ ಎನ್ನುವುದನ್ನು ಕಾದು ನೋಡಬೇಕಿದೆ. ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಟಿಂ ಇಂಡಿಯಾ ಕೆಎಲ್ ರಾಹುಲ್(ನಾಯಕ), ಋತುರಾಜ್ ಗಾಯಕ್ವಾಡ್, ಇಶಾನ್ ಕಿಶಾನ್, ದೀಪಕ್ ಹೂಡ, ಶ್ರೇಯಸ್ ಅಯ್ಯರ್, ರಿಷಭ್ ಪಂತ್, ದಿನೇಶ್ ಕಾರ್ತಿಕ್, ಹಾರ್ದಿಕ್ ಪಾಂಡ್ಯ, ವೆಂಕಟೇಶ್ ಅಯ್ಯರ್, ಯಜುವೇಂದ್ರ ಚಹಾಲ್, ಕುಲ್ದೀಪ್ ಯಾದವ್, ಅಕ್ಸರ್ ಪಟೇಲ್, ರವಿ ಬಿಷ್ಣೋಯ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅವೇಶ್ ಖಾನ್, ಅರ್ಶದೀಪ್ ಸಿಂಗ್, ಉಮ್ರಾನ್ ಮಲಿಕ್