2022: ರಾಜಸ್ಥಾನ ರಾಯಲ್ಸ್ ಎದುರು ಟಾಸ್ ಗೆದ್ದ ಪಂಜಾಬ್ ಬ್ಯಾಟಿಂಗ್ ಆಯ್ಕೆ * ಮುಂಬೈನ ವಾಂಖೇಡೆ ಮೈದಾನದಲ್ಲಿ ಟಾಸ್ ಗೆದ್ದ ಪಂಜಾಬ್ ಬ್ಯಾಟಿಂಗ್ ಆಯ್ಕೆ * ಮಹತ್ವದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್‌- ರಾಜಸ್ಥಾನ ರಾಯಲ್ಸ್ ಮುಖಾಮುಖಿ * ರಾಜಸ್ಥಾನ ರಾಯಲ್ಸ್ ತಂಡದಲ್ಲಿ ಒಂದು ಬದಲಾವಣೆ ಮುಂಬೈ(ಮೇ.07): 15ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ( ) ಟೂರ್ನಿಯ 52ನೇ ಪಂದ್ಯದಲ್ಲಿಂದು ರಾಜಸ್ಥಾನ ರಾಯಲ್ಸ್ ( ) ಹಾಗೂ ಪಂಜಾಬ್ ಕಿಂಗ್ಸ್‌ ( ) ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ನಾಯಕ ಮಯಾಂಕ್‌ ಅಗರ್‌ವಾಲ್ ( ) ಮೊದಲು ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ. ಈ ಹೈವೋಲ್ಟೇಜ್ ಪಂದ್ಯಕ್ಕೆ ಇಲ್ಲಿನ ವಾಂಖೇಡೆ ಮೈದಾನ ಆತಿಥ್ಯವನ್ನು ವಹಿಸಿದೆ. ಕಳೆದ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿದ್ದ ಪಂಜಾಬ್ ಕಿಂಗ್ಸ್‌ ತಂಡವು ಈ ಪಂದ್ಯಕ್ಕೆ ಯಾವುದೇ ಬದಲಾವಣೆ ಮಾಡಿಲ್ಲ. ಕಳೆದ ಪಂದ್ಯದಲ್ಲಿ ಗೆಲುವು ಸಾಧಿಸಿದ ತಂಡವೇ ಇಂದಿನ ಪಂದ್ಯಕ್ಕೂ ಕಣಕ್ಕಿಳಿದಿದೆ. ಇನ್ನು ರಾಜಸ್ಥಾನ ರಾಯಲ್ಸ್ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ಕರುಣ್ ನಾಯರ್ ( ) ಬದಲಿಗೆ ಯಶಸ್ವಿ ಜೈಸ್ವಾಲ್ ( ) ತಂಡ ಕೂಡಿಕೊಂಡಿದ್ದಾರೆ. ಟೂರ್ನಿಯಲ್ಲಿ ಭರ್ಜರಿ ಆರಂಭವನ್ನು ಪಡೆದಿದ್ದ ರಾಜಸ್ಥಾನ ರಾಯಲ್ಸ್ ತಂಡವು ಮಹತ್ವದ ಘಟ್ಟದಲ್ಲಿ ತಮ್ಮ ಲಯವನ್ನು ಕಳೆದುಕೊಂಡಿದ್ದು, ಸತತ ಎರಡು ಪಂದ್ಯಗಳನ್ನು ಸೋತಿರುವ ಸಂಜು ಸ್ಯಾಮ್ಸನ್ ಪಡೆ ಇದೀಗ ಹ್ಯಾಟ್ರಿಕ್ ಸೋಲಿನ ಭೀತಿಗೆ ಸಿಲುಕಿದೆ. ರಾಜಸ್ಥಾನ ರಾಯಲ್ಸ್‌ ಪರ ಮೊದಲ 7 ಪಂದ್ಯಗಳಲ್ಲಿ ಜೋಸ್ ಬಟ್ಲರ್‌ 491 ರನ್ ಸಿಡಿಸಿದ್ದರು, ಆದರೆ ಕಳೆದ ಮೂರು ಪಂದ್ಯಗಳಿಂದ ಬಟ್ಲರ್ ಬ್ಯಾಟಿಂದ ಕೇವಲ 97 ರನ್‌ಗಳು ಮಾತ್ರ ಬಂದಿವೆ. ಇನ್ನೊಂದೆಡೆ ಯುಜುವೇಂದ್ರ ಚಹಲ್ ಕೂಡಾ ಮೊದಲ 7 ಇನಿಂಗ್ಸ್‌ಗಳಲ್ಲಿ 18 ವಿಕೆಟ್ ಕಬಳಿಸಿದ್ದರು, ಆದರೆ ಕಳೆದ ಮೂರು ಇನಿಂಗ್ಸ್‌ಗಳಿಂದ ಚಹಲ್ ಗಳಿಸಿದ್ದು ಕೇವಲ ಒಂದು ವಿಕೆಟ್ ಮಾತ್ರ. ಈ ಇಬ್ಬರು ಆಟಗಾರರ ಜತೆಗೆ ನಾಯಕ ಸಂಜು ಸ್ಯಾಮ್ಸನ್, ಶಿಮ್ರೊನ್‌ ಹೆಟ್ಮೇಯರ್ ಬ್ಯಾಟಿಂಗ್‌ನಲ್ಲಿ ಜವಾಬ್ದಾರಿಯುತ ಪ್ರದರ್ಶನ ತೋರಬೇಕಿದೆ. ಇನ್ನು ಬೌಲಿಂಗ್‌ನಲ್ಲಿ ಟ್ರೆಂಟ್ ಬೌಲ್ಟ್‌, ಪ್ರಸಿದ್ಧ್ ಕೃಷ್ಣ ಹಾಗೂ ಕುಲ್ದೀಪ್ ಸೆನ್‌ ಕೂಡ ಮಿಂಚ ಬೇಕಿದೆ. ತಂಡಗಳು ಹೀಗಿವೆ ನೋಡಿ ರಾಜಸ್ಥಾನ ರಾಯಲ್ಸ್: ಜೋಸ್ ಬಟ್ಲರ್, ದೇವದತ್ ಪಡಿಕ್ಕಲ್, ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್(ನಾಯಕ& ವಿಕೆಟ್ ಕೀಪರ್), ಶಿಮ್ರೊನ್ ಹೆಟ್ಮೇಯರ್, ರಿಯಾನ್ ಪರಾಗ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್‌, ಪ್ರಸಿದ್ದ್ ಕೃಷ್ಣ, ಯುಜುವೇಂದ್ರ ಚಹಲ್, ಕುಲ್ದೀಪ್ ಸೆನ್ ಪಂಜಾಬ್ ಕಿಂಗ್ಸ್‌: ಮಯಾಂಕ್ ಅಗರ್‌ವಾಲ್(ನಾಯಕ), ಶಿಖರ್ ಧವನ್, ಜಾನಿ ಬೇರ್‌ಸ್ಟೋವ್, ಭನುಕಾ ರಾಜಪಕ್ಸ, ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ(ವಿಕೆಟ್ ಕೀಪರ್), ರಿಷಿ ಧವನ್, ಕಗಿಸೋ ರಬಾಡ, ರಾಹುಲ್ ಚಹರ್, ಆರ್ಶದೀಪ್ ಸಿಂಗ್, ಸಂದೀಪ ಶರ್ಮಾ ಸ್ಥಳ: ಮುಂಬೈ, ವಾಂಖೇಡೆ ಸ್ಟೇಡಿಯಂಪಂದ್ಯ: ಮಧ್ಯಾಹ್ನ 3.30ಕ್ಕೆನೇರ ಪ್ರಸಾರ: ಸ್ಟಾರ್‌ ಸ್ಪೋರ್ಟ್ಸ್‌