2022: ಇಂದು ಹ್ಯಾಟ್ರಿಕ್ ಸೋಲಿನ ಸರಪಳಿ ಕಳಚುತ್ತಾ ಆರ್‌ಸಿಬಿ..? * ಆರ್‌ಸಿಬಿ ತಂಡಕ್ಕಿಂದು ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಸವಾಲು * ಮಾಡು ಇಲ್ಲವೇ ಮಡಿ ಪಂದ್ಯಕ್ಕೆ ಸಜ್ಜಾದ ಫಾಫ್ ಡು ಪ್ಲೆಸಿಸ್‌ ಪಡೆ * ಎಂಸಿಎ ಮೈದಾನದಲ್ಲಿ ನಡೆಯಲಿದೆ ಹೈವೋಲ್ಟೇಜ್‌ ಪಂದ್ಯ ಪುಣೆ(ಮೇ.04): 15ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ( ) ಟೂರ್ನಿಯ 49ನೇ ಪಂದ್ಯದಲ್ಲಿಂದು ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ( ) ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ( ) ತಂಡಗಳು ಮುಖಾಮುಖಿಯಾಗುತ್ತಿದ್ದು, ಈ ಹೈವೋಲ್ಟೇಜ್ ಪಂದ್ಯಕ್ಕೆ ಇಲ್ಲಿನ ಎಂಸಿಎ ಮೈದಾನ ಆತಿಥ್ಯವನ್ನು ವಹಿಸಲಿದೆ. ಪ್ರಸಕ್ತ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಹ್ಯಾಟ್ರಿಕ್ ಸೋಲು ಅನುಭವಿಸಿ ಕಂಗಾಲಾಗಿರುವ ಅರ್‌ಸಿಬಿ ತಂಡವು ಪ್ಲೇ ಆಫ್‌ ಕನಸನ್ನು ಜೀವಂತವಾಗಿರಿಸಿಕೊಳ್ಳಬೇಕಿದ್ದರೆ ಇಂದಿನ ಪಂದ್ಯವನ್ನು ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿದೆ. ಫಾಫ್ ಡು ಪ್ಲೆಸಿಸ್ ( ) ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮೊದಲು ಆಡಿದ 7 ಪಂದ್ಯಗಳ ಪೈಕಿ 5 ಪಂದ್ಯಗಳನ್ನು ಗೆದ್ದು ಆತ್ಮವಿಶ್ವಾಸದಿಂದ ಬೀಗುತ್ತಿತ್ತು. ಆದರೆ ಇದಾದ ಬಳಿಕ ಸತತ 3 ಪಂದ್ಯಗಳನ್ನು ಸೋಲುವ ಮೂಲಕ ಪ್ಲೇ ಆಫ್ ಹಾದಿಯನ್ನು ದುರ್ಗಮ ಮಾಡಿಕೊಂಡಿದೆ. ಕಳೆದ ಮೂರು ಪಂದ್ಯಗಳಲ್ಲಿ ಆರ್‌ಸಿಬಿ ತಂಡವು ಸನ್‌ರೈಸರ್ಸ್ ಹೈದರಾಬಾದ್ ( ), ರಾಜಸ್ಥಾನ ರಾಯಲ್ಸ್ ( ) ಹಾಗೂ ಗುಜರಾತ್ ಟೈಟಾನ್ಸ್ ( ) ಎದುರು ಆಘಾತಕಾರಿ ಸೋಲು ಕಂಡಿದೆ. ಅದರಲ್ಲೂ ಸನ್‌ರೈಸರ್ಸ್‌ ಹೈದರಾಬಾದ್ ವಿರುದ್ದದ 9 ವಿಕೆಟ್‌ಗಳ ಅಂತರದ ಸೋಲು ಆರ್‌ಸಿಬಿ ನೆಟ್ ರನ್‌ರೇಟ್ ನೆಗೆಟಿವ್ ಹಂತಕ್ಕೆ ಜಾರುವಂತೆ ಮಾಡಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಸದ್ಯ 10 ಪಂದ್ಯಗಳನ್ನಾಡಿ ತಲಾ 5 ಗೆಲುವು ಹಾಗೂ ಸೋಲುಗಳೊಂದಿಗೆ 10 ಅಂಕಗಳ ಸಹಿತ ಅಂಕಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದೆ. ಈ ಹಿಂದಿನ ಮುಖಾಮುಖಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಎದುರು ಆರ್‌ಸಿಬಿ ತಂಡವು 23 ರನ್‌ಗಳ ಅಂತರದ ಸೋಲು ಅನುಭವಿಸಿತ್ತು. ಕಳೆದ ಪಂದ್ಯದ ಸೋಲಿಗೆ ಸೇಡು ತೀರಿಸಿಕೊಳ್ಳಲು ಆರ್‌ಸಿಬಿ ಸಜ್ಜಾಗಿದೆ. ಆರ್‌ಸಿಬಿ ಕಳೆದ 14 ದಿನಗಳಲ್ಲಿ ಗೆಲುವನ್ನೇ ಕಂಡಿಲ್ಲ. ಸತತ 3 ಪಂದ್ಯಗಳಲ್ಲಿ ತಂಡ ಬ್ಯಾಟಿಂಗ್‌ ವೈಫಲ್ಯ ಕಂಡಿದ್ದು, ಹ್ಯಾಟ್ರಿಕ್‌ ಸೋಲು ಅನುಭವಿಸಿದೆ. ತಂಡದ ಬೌಲಿಂಗ್‌ ಸುಧಾರಣೆ ಕಂಡಿದ್ದರೂ, ವೇಗಿ ಮೊಹಮದ್‌ ಸಿರಾಜ್‌ ದುಬಾರಿಯಾಗುತ್ತಿರುವುದು ತಂಡವನ್ನು ಇಕ್ಕಟ್ಟಿಗೆ ಸಿಲುಕಿಸಿದೆ. 2022: ಸಿಎಸ್‌ಕೆ ಎದುರು ಆರ್‌ಸಿಬಿಗಿಂದು ಮಾಡು ಇಲ್ಲವೇ ಮಡಿ ಪಂದ್ಯ..! ಐಪಿಎಲ್ ಇತಿಹಾಸದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು 29 ಬಾರಿ ಮುಖಾಮುಖಿಯಾಗಿದ್ದು, ಈ ಪೈಕಿ ಚೆನ್ನೈ ಸೂಪರ್ ಕಿಂಗ್ಸ್‌ ತಂಡವು ಸ್ಪಷ್ಟ ಮೇಲುಗೈ ಸಾಧಿಸಿದೆ. 29 ಪಂದ್ಯಗಳ ಪೈಕಿ ಸಿಎಸ್‌ಕೆ ತಂಡವು 19 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದರೆ, ಅರ್‌ಸಿಬಿ ತಂಡವು 9 ಪಂದ್ಯಗಳಲ್ಲಿ ಗೆಲುವು ದಾಖಲಿಸಿದೆ. ಇನ್ನೊಂದು ಪಂದ್ಯದ ಫಲಿತಾಂಶ ಹೊರಬಿದ್ದಿರಲಿಲ್ಲ. ಆರ್‌ಸಿಬಿ ಸಂಭಾವ್ಯ ತಂಡ ಹೀಗಿದೆ ನೋಡಿ: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್(ನಾಯಕ), ರಜತ್ ಪಾಟೀದಾರ್‌, ಗ್ಲೆನ್ ಮ್ಯಾಕ್ಸ್‌ವೆಲ್‌, ದಿನೇಶ್ ಕಾರ್ತಿಕ್‌, ಮಹಿಪಾಲ್ ಲೊಮ್ರೊರ್‌, ಶಾಬಾಜ್ ಅಹಮ್ಮದ್‌, ವನಿಂದು ಹಸರಂಗ, ಹರ್ಷಲ್ ಪಟೇಲ್‌, ಮೊಹಮ್ಮದ್ ಸಿರಾಜ್‌, ಜೋಶ್ ಹೇಜಲ್‌ವುಡ್‌.