2022: ಕೆಕೆಆರ್ ಎದುರು ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ಬ್ಯಾಟಿಂಗ್ ಆಯ್ಕೆ * ಕೆಕೆಆರ್ ಎದುರು ಟಾಸ್ ಗೆದ್ದ ಗುಜರಾತ್ ಬ್ಯಾಟಿಂಗ್ ಆಯ್ಕೆ * ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ ಗುಜರಾತ್ ಟೈಟಾನ್ಸ್ * ಕೆಕೆಆರ್ ತಂಡದಲ್ಲಿ ಮೂರು ಮಹತ್ವದ ಬದಲಾವಣೆ ಮುಂಬೈ(ಏ.23): 15ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ( ) ಟೂರ್ನಿಯ 35ನೇ ಪಂದ್ಯದಲ್ಲಿಂದು ಕೋಲ್ಕತಾ ನೈಟ್ ರೈಡರ್ಸ್ ( ) ಹಾಗೂ ಗುಜರಾತ್ ಟೈಟಾನ್ಸ್ ( ) ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ತಂಡದ ನಾಯಕ ಮೊದಲು ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ. ಗುಜರಾತ್ ಟೈಟಾನ್ಸ್ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದರೆ, ಕೆಕೆಆರ್ ತಂಡದಲ್ಲಿ ಮೂರು ಮಹತ್ವದ ಬದಲಾವಣೆಗಳನ್ನು ಮಾಡಲಾಗಿದೆ. ಈ ಹೈವೋಲ್ಟೇಜ್ ಪಂದ್ಯಕ್ಕೆ ಇಲ್ಲಿನ ಡಾ. ಡಿವೈ ಪಾಟೀಲ್ ಸ್ಪೋರ್ಟ್ಸ್‌ ಅಕಾಡೆಮಿ ಆತಿಥ್ಯವನ್ನು ವಹಿಸಿದೆ. ನಿರೀಕ್ಷೆಯಂತೆಯೇ ಗುಜರಾತ್ ಟೈಟಾನ್ಸ್ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ವಿಜಯ್ ಶಂಕರ್‌ ( ) ಬದಲಿಗೆ ಹಾರ್ದಿಕ್ ಪಾಂಡ್ಯ ( ) ತಂಡ ಕೂಡಿಕೊಂಡಿದ್ದಾರೆ. ಇನ್ನೊಂದೆಡೆ ಕೋಲ್ಕತಾ ನೈಟ್ ರೈಡರ್ಸ್‌ ತಂಡದಲ್ಲಿ ಮೂರು ಬದಲಾವಣೆ ಮಾಡಲಾಗಿದ್ದು, ರಿಂಕು ಸಿಂಗ್, ಟಿಮ್ ಸೌಥಿ ಹಾಗೂ ಸ್ಯಾಮ್ ಬಿಲ್ಲಿಂಗ್ಸ್‌ ತಂಡ ಕೂಡಿಕೊಂಡಿದ್ದಾರೆ. ಕಳೆದ ಪಂದ್ಯದಲ್ಲಿ ಸ್ಪೋಟಕ ಬ್ಯಾಟಿಂಗ್ ನಡೆಸಿದ್ದ ಆರೋನ್ ಫಿಂಚ್ ಗಾಯದ ಸಮಸ್ಯೆಯಿಂದಾಗಿ ಈ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ. ಇನ್ನು ಪ್ಯಾಟ್ ಕಮಿನ್ಸ್‌ ಬದಲಿಗೆ ಟಿಮ್ ಸೌಥಿ ತಂಡ ಕೂಡಿಕೊಂಡಿದ್ದಾರೆ ಹಾರ್ದಿಕ್‌ ಪಾಂಡ್ಯ ಮುಂದಾಳತ್ವದ ಗುಜರಾತ್‌ ಟೈಟಾನ್ಸ್ ಎಲ್ಲಾ ವಿಭಾಗಗಳಲ್ಲಿಯೂ ಅಬ್ಬರಿಸುತ್ತಿದ್ದು, ಆಡಿರುವ 6 ಪಂದ್ಯಗಳಲ್ಲಿ ಕೇವಲ 1ರಲ್ಲಿ ಸೋತಿದೆ. ಇನ್ನೊಂದೆಡೆ ಶ್ರೇಯಸ್ ಅಯ್ಯರ್ ( ) ನೇತೃತ್ವದ ಕೋಲ್ಕತಾ ನೈಟ್ ರೈಡರ್ಸ್‌ ತಂಡವು ಹ್ಯಾಟ್ರಿಕ್ ಸೋಲು ಅನುಭವಿಸಿದ್ದು, ಗೆಲುವಿನ ಲಯಕ್ಕೆ ಬರಲು ಎದುರು ನೋಡುತ್ತಿದೆ. - : ರಿಷಭ್‌ ಪಂತ್‌ಗೆ 1.15 ಕೋಟಿ ರೂ ದಂಡ, ಕೋಚ್ ಆಮ್ರೆಗೂ ಭಾರೀ ಶಿಕ್ಷೆ..! ತಂಡಗಳು ಹೀಗಿವೆ ನೋಡಿ: ಗುಜರಾತ್‌ ಟೈಟಾನ್ಸ್: ವೃದ್ದಿಮಾನ್ ಸಾಹ, ಶುಭ್‌ಮನ್ ಗಿಲ್‌, ಹಾರ್ದಿಕ್ ಪಾಂಡ್ಯ‌(ನಾಯಕ), ಅಭಿನವ್ ಮನೋಹರ್‌, ಡೇವಿಡ್ ಮಿಲ್ಲರ್‌, ರಾಹುಲ್ ತೆವಾಟಿಯಾ, ರಶೀದ್ ಖಾನ್‌, ಅಲ್ಜಾರಿ ಜೋಸೆಫ್, ಲಾಕಿ ಫಗ್ರ್ಯೂಸನ್‌, ಮೊಹಮ್ಮದ್ ಶಮಿ, ಯಶ್‌ ದಯಾಳ್‌. ಕೋಲ್ಕತಾ ನೈಟ್‌ ರೈಡರ್ಸ್: ವೆಂಕಟೇಶ್ ಅಯ್ಯರ್, ಸುನಿಲ್ ನರೈನ್‌, ಶ್ರೇಯಸ್ ಅಯ್ಯರ್‌(ನಾಯಕ), ನಿತೀಶ್ ರಾಣಾ, ಆಂಡ್ರೆ ರಸೆಲ್‌, ಸ್ಯಾಮ್ ಬಿಲ್ಲಿಂಗ್ಸ್‌, ರಿಂಕು ಸಿಂಗ್‌, ಶಿವಂ ಮಾವಿ, ಟಿಮ್ ಸೌಥಿ‌, ಉಮೇಶ್‌ ಯಾದವ್, ವರುಣ್ ಚಕ್ರವರ್ತಿ‌. ಸ್ಥಳ: ನವಿ ಮುಂಬೈ, ಡಿ.ವೈ.ಪಾಟೀಲ್‌ ಸ್ಟೇಡಿಯಂಪಂದ್ಯ: ಮಧ್ಯಾಹ್ನ 3.30ಕ್ಕೆಪ್ರಸಾರ: ಸ್ಟಾರ್‌ ಸ್ಪೋರ್ಟ್ಸ್‌