: ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದಲ್ಲಿ ಒಂದು ಮಹತ್ವದ ಬದಲಾವಣೆ..? ಬೆಂಗಳೂರು: ಭಾರತ ಹಾಗೂ ವೆಸ್ಟ್ ಇಂಡೀಸ್‌ ( ) ತಂಡಗಳ ನಡುವಿನ ಎರಡನೇ ಏಕದಿನ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಸರಣಿ ಗೆಲುವಿನತ್ತ ಚಿತ್ತ ನೆಟ್ಟಿದೆ. ಈಗಾಗಲೇ ಮೊದಲ ಪಂದ್ಯ ಗೆದ್ದು ಆತ್ಮವಿಶ್ವಾಸದಿಂದ ಬೀಗುತ್ತಿರುವ ಟೀಂ ಇಂಡಿಯಾ( ), ಎರಡನೇ ಪಂದ್ಯದಲ್ಲಿ ಒಂದು ಬದಲಾವಣೆಯೊಂದಿಗೆ ಕಣಕ್ಕಿಳಿಯುವ ಸಾಧ್ಯತೆಯಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ. ಬೆಂಗಳೂರು: ಭಾರತ ಹಾಗೂ ವೆಸ್ಟ್ ಇಂಡೀಸ್‌ ( ) ತಂಡಗಳ ನಡುವಿನ ಎರಡನೇ ಏಕದಿನ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಸರಣಿ ಗೆಲುವಿನತ್ತ ಚಿತ್ತ ನೆಟ್ಟಿದೆ. ಈಗಾಗಲೇ ಮೊದಲ ಪಂದ್ಯ ಗೆದ್ದು ಆತ್ಮವಿಶ್ವಾಸದಿಂದ ಬೀಗುತ್ತಿರುವ ಟೀಂ ಇಂಡಿಯಾ( ), ಎರಡನೇ ಪಂದ್ಯದಲ್ಲಿ ಒಂದು ಬದಲಾವಣೆಯೊಂದಿಗೆ ಕಣಕ್ಕಿಳಿಯುವ ಸಾಧ್ಯತೆಯಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ. 1. ರೋಹಿತ್ ಶರ್ಮಾ:ಮೊದಲ ಏಕದಿನ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಸಿಡಿಸುವ ಮೂಲಕ ಮಿಂಚಿದ್ದ ರೋಹಿತ್ ಶರ್ಮಾ, ಸೀಮಿತ ಓವರ್‌ಗಳ ತಂಡದ ಪೂರ್ಣ ಪ್ರಮಾಣದ ನಾಯಕರಾದ ಬಳಿಕ ಮೊದಲ ಏಕದಿನ ಸರಣಿ ಗೆಲ್ಲಲು ಎದುರು ನೋಡುತ್ತಿದ್ದಾರೆ. 2. ಇಶಾನ್ ಕಿಶನ್:ಸ್ಪೋಟಕ ಎಡಗೈ ಬ್ಯಾಟರ್‌ ಇಶಾನ್‌ ಕಿಶಾನ್ ಮತ್ತೊಮ್ಮೆ ಆರಂಭಿಕ ಆಟಗಾರನಾಗಿ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚು. ಮೊದಲ ಪಂದ್ಯದಲ್ಲಿ ಕಿಶನ್ 28 ರನ್ ಬಾರಿಸಿದ್ದರು. 3. ವಿರಾಟ್ ಕೊಹ್ಲಿ:ಮಾಜಿ ನಾಯಕ ವಿರಾಟ್ ಕೊಹ್ಲಿ ಮೊದಲ ಪಂದ್ಯದಲ್ಲಿ ಒಂದಂಕಿ ಮೊತ್ತಕ್ಕೆ ವಿಕೆಟ್ ಒಪ್ಪಿಸಿದ್ದರು. ಇಂದಿನ ಪಂದ್ಯದಲ್ಲಾದರೂ ಕಿಂಗ್ ಕೊಹ್ಲಿ ಮೂರಂಕಿ ಮೊತ್ತ ದಾಖಲಿಸುತ್ತಾರಾ ಎನ್ನುವುದನ್ನು ಕಾದು ನೋಡಬೇಕಿದೆ. 4. ಕೆ.ಎಲ್‌. ರಾಹುಲ್:ವೈಯುಕ್ತಿಕ ಕಾರಣದಿಂದಾಗಿ ಮೊದಲ ಪಂದ್ಯದಿಂದ ಹೊರಗುಳಿದಿದ್ದ ರಾಹುಲ್, ಇದೀಗ ಎರಡನೇ ಪಂದ್ಯದಲ್ಲಿ ತಂಡ ಕೂಡಿಕೊಳ್ಳಲಿದ್ದಾರೆ. ಹೀಗಾಗಿ ದೀಪಕ್ ಹೂಡಾ ಬೆಂಚ್ ಕಾಯಿಸಬೇಕಾಗಬಹುದು 5. ಸೂರ್ಯಕುಮಾರ್ ಯಾದವ್:ಟೀಂ ಇಂಡಿಯಾದ ಮಧ್ಯಮ ಕ್ರಮಾಂಕದ ಬ್ಯಾಟರ್‌ ಸೂರ್ಯಕುಮಾರ್ ಯಾದವ್, ಮೊದಲ ಪಂದ್ಯದಲ್ಲಿ ಜವಾಬ್ದಾರಿಯುತ ಬ್ಯಾಟ್ ಬೀಸಿದ್ದರು. ಸೂರ್ಯ ಅಜೇಯ 34 ರನ್‌ ಬಾರಿಸಿದ್ದರು. 6. ರಿಷಭ್ ಪಂತ್:ಟೀಂ ಇಂಡಿಯಾ ವಿಕೆಟ್‌ ಕೀಪರ್‌ ಬ್ಯಾಟರ್‌ ರಿಷಭ್‌ ಪಂತ್, ಕಳೆದ ಪಂದ್ಯದಲ್ಲಿ ರನೌಟ್ ಆಗುವ ಮೂಲಕ ನಿರಾಸೆ ಅನುಭವಿಸಿದ್ದರು. ಮಧ್ಯಮ ಕ್ರಮಾಂಕದಲ್ಲಿ ಪಂತ್ ಅಬ್ಬರಿಸಿದರೇ ಟೀಂ ಇಂಡಿಯಾ ಬೃಹತ್ ಮೊತ್ತ ಕಲೆಹಾಕಬಹುದು. 7. ಶಾರ್ದೂಲ್ ಠಾಕೂರ್:ವೇಗಿ ಶಾರ್ದೂಲ್ ಠಾಕೂರ್ ಕಳೆದ ಪಂದ್ಯದಲ್ಲಿ ಹೆಚ್ಚಿನ ಕಮಾಲ್ ಮಾಡಲು ಸಾಧ್ಯವಾಗಿರಲಿಲ್ಲ. ಇದೀಗ ಎರಡನೇ ಪಂದ್ಯದಲ್ಲಿ ಮಿಂಚಲು ಠಾಕೂರ್ ಎದುರು ನೋಡುತ್ತಿದ್ದಾರೆ.( - ) 8. ವಾಷಿಂಗ್ಟನ್ ಸುಂದರ್:ತಮಿಳುನಾಡು ಮೂಲದ ಆಫ್‌ ಸ್ಪಿನ್ನರ್‌ ವಾಷಿಂಗ್ಟನ್ ಸುಂದರ್ ಕಳೆದ ಪಂದ್ಯದಲ್ಲಿ ಪ್ರಮುಖ ಮೂರು ವಿಕೆಟ್ ಕಬಳಿಸಿ ಮಿಂಚಿದ್ದರು. ಇದೀಗ ಮತ್ತದೇ ಪ್ರದರ್ಶನ ತೋರಲು ಎದುರು ನೋಡುತ್ತಿದ್ದಾರೆ. 9. ಯುಜುವೇಂದ್ರ ಚಹಲ್‌:ಅನುಭವಿ ಲೆಗ್‌ ಸ್ಪಿನ್ನರ್‌ ಯುಜುವೇಂದ್ರ ಚಹಲ್‌, ಮೊದಲ ಏಕದಿನ ಪಂದ್ಯದಲ್ಲಿ 4 ವಿಕೆಟ್ ಕಬಳಿಸುವ ಮೂಲಕ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದರು. ಅದೇ ಫಾರ್ಮ್‌ ಮುಂದುವರೆಸಿಕೊಂಡು ಹೋಗಲು ಎದುರು ನೋಡುತ್ತಿದ್ದಾರೆ. 10. ಪ್ರಸಿದ್ದ್ ಕೃಷ್ಣ:ಕರ್ನಾಟಕ ಮೂಲದ ನೀಳಕಾಯದ ವೇಗಿ ಪ್ರಸಿದ್ಧ್ ಕೃಷ್ಣ ಮೊದಲ ಪಂದ್ಯದಲ್ಲಿ 2 ವಿಕೆಟ್ ಕಬಳಿಸಿ ಮಿಂಚಿದ್ದರು. ಪ್ರಸಿದ್ಧ್ ಅವರಿಂದ ಮತ್ತೊಮ್ಮೆ ತಂಡ ಶಿಸ್ತುಬದ್ದ ಬೌಲಿಂಗ್ ನಿರೀಕ್ಷೆ ಮಾಡುತ್ತಿದೆ. 11. ಮೊಹಮ್ಮದ್‌ ಸಿರಾಜ್: ವೇಗಿ ಸಿರಾಜ್ ಕೂಡಾ ಮೊದಲ ಪಂದ್ಯದಲ್ಲಿ ಪರಿಣಾಮಕಾರಿ ಬೌಲಿಂಗ್ ನಡೆಸುವಲ್ಲಿ ಯಶಸ್ವಿಯಾಗಿದ್ದಾರೆ. ಆರಂಭದಲ್ಲೇ ತಂಡಕ್ಕೆ ವಿಕೆಟ್‌ ಕಬಳಿಸುವ ಕ್ಷಮತೆ ಹೊಂದಿದ್ದಾರೆ.