: ಕರ್ನಾಟಕ ಮೂಲದ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ದುರ್ಮರಣ..! 1971ರ ಅಕ್ಟೋಬರ್ 16ರಂದು ಹಾಸನ ಜಿಲ್ಲೆಯ ಅರಸಿಕೆರೆಯಲ್ಲಿ ಜನಿಸಿದ ಡೇವಿಡ್ ಜಾನ್ಸನ್, ಟೀಂ ಇಂಡಿಯಾ ಪರ ಎರಡು ಟೆಸ್ಟ್ ಪಂದ್ಯಗಳನ್ನಾಡಿ ಮೂರು ವಿಕೆಟ್ ಕಬಳಿಸಿದ್ದರು. ಆ ಕಾಲಘಟ್ಟದಲ್ಲಿ ಟೀಂ ಇಂಡಿಯಾ ಪರ ಅತಿವೇಗದ ಬೌಲಿಂಗ್ ಮಾಡಿದ ದಾಖಲೆ ಡೇವಿಡ್ ಜಾನ್ಸನ್ ಅವರ ಹೆಸರಿನಲ್ಲಿತ್ತು. ಬೆಂಗಳೂರು: ಕರ್ನಾಟಕ ಮೂಲದ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಡೇವಿಡ್ ಜಾನ್ಸನ್, ಇಂದು ಕೊನೆಯುಸಿರೆಳೆದಿದ್ದಾರೆ. 52 ವರ್ಷದ ಡೇವಿಡ್ ಜಾನ್ಸನ್, ಮನೆಯ ಮಹಡಿಯಿಂದ ಜಾರಿ ಬಿದ್ದು ಕೊನೆಯುಸಿರೆಳೆದಿದ್ದಾರೆ ಎನ್ನಲಾಗುತ್ತಿದೆ. ಕೊತ್ತನೂರು ಠಾಣಾ ವ್ಯಾಪ್ತಿಯಲ್ಲಿರುವ ಕನಕಶ್ರೀ ಲೇಔಟ್‌ನಲ್ಲಿರುವ ಪ್ಯಾರಡೈಸ್‌ನಲ್ಲಿ ಈ ದುರ್ಘಟನೆ ಸಂಭವಿಸಿದೆ. ಇಂದು ಬೆಳಗ್ಗೆ 11.15ರ ಸುಮಾರಿಗೆ ಈ ದುರ್ಘಟನೆ ಸಂಭವಿಸಿದ್ದು, ಕುಟುಂಬಸ್ಥರು ಮನೆಯಲ್ಲಿರುವಾಗಲೇ ಈ ಘಟನೆ ನಡೆದಿದೆ. ಈ ಘಟನೆ ಬೆಳಕಿಗೆ ಬರುತ್ತಿದ್ದಂತೆಯೇ ಸ್ಥಳಕ್ಕೆ ಕೊತ್ತನೂರು ಪೊಲೀಸರು ಭೇಟಿನೀಡಿ, ಮೃತದೇಹವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಡೇವಿಡ್ ಜಾನ್ಸನ್ ಅವರು, ಆತ್ಮಹತ್ಯೆ ಮಾಡಿಕೊಂಡಿದ್ದಾರೆಯೇ ಎನ್ನುವ ಶಂಕೆ ವ್ಯಕ್ತವಾಗುತ್ತಿದೆ. ಸದ್ಯ ಕೊತ್ತನೂರು ಪೊಲೀಸರು ಈ ಘಟನೆಯ ಸಂಬಂಧ ಹೆಚ್ಚಿನ ಮಾಹಿತಿಯನ್ನು ಕಲೆಹಾಕುತ್ತಿದ್ದಾರೆ. ಇನ್ನು ಡೇವಿಡ್ ಜಾನ್ಸನ್ ನಿಧನಕ್ಕೆ ಕ್ರಿಕೆಟ್ ವಲಯದಿಂದ ಸಂತಾಪಗಳು ವ್ಯಕ್ತವಾಗಿವೆ. ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ, ಹಿರಿಯ ಕ್ರಿಕೆಟಿಗನ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ. . . “ ”! 1971ರ ಅಕ್ಟೋಬರ್ 16ರಂದು ಹಾಸನ ಜಿಲ್ಲೆಯ ಅರಸಿಕೆರೆಯಲ್ಲಿ ಜನಿಸಿದ ಡೇವಿಡ್ ಜಾನ್ಸನ್, ಟೀಂ ಇಂಡಿಯಾ ಪರ ಎರಡು ಟೆಸ್ಟ್ ಪಂದ್ಯಗಳನ್ನಾಡಿ ಮೂರು ವಿಕೆಟ್ ಕಬಳಿಸಿದ್ದರು. ಆ ಕಾಲಘಟ್ಟದಲ್ಲಿ ಟೀಂ ಇಂಡಿಯಾ ಪರ ಅತಿವೇಗದ ಬೌಲಿಂಗ್ ಮಾಡಿದ ದಾಖಲೆ ಡೇವಿಡ್ ಜಾನ್ಸನ್ ಅವರ ಹೆಸರಿನಲ್ಲಿತ್ತು. 1996ರಲ್ಲಿ ಭಾರತ ಟೆಸ್ಟ್ ತಂಡಕ್ಕೆ ಪಾದಾರ್ಪಣೆ ಮಾಡಿದ್ದ ಡೇವಿಡ್ ಜಾನ್ಸನ್, ಆಸ್ಟ್ರೇಲಿಯಾ ತಂಡವು ಭಾರತ ಪ್ರವಾಸ ಮಾಡಿದ್ದಾಗ ಟೀಂ ಇಂಡಿಯಾ ಪರ ಕಣಕ್ಕಿಳಿದಿದ್ದರು. ಆ ಸರಣಿಯಲ್ಲಿ ಡೇವಿಡ್ ಜಾನ್ಸನ್ ಗಂಟೆಗೆ 157.8 ಕಿಲೋ ಮೀಟರ್ ವೇಗದಲ್ಲಿ ಬೌಲಿಂಗ್ ಮಾಡಿ ಆಸ್ಟ್ರೇಲಿಯಾದ ಮೈಕಲ್ ಸ್ಲೇಟರ್ ಅವರನ್ನು ಬಲಿ ಪಡೆಯುವಲ್ಲಿ ಯಶಸ್ವಿಯಾಗಿದ್ದರು. , 1996, . . 52.../WuRi7xzq6U ಇನ್ನು ಡೇವಿಡ್ ಜಾನ್ಸನ್‌ ಒಟ್ಟು 39 ಪ್ರಥಮ ದರ್ಜೆ ಕ್ರಿಕೆಟ್ ಪಂದ್ಯಗಳನ್ನಾಡಿ 125 ವಿಕೆಟ್ ಕಬಳಿಸಿ ಮಿಂಚಿದ್ದರು. ಇನ್ನು ಕೆಳಕ್ರಮಾಂಕದಲ್ಲಿ ಉಪಯುಕ್ತ ಬ್ಯಾಟರ್ ಆಗಿ ಗುರುತಿಸಿಕೊಂಡಿದ್ದ ಜಾನ್ಸನ್ 437 ರನ್ ಬಾರಿಸಿದ್ದಾರೆ.