ಅಕುಲ್​- ಅನುಶ್ರೀ ರೊಮಾನ್ಸ್​​: ವಿಡಿಯೋ ನೋಡಿ ಒನ್ಸ್​ ಮೋರ್​ ಒನ್ಸ್​ ಮೋರ್​ ಅಂತಿರೋ ಅಭಿಮಾನಿಗಳು ಆ್ಯಂಕರ್​ಗಳಾದ ಅಕುಲ್ ಬಾಲಾಜಿ ಮತ್ತು ಅನುಶ್ರೀ ರಾಜಾ-ರಾಣಿಯಾಗಿ ರೊಮ್ಯಾನ್ಸ್​ ಮಾಡಿದ್ದು, ಇದನ್ನು ನೋಡಿದ ಅಭಿಮಾನಿಗಳು ಫಿದಾ ಆಗಿದ್ದಾರೆ. ಕನ್ನಡ ಕಿರುತೆರೆ ಜನಪ್ರಿಯ ನಿರೂಪಕಿ ಕಮ್ ಸ್ಯಾಂಡಲ್‌ವುಡ್‌ ನಟಿ ( ) ಅನುಶ್ರೀ ಮನೆಮಾತಾಗಿರುವ ನಟಿ. ಆ್ಯಂಕರ್​ ಅನುಶ್ರೀ ಎಂದರೆ ಅಲ್ಲಿ ನಗುವಿರಲೇ ಬೇಕು. ತಮ್ಮ ಹಾಸ್ಯದ ಧಾಟಿಯಿಂದ ಆ್ಯಂಕರಿಂಗ್​ ಮಾಡುವಲ್ಲಿ ಅನುಶ್ರೀ ಸಕತ್​ ಫೇಮಸ್​. ಅದ್ಭುತವಾಗಿ ಕಾರ್ಯಕ್ರಮ ನಿರೂಪಣೆಯ ಜೊತೆಗೆ ಸಂಗೀತ, ನೃತ್ಯದಿಂದಲೂ ಮನರಂಜಿಸುವ ಅನುಶ್ರೀ ಸದ್ಯ ಸರಿಗಮಪ ಸಂಗೀತದ ರಿಯಾಲಿಟಿ ಷೋನಲ್ಲಿ ಬಿಜಿಯಾಗಿದ್ದಾರೆ. ತಮ್ಮ ಚಟಪಟ ಮಾತಿನಿಂದಾಗಿ ಅನುಶ್ರೀ ಅವರು ಅಭಿಮಾನಿಗಳ ಮನ ಗೆದ್ದಿದ್ದಾರೆ. ಅವರು ಟಿವಿ ಶೋಗಳನ್ನು ನಡೆಸಿಕೊಡುವ ಶೈಲಿಗೆ ವೀಕ್ಷಕರು ಫಿದಾ ಆಗಿದ್ದಾರೆ. ಕಿರುತೆರೆಯಲ್ಲಿ ಅನುಶ್ರೀ ಅವರಿಗೆ ಹಲವು ವರ್ಷಗಳ ಅನುಭವ ಇದೆ. ಹಲವು ರಿಯಾಲಿಟಿ ಶೋಗಳನ್ನು ಯಶಸ್ವಿಯಾಗಿ ನಡೆಸಿಕೊಟ್ಟ ಖ್ಯಾತಿ ಅವರಿಗಿದೆ. ತಮ್ಮ ಅದ್ಭುತ ನಿರೂಪಣಾ ಶೈಲಿಯಿಂದ ಇದಾಗಲೇ ಹಲವಾರು ಪ್ರಶಸ್ತಿಗಳನ್ನು ಗೆದ್ದಿದ್ದಾರೆ. 2023ರಲ್ಲಿ ಅನುಶ್ರೀ ಅವರಿಗೆ ಹಲವಾರು ಪ್ರಶಸ್ತಿಗಳೂ ಸಂದಿವೆ. ಇದೀಗ ಅನುಶ್ರೀ ಅವರು ಆ್ಯಂಕರ್​ ಅಕುಲ್​ ಬಾಲಾಜಿ ಜೊತೆ ರೊಮ್ಯಾನ್ಸ್​ ಮಾಡಿದ್ದು, ಅದರ ವಿಡಿಯೋ ವೈರಲ್​ ಆಗಿದೆ. ಅರುಂಧತಿ ಮತ್ತು ಪಶುಪತಿಯಾಗಿ ಅನುಶ್ರೀ ಅಕುಲ್ ಕಾಣಿಸಿಕೊಂಡಿದ್ದು ಇದರಲ್ಲಿ ಇಬ್ಬರೂ ರಾಜ-ರಾಣಿ ವೇಷ ತೊಟ್ಟು ರೊಮ್ಯಾನ್ಸ್​ ಮಾಡಿದ್ದಾರೆ. ಇದನ್ನು ನೋಡಿ ಅಭಿಮಾನಿಗಳು ಸಕತ್​ ಖುಷಿ ಪಟ್ಟಿದ್ದಾರೆ. ಇದರಲ್ಲಿ ಅನುಶ್ರೀ ಅವರು ರಾಣಿಯಂತೆ ಕಂಗೊಳಿಸುತ್ತಿದ್ದರೆ, ಅಕುಲ್​ ರಾಜನಾಗಿದ್ದಾರೆ. ಈ ಷೋ ನಡೆದಿದ್ದು, ಕಾಮಿಡಿ ಕಿಲಾಡಿಗಳು ಪ್ರೀಮಿಯರ್​ ಲೀಗ್​ಗೆ. ತಮ್ಮನ್ನು ಈ ಫೀಲ್ಡ್​ಗೆ ತಂದವರೇ ಅಕುಲ್​ ಎಂದು ಹಿಂದೊಮ್ಮೆ ಅನುಶ್ರೀ ಹೇಳಿಕೊಂಡಿದ್ದರು. ಅಕುಲ್​ ಅವರೆಂದರೆ ಅನುಶ್ರೀ ಅವರಿಗೆ ಅಪಾರ ಅಭಿಮಾನ. ಇಂದು ಇಬ್ಬರೂ ಆ್ಯಂಕರಿಂಗ್​ ಕ್ಷೇತ್ರದಲ್ಲಿ ಸಕತ್​ ಫೇಮಸ್​. ಮದುವೆಯಾಗೋಕೆ ಇಷ್ಟವೇ ಇಲ್ಲ ಎನ್ನುತ್ತಲೇ ಕಾರಣ ಬಿಚ್ಚಿಟ್ಟ ಆ್ಯಂಕರ್​ ಅನುಶ್ರೀ: ಫ್ಯಾನ್ಸ್​ ಶಾಕ್​! ಮಂಗಳೂರು ಮೂಲದ ಅನುಶ್ರೀ, ನಮ್ಮ ಟಿವಿ ಚಾನೆಲ್ ನಲ್ಲಿ ಅಂತ್ಯಾಕ್ಷರಿ ಮ್ಯೂಸಿಕ್ ಶೋ ಮೂಲಕ ಟಿವಿ ಜರ್ನಿ ಶುರು ಮಾಡಿದರು. ಯಲ್ಲಿ ಶುರು ಮಾಡಿದ ‘ಡಿಮ್ಯಾಂಡಪ್ಪೋ ಡಿಮ್ಯಾಂಡ್’ ಇವರಿಗೆ ಸಿಕ್ಕಾಪಟ್ಟೆ ಡಿಮ್ಯಾಂಡನ್ನು ತಂದು ಕೊಟ್ಟಿತು. ಸರಿಗಮಪ, ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್, ಕುಣಿಯೋಣು ಬಾರಾ, ಕಾಮಿಡಿ ಕಿಲಾಡಿಗಳು ಸೇರಿದಂತೆ ಸಾಕಷ್ಟು ರಿಯಾಲಿಟಿ ಶೋಗಳನ್ನು ನಡೆಸಿಕೊಟ್ಟಿದ್ದಾರೆ. ‘ಬೆಂಕಿಪೊಟ್ಣ’ ಸಿನಿಮಾ ಇವರ ಮೊದಲ ಸಿನಿಮಾ. ಈ ಚಿತ್ರದಲ್ಲಿ, ಮೀಡಿಯಾದಿಂದ ಅವಾರ್ಡ್ ಪಡೆದರು. ‘ಮುರಳಿ ಮೀಟ್ಸ್ ಮೀರಾ’ ಸಿನಿಮಾಗಾಗಿ ಕರ್ನಾಟಕ ಸ್ಟೇಟ್ ಫಿಲ್ಮ್ ಅವಾರ್ಡ್ ಪಡೆದಿದ್ದಾರೆ. ಅನುಶ್ರೀ ಆ್ಯಂಕರ್ ಎಂಬ ಯೂಟ್ಯೂಬ್ ಚಾನಲ್ ಆರಂಭಿಸಿರುವ ಅನುಶ್ರೀ ಇದರಲ್ಲಿ ಸಿನಿಮಾ ತಾರೆಯರ ಸಂದರ್ಶನ ಮಾಡುತ್ತಾರೆ. ಇನ್ನು ಅಕುಲ್‌ ಬಾಲಾಜಿ ಕೂಡ ಆ್ಯಂಕರ್​ ನಿಂಗ್‌ನಲ್ಲಿ ಸಕತ್‌ ಫೇಮಸ್‌. ಅಗಥ, ಗುಪ್ತ ಗಾಮಿನಿ, ಯಾವ ಜನ್ಮದ ಮೈತ್ರಿ, ಜಗಳಗಂಟಿಯರು ಸೇರಿದಂತೆ ಕೆಲ ಕನ್ನಡ ಮತ್ತು ತೆಲುಗು ಧಾರಾವಾಹಿಗಳಲ್ಲಿ ಅಭಿನಯಿಸಿದ್ದಾರೆ. ಹಳ್ಳಿ ಹೈದ ಪ್ಯಾಟೆಗ್ ಬಂದ, ಪ್ಯಾಟೆ ಮಂದಿ ಕಾಡಿಗ ಬಂದ್ರು ಸೇರಿದಂತೆ 30ಕ್ಕೂ ಹೆಚ್ಚು ಟಿವಿ ಕಾರ್ಯಕ್ರಮಗಳನ್ನು ನಿರೂಪಣೆ ಮಾಡಿದ್ದಾರೆ. 2007 ರಲ್ಲಿ ತೆರೆಕಂಡ `ಮಿಲನ’ ಚಿತ್ರದಲ್ಲಿ ಅತಿಥಿ ಪಾತ್ರದಲ್ಲಿ ನಟಿಸುವ ಮೂಲಕ ಬೆಳ್ಳಿ ಪರದೆಗೆ ಎಂಟ್ರಿಕೊಟ್ಟಿರುವ ಅಕುಲ್‌ ಅವರು, 2008 ರಲ್ಲಿ ತೆರೆಕಂಡ `ಆತ್ಮೀಯ’ ಚಿತ್ರದ ಮೂಲಕ ನಾಯಕ ನಟನಾಗಿದ್ದಾರೆ. ವಾಸ್ತವ, ನೆರಮು, ಬನ್ನಿ, ಮೈನ, ಪ್ಯಾರ್ಗೆ ಆಗ್ಬಿಟ್ಟೈತೆ, ಲೂಸ್​ಗಳು, ಕ್ರೇಜಿಸ್ಟಾರ್ ಚಲನಚಿತ್ರಗಳಲ್ಲಿ ನಟಿಸಿದ್ದಾರೆ. ನನ್​ ಸನಿಹ ಬಂದ್ರೆ ನಿಮ್ಗೆ ಏನೂ ಅನಿಸಲ್ವಾ..? ಭೂಮಿಯ ಮೆಲ್ಲುಸುರಿಗೆ ಡುಮ್ಮ ಸರ್​ ಫ್ಲ್ಯಾಟ್​- ಮುಂದೆ? (@akul_balaji)